atm ಗೆ ನುಗ್ಗಿದ ಖಾಸಗಿ ಬಸ್…..‌ ಬಚಾವಾದ ಅಂಗಡಿಕಾರರು!

ಸಿದ್ಧಾಪುರ,ಮೇ ೧೭- ಈ ವರ್ಷದ ಸಂಭವನೀಯ ಇನ್ನೊಂದು ಅಪಘಾತದಿಂದ ಸಿದ್ಧಾಪುರ ಪಾರಾಗಿದೆ. ಇದೇ ವರ್ಷದ ಇಲ್ಲಿಯ ಅಯ್ಯಪ್ಪ ಜಾತ್ರೆಯಲ್ಲಿ ಅನಾಹುತವಾದ ಮೇಲೆ ಇಂದು ಕೂಡಾ ಅಂಥದ್ದೇ ಸಂಭವನೀಯ ದುರಂತದಿಂದ ಸಿದ್ಧಾಪುರ ಬಚಾವಾಗಿದೆ.

ಸಿದ್ಧಾಪುರದಿಂದ ಸಾಗರ ಗ್ರಾಮೀಣ ಭಾಗದ ಮೂಲಕ ಹೊನ್ನಾಳಿಗೆ ತೆರಳುವ ಖಾಸಗಿ ಬಸ್‌ ಎಂದಿನಂತೆ ಇಂದು ಕೂಡಾ ಮಧ್ಯಾನ್ಹ ೨.೩೦ ರ ಸುಮಾರಿಗೆ ಇಲ್ಲಿಂದ ಹೊರಟಿದೆ. ಕೆ.ಡಿ.ಸಿ.ಸಿ. ಬ್ಯಾಂಕ್‌ ಇರುವ ಏರು ಪ್ರದೇಶದಿಂದ ಜೋಗ ರಸ್ತೆಗೆ ಬಸ್‌ ತಿರುಗಿಕೊಳ್ಳುವ ಮೊದಲು ಬ್ರೇಕ್‌ ಫೇಲಾಗಿ ಕಾರೊಂದಕ್ಕೆ ಗುದ್ದಿದೆ. ಚಾಲಕನ ಸಮಯಪ್ರಜ್ಞೆ ಜಾಗ್ರತವಾಗದಿದ್ದರೆ ಬಸ್‌ ಎಡಕ್ಕೆ ತಿರುಗುವ ಬದಲು ಬಲಕ್ಕೆ ತಿರುಗಿದ್ದರೆ… ಅಲ್ಲಿದ್ದ ಗೂಡಂಗಡಿಗಳ ಪೈಕಿ ಒಂದು ಸಿದ್ಧ ಆಹಾರದ ಮೊಬೈಲ್‌ ಅಂಗಡಿ ಜೊತೆಗೆ ಕನಿಷ್ಟ ಮೂರ್ನಾಲ್ಕು ಸಾವಾಗುವ ಅಪಾಯವಿತ್ತು!.

ನಿಯಂತ್ರಣ ತಪ್ಪಿದ ಬಸ್ಸನ್ನು ಚಾಲಕ ಎಡಕ್ಕೆ ತಿರುವಿಸುತ್ತಲೇ ಅದು ಕೆ.ಡಿ.ಸಿ.ಸಿ. ಬ್ಯಾಂಕ್‌ ಎ.ಟಿ.ಎಂ. ತಡೆದು ನಿಂತಿತು. ತಕ್ಷಣ ಪೊಲೀಸ್‌ ಸಹಕಾರದಲ್ಲಿ ಬಸ್‌ ತೆರವು ಮಾಡಿ ಪ್ರಕರಣ ದಾಖಲಿಸಲಾಗಿದೆ. ಅದೃಷ್ಟವಶಾತ್‌ ಈ ಘಟನೆ ದುರಂತವಾಗಿ ಬದಲಾಗಿಲ್ಲ. ಬಸ್‌ ಎ.ಟಿ.ಎಂ. ಗೆ ಬಡಿದು ನಿಲ್ಲದಿದ್ದರೆ ಆ ಏರು ಪ್ರದೇಶದಲ್ಲಿದ್ದ ಕಾರು, ಬೈಕ್‌ ಸೇರಿದ ಕನಿಷ್ಟ ೮-೧೦ ವಾಹನಗಳು ಜಖಂ ಆಗುತಿದ್ದವು. ಬಲಕ್ಕೆ ತಿರುಗಿದ್ದರೆ ಗೂಡಂಗಡಿಗಳು ನೆಲಸಮವಾಗುತಿದ್ದವು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

2 Comments

Leave a Reply

Your email address will not be published. Required fields are marked *