ಸರಳತೆಯಿಂದ ಗಮನ ಸೆಳೆದ ಉಪರಾಷ್ಟ್ರಪತಿ ಜಗದೀಪ ಧನಕರ್!‌

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಉಪಸ್ಥಿತಿಯ ಸಿದ್ದಾಪುರದ ಬಹುನಿರೀಕ್ಷಿತ ಕಾರ್ಯಕ್ರಮ ನುಡಿನಮನ ಇಂದು ಸಂಪನ್ನವಾಯಿತು.

ಹಿರಿಯ ವಕೀಲ ಎನ್‌,ಡಿ.ನಾಯ್ಕ ರ ಪತ್ನಿ, ಉಪ ರಾಷ್ಟ್ರಪತಿಗಳ ವಿಶೇಶ ಅಧಿಕಾರಿ ರಾಜೇಶ್‌ ಎನ್.‌ ನಾಯ್ಕರ ತಾಯಿ ಲಕ್ಷ್ಮೀ ನಾರಾಯಣ ನಾಯ್ಕ ನಿಧನದ ಹಿನ್ನೆಲೆಯಲ್ಲಿ ಉಪರಾಷ್ಟ್ರಪತಿಗಳು ಅವರ ಕುಟುಂಬಕ್ಕೆ ಸಾಂತ್ವನ ಹೇಳುವ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಲ್ಲಾಡಳಿತದ ಸಹಕಾರದೊಂದಿಗೆ ಎನ್.ಡಿ. ನಾಯ್ಕರ ಕುಟುಂಬ ಸಿದ್ಧಾಪುರ ಎ.ಪಿ.ಎಂ.ಸಿ. ಇಂದಿರಾ ನಗರದಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ನೂರಕ್ಕೂ ಹೆಚ್ಚು ಗಣ್ಯರ ಸಮ್ಮುಖದಲ್ಲಿ ಉಪರಾಷ್ಡ್ರಪತಿಗಳು ವೃಕ್ಷಾರೋಪಣ ಮಾಡುವ ಮೂಲಕ ಲಕ್ಷ್ಮೀ ನಾಯಕರ ನೆನಪನ್ನು ಚಿರಸ್ಥಾಯಿಯಾಗಿಸಿದರು.

ರಾಜೇಶ್‌ ನಾಯ್ಕರ ಕುಟುಂಬ ಪರಿವಾರ, ಸಂಬಂಧಿಗಳು ಅಧಿಕಾರಿ ವರ್ಗ,ನ್ಯಾಯಾಧೀಶರು, ನ್ಯಾಯವಾದಿಗಳೆಲ್ಲಾ ಸೇರಿದ್ದ ಈ ಕಾರ್ಯಕ್ರಮದಲ್ಲಿ ಲಕ್ಷ್ಮೀ ನಾಯ್ಕರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ವಂದನೆ ಮಾಡಿದರು.

ಬಿಗಿ ಪೊಲೀಸ್‌ ಭದ್ರತೆಯ ನಡುವೆ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಿರಿಯ ಅಧಿಕಾರಿ ವರ್ಗ ಸೇರಿದಂತೆʻಅನೇಕ ವಿಶೇಶ ಗಣ್ಯರು ಉಪಸ್ಥಿತರಿದ್ದರು.

ಸರ್ವರನ್ನೂ ನಮಸ್ಕರಿಸುತ್ತಾ ಫೋಟೋ, ಸೆಲ್ಫಿಗಳಿಗೂ ಪೋಜು ನೀಡಿದ ಉಪರಾಷ್ಟ್ರಪತಿಗಳ ಸರಳತೆ ಜನಮಾನಸ ಗೆದ್ದಿತು. ಉಪಸ್ಥಿತ ಗಣ್ಯರಿಗೆ ಗಿಡ ವಿತರಿಸುವ ಮೂಲಕ ಕಾರ್ಯಕ್ರಮ ಸಂಘಟಕರು ಏಕ್‌ ಪೇಡ್‌ ಮಾಕಿ ನಾಮ್‌ ಪೆ ಸಾಕಾರಗೊಳಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

3 Comments

Leave a Reply

Your email address will not be published. Required fields are marked *