ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ ಗ್ಯಾರಂಟಿ ಯೋಜನೆಗಳ ಟೀಕೆ ಕೇಳಿಬಂದಿದೆ. ಇದಕ್ಕೆ ಇಂದು ಸಿದ್ಧಾಪುರದಲ್ಲಿ ಪ್ರತಿಕ್ರೀಯಿಸಿದ ಶಾಸಕ ಭೀಮಣ್ಣ ನಾಯ್ಕ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಸರ್ಕಾರ ನಡೆಸುತ್ತಿರುವ ಬಿ.ಜೆ.ಪಿ. ಇಲ್ಲಿ ಯಾವ ಮುಖ, ನೈತಿಕತೆ ಇಟ್ಟುಕೊಂಡು ಪ್ರತಿಭಟಿಸುತ್ತಿದೆ, ವಿರೋಧಿಸುತ್ತಿದೆ ಎಂದು ಕೇಳಿದ್ದಾರೆ.

ದನದ, ಶವದ ರಾಜಕಾರಣ ಮಾಡುವ ಬಿ.ಜೆ.ಪಿ.ರೈತಬೆಳೆಯುವ ಹಾಲಿನದರ ಏರಿಸಿದರೆ ಕಿರುಚಾಡುತ್ತಿದೆ, ರೈತ ವಿರೋಧಿ, ಜಾನುವಾರು ವಿರೋಧಿ ಬಿ.ಜೆ.ಪಿ. ಜನಸಾಮಾನ್ಯರ ಗ್ಯಾರಂಟಿ ಯೋಜನೆ ಟೀಕಿಸುವುದು ಅವರ ಆದ್ಯತೆ, ಉದ್ದೇಶವನ್ನು ಪ್ರತಿಬಿಂಬಿಸುತ್ತದೆ ಎಂದು ಟಾಂಗ್‌ ನೀಡಿದ್ದಾರೆ.

* ಸಿದ್ದಾಪುರ ಸೇರಿದಂತೆ ಉತ್ತರ ಕನ್ನಡ ಶಿವಮೊಗ್ಗ ಜಿಲ್ಲೆಗಳ ಪ್ರಮುಖ ಬುಡಕಟ್ಟು ಸಮೂದಾಯ ಖರೆ ಒಕ್ಕಲಿಗರ ಸಮೂದಾಯ ಭವನದ ಶಂಕುಸ್ಥಾಪನೆ ಇಂದು ಸಿದ್ಧಾಪುರ ಕೋಲಶಿರ್ಸಿ ಹಲಗಡೆಕೊಪ್ಪದಲ್ಲಿ ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದ ಶಿಸ್ತು, ನೆರೆದ ಜನಸಮೂಹ ಒಕ್ಕಲಿಗರ ಒಗ್ಗಟ್ಟು ಪ್ರದರ್ಶನದ ಜೊತೆಗೆ ಅವರ ಸಾಮರ್ಥ್ಯ ಬಿಂಬಿಸಿತು.

* ಮಿನಿಟ್ಯಾಕ್ಟರ್‌, ಪೈಪ್‌, ಟಿಲ್ಲರ್‌ ಗಳನ್ನು ನೀಡುವ ಕೃಷಿ ಇಲಾಖೆಯ ಕಾರ್ಯಕ್ರಮ ಸರಳವಾಗಿ ನಡೆಯಿತು. ಶಾಸಕ ಭೀಮಣ್ಣ ನಾಯ್ಕ ರೈತರಿಗೆ ಸೌಲಭ್ಯ ವಿತರಿಸಿ ಅವುಗಳ ಸದ್ಭಳಕೆಗೆ ಸಲಹೆ ನೀಡಿದರು.

ಪತ್ರಕರ್ತ ಶಿವಶಂಕರ್‌ ಕೋಲಶಿರ್ಸಿ ಸ್ಮರಣಾರ್ಥ ಬೇಸಿಗೆ ಶಿಬಿರ ಇಂದು ಕೋಲಶಿರ್ಸಿ ಹಿ.ಪ್ರಾ.ಶಾಲೆಯಲ್ಲಿ ಪ್ರಾರಂಭವಾಯಿತು. ಆಧಾರ್‌ ಸಂಸ್ಥೆ ಸಂಘಟಿಸಿರುವ ಈ ಶಿಬಿರದ ಉದ್ಘಾಟನೆಯ ವೇಳೆ ಶಿವಶಂಕರ್ ಕಟ್ರನ್‌ ಸ್ಮರಿಸಲಾಯಿತು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *