ಅಭಿವೃದ್ಧಿಯೇ ಉತ್ತರ ಎಂದ ಭೀಮಣ್ಣ…ಯಾರ ಹೆಸರನ್ನೂ ಹೇಳದೆ ರಾಜಕೀಯ ವಿರೋಧಿಸಿದ ಶಾಸಕ!

ಪಕ್ಷ, ರಾಜಕೀಯ ಚುನಾವಣೆಯ ಭಾಗ ಅಭಿವೃದ್ಧಿಗೆ ಪಕ್ಷ, ರಾಜಕೀಯ ಅಡ್ಡಿ ಆಗಬಾರದು ಎಂದು ಶಿರಸಿ-ಸಿದ್ಧಾಪುರ ಶಾಸಕ ಭೀಮಣ್ಣ ನಾಯ್ಕ ಹೇಳಿದರು. ಸಿದ್ಧಾಪುರದಲ್ಲಿ ಪ.ಪಂ. ನ ವಿವಿಧ ವಾರ್ಡ್‌ ಗಳಲ್ಲಿ ೨ಕೋಟಿ ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿ ವಾಜಪೇಯಿ ಬಡಾವಣೆಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು.

ನಾವು ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಮಾಡುವುದಿಲ್ಲ. ಪಕ್ಷ ನೋಡುವುದಿಲ್ಲ ಪಕ್ಷ, ರಾಜಕೀಯಗಳೇನಿದ್ದರೂ ಚುನಾವಣೆಯಲ್ಲಿ ಅಭಿವೃದ್ಧಿಯ ವಿಷಯ ಬಂದಾಗ ಅವೆಲ್ಲಾ ಗೌಣ ಎಂದರು.

ಯಾರನ್ನೂ ಗುರಿಯಾಗಿಸದೆ ವಿರೋಧಿಗಳು, ಬಿ.ಜೆ.ಪಿ.ಯ ಕೆಲವು ಮುಖಂಡರ ಟೀಕೆಗಳಿಗೆ ಉತ್ತರಿಸಿದಂತೆ ಮಾತನಾಡಿದ ಅವರು ಸಿದ್ಧಾಪುರದಲ್ಲಿ ಮೂಲಭೂತ ಸೌಕರ್ಯಗಳಾದ ನೀರು, ರಸ್ತೆ, ಶಿಕ್ಷಣ ಗಳಿಗೆ ಆದ್ಯತೆ ನೀಡಿದ್ದೇನಿ. ಸಿದ್ಧಾಪುರಕ್ಕೆ ಕುಡಿಯುವ ನೀರಿನ ಯೋಜನೆ, ರಸ್ತೆಗಳ ಅಭಿವೃದ್ಧಿಗೆ ಅನುದಾನ, ಶಾಲೆಗಳ ಮೂಲಸೌಕರ್ಯಕ್ಕೆ ಆದ್ಯತೆ ನೀಡಿದ್ದೇನೆ. ಈಗ ಮೂರು ಕೋಟಿಗಳ ವಿಶೇಶ ಅನುದಾನದ ಒಟ್ಟೂ ೧೧ ಕಾಮಗಾರಿಗಳಲ್ಲಿ ೭ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದ್ದೇನಿ. ಇ ಖಾತಾದ ಎ, ಬಿ, ಖಾತಾಗಳ ಪ್ರಯೋಜನ ಪಡೆಯಲು ತಿಳುವಳಿಕೆ ನೀಡಿದ್ದೇವೆ ಈಗಲೂ ಕಾಲಮಿತಿ ವಿಸ್ತರಣೆಗೆ ಸರ್ಕಾರಕ್ಕೆ ಮನವಿ ಮಾಡಿದ್ದೇನೆ. ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಂಡು ಅಭಿವೃದ್ಧಿ ಹೊಂದುವಂತೆ ಮಾಡುವ ಪ್ರಾಮಾಣಿಕ ಕೆಲಸ ನಮ್ಮ ಸರ್ಕಾರದಿಂದ ಆಗುತ್ತಿದೆ ಎಂದು ವಿವರಿಸಿದರು.

ಇದೇ ಸಂದರ್ಭದಲ್ಲಿ ವಸತಿ ಯೋಜನೆ, ಇ ಖಾತಾ ಕಾಲಮಿತಿ ವಿಸ್ತರಣೆಗೆ ಸಹಕರಿಸಲು ಪ.ಪಂ. ಹಿರಿಯ ಸದಸ್ಯ ಕೆ.ಜಿ. ನಾಯ್ಕ ಮನವಿ ಮಾಡಿದರು. ಇ ಖಾತಾ ಫಲಾನುಭವಿಗಳ ಹಕ್ಕು ಪತ್ರ ವಿತರಿಸಲಾಯಿತು.

ಸಿದ್ಧಾಪುರ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ…..

. ಸಿದ್ದಾಪುರ: ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕರಾದ ಭೀಮಣ್ಣ ನಾಯ್ಕ ಸೋಮವಾರ ಸಿದ್ದಾಪುರ ಪಟ್ಟಣ ಪಂಚಾಯತ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಪಟ್ಟಣ ಪಂಚಾಯತ ವಾರ್ಡ್ ನಂ 1ರ ರವೀಂದ್ರನಗರ ಜೆಎಂಎಫ್ ಸಿ ಕೋರ್ಟ್ ಹಿಂಭಾಗದ ರಸ್ತೆ ಡಾಂಬರೀಕರಣದ ಕಾಮಗಾರಿ, ವಾರ್ಡ್ ನಂ 5ರ ಇಂದಿರಾನಗರದಲ್ಲಿ ಜಗದೀಶ ಗೌಡ ಅವರ ಮನೆ ಎದುರಿನ ರಸ್ತೆಗೆ ಇಂಟರ್ ಲಾಕ್ ಅಳವಡಿಸುವುದು ಹಾಗೂ ಎಂ.ಎಸ್.ಭಟ್ ಅವರ ಮನೆ ಎದುರಿನ ರಸ್ತೆ ಡಾಂಬರೀಕರಣ ಕಾಮಗಾರಿ, ವಾರ್ಡ್ ನಂ 3 ರಲ್ಲಿ ಬಾಲಿಕೊಪ್ಪ ಹೆಗ್ಗಾರಳ್ಳಿ ರಸ್ತೆ ಡಾಂಬರೀಕರಣ ಕಾಮಗಾರಿ, ವಾರ್ಡ್ ನಂ 4 ರಲ್ಲಿ ಸಿದ್ದಾಪುರ-ಚಂದ್ರಗುತ್ತಿ ಮುಖ್ಯ ರಸ್ತೆಯಿಂದ ಕೊಪ್ಪ ಊರಿನ ರಸ್ತೆ ಡಾಂಬರೀಕರಣ ಕಾಮಗಾರಿಗೆ ಶಿಲನ್ಯಾಸ‌ ನೆರವೇರಿಸಿದರು.

ವಾರ್ಡ್ ನಂ 4 ರಲ್ಲಿ ಹಾಳದಕಟ್ಟಾ ಮುಖ್ಯ ರಸ್ತೆಯಿಂದ ಕೊಂಡ್ಲಿ ಹಾನಂಬಿ ರಸ್ತೆಯ ಡಾಂಬರೀಕರಣ ಕಾಮಗಾರಿ, ವಾರ್ಡ್ ನಂ 7 ಮತ್ತು 11 ರಲ್ಲಿ ಹಾಳದಕಟ್ಟಾ ಸಿದ್ದಾಪುರ-ಸೊರಬಾ ಮುಖ್ಯ ರಸ್ತೆಯ ಕಾನಡೆಯವರ ಮನೆ ಎದುರಿನಿಂದ ಕೊಂಡ್ಲಿ ಬಾನ್ಕೆರೆಗೆ ಹೋಗುವ ರಸ್ತೆ ಡಾಂಬರೀಕರಣ ಕಾಮಗಾರಿ ಹಾಗೂ ವಾರ್ಡ್ ನಂ 15 ರ ಹಾಳದಕಟ್ಟಾ ವಾಜಪೇಯಿ ನಗರದ ರಸ್ತೆ ಡಾಂಬರೀಕರಣ ಕಾಮಗಾರಿಗೆ ಭೂಮಿ ಪೂಜೆ ನಡೆಸಿ ಸೂಕ್ತ ಕಾಲದೊಳಗೆ ಉತ್ತಮ ಗುಣಮಟ್ಟದ ಕಾಮಗಾರಿ ನಡೆಸುವದರ ಜತೆಗೆ ಮಳೆಗಾಲದ ಸಿದ್ದತಾ ಕಾರ್ಯಗಳನ್ನು ಸಮರ್ಪಕವಾಗಿ ನಡೆಸುವಂತೆ ಪಟ್ಟಣ ಪಂಚಾಯತ ಮುಖ್ಯಾಧಿಕಾರಿ ಹಾಗೂ ಇಂಜನೀಯರಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ ಅಧ್ಯಕ್ಷೆ ಚಂದ್ರಕಲಾ ನಾಯ್ಕ, ಉಪಾಧ್ಯಕ್ಷ ವಿನಯ ಹೊನ್ನೆಗುಂಡಿ, ಸ್ಥಾಯಿ ಸಮಿತಿ ಅಧ್ಯಕ್ಷ ವಿಜೇಂದ್ರ ಗೌಡರ್, ಮುಖ್ಯಾಧಿಕಾರಿ ಜೆ.ಆರ್.ನಾಯ್ಕ ಹಾಗೂ ಸದಸ್ಯರು ಹಾಜರಿದ್ದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

2 Comments

Leave a Reply

Your email address will not be published. Required fields are marked *