ಮತ್ತೆ ಅಮೇರಿಕಾ! ಅಮೇರಿಕಾ…. ಮತ್ತೆ ರಮೇಶ್!‌

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ‘ಅಮೆರಿಕಾ ಅಮೆರಿಕಾ 2’ ಚಿತ್ರದಲ್ಲಿ ಮತ್ತೆ ನಟ ರಮೇಶ್ ಅರವಿಂದ್!

1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು.

ನಾಗತಿಹಳ್ಳಿ ಚಂದ್ರಶೇಖರ್ - ರಮೇಶ್ ಅರವಿಂದ್

ನಾಗತಿಹಳ್ಳಿ ಚಂದ್ರಶೇಖರ್ – ರಮೇಶ್ ಅರವಿಂದ್

ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಸದ್ಯ ತಮ್ಮ ಮುಂಬರುವ ಚಿತ್ರ ‘ಅಮೆರಿಕಾ ಅಮೆರಿಕಾ 2’ ಚಿತ್ರದ ಪೋಸ್ಟ್-ಪ್ರೊಡಕ್ಷನ್ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಶೀರ್ಷಿಕೆಯು ಅವರ 1997ರ ಕಲ್ಟ್ ಕ್ಲಾಸಿಕ್ ‘ಅಮೆರಿಕಾ ಅಮೆರಿಕಾ’ ಚಿತ್ರವನ್ನು ನೆನಪಿಸುತ್ತದೆ. ನಟಿ ಶಾನ್ವಿ ಶ್ರೀವಾಸ್ತವ, ನಿರೂಪ್ ಭಂಡಾರಿ ಮತ್ತು ಪೃಥ್ವಿ ಅಂಬಾರ್ ನಟಿಸಿರುವ ಈ ಚಿತ್ರವು ಹಳೆಯ ಚಿತ್ರಕ್ಕೆ ನೇರ ಸಂಬಂಧ ಹೊಂದಿಲ್ಲದಿದ್ದರೂ, ಮೂಲ ಚಿತ್ರದ ಉತ್ಸಾಹ ಮತ್ತು ವಿಷಯವನ್ನು ಆಧರಿಸಿದೆ.

ನಮ್ಮ ಮೂಲದ ಪ್ರಕಾರ, ‘ಅಮೆರಿಕಾ ಅಮೆರಿಕಾ’ ಚಿತ್ರದಲ್ಲಿ ನಟಿಸಿದ್ದ ರಮೇಶ್ ಅರವಿಂದ್ ಅವರು ಹೊಸ ಚಿತ್ರದಲ್ಲಿಯೂ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಹಿಂದಿನ ಮತ್ತು ಈಗಿನ ಚಿತ್ರದ ನಡುವೆ ನಿರೂಪಣಾ ಸೇತುವೆಯಾಗಿ ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗಿದೆ.

1997ರಲ್ಲಿ ತೆರೆಕಂಡ ಅಮೆರಿಕಾ ಅಮೆರಿಕಾ ಚಿತ್ರದಲ್ಲಿ ರಮೇಶ್ ಅರವಿಂದ್, ಅಕ್ಷಯ್ ಆನಂದ್ ಮತ್ತು ಹೇಮಾ ಪಂಚಮುಖಿ ನಟಿಸಿದ್ದರು. ಈ ಚಿತ್ರವು ಸೂಪರ್ ಹಿಟ್ ಚಿತ್ರವಾಗಿ ಹೊರಹೊಮ್ಮಿತ್ತು. ಆ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದ ಮನೋ ಮೂರ್ತಿ ಅವರೇ ಅಮೆರಿಕಾ ಅಮೆರಿಕಾ 2 ಚಿತ್ರಕ್ಕೂ ಸಂಗೀತ ಸಂಯೋಜಿಸಲಿದ್ದಾರೆ.

ಸಹನಾ ವಿಜಯಕುಮಾರ್ ಅವರ ‘ಕ್ಷಮೆ’ ಕಾದಂಬರಿಯಿಂದ ಸ್ಫೂರ್ತಿ ಪಡೆದ ‘ಅಮೆರಿಕಾ ಅಮೆರಿಕಾ 2’ ಚಿತ್ರವು ಬೆಂಗಳೂರು ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ಪ್ರೀತಿ, ಹಂಬಲ ಮತ್ತು ಸ್ಥಳಾಂತರದ ಭಾವನಾತ್ಮಕ ವಿಚಾರಗಳನ್ನು ತೆರೆಮೇಲೆ ತರಲಿದೆ. ಚಿತ್ರದಲ್ಲಿ ಮಂಡ್ಯ ರಮೇಶ್, ಮಾನಸಿ ಸುಧೀರ್ ಮತ್ತು ಟೆಂಟ್ ಸಿನಿಮಾ ಪೋಷಿಸಿದ ಉದಯೋನ್ಮುಖ ಪ್ರತಿಭೆಗಳು ಸಹ ಇದ್ದಾರೆ.

ನಾಗತಿಹಳ್ಳಿ ಚಂದ್ರಶೇಖರ್ - ರಮೇಶ್ ಅರವಿಂದ್

ಕೆ ರವೀಂದ್ರ ನಿರ್ಮಿಸಿರುವ ಈ ಚಿತ್ರವು ಪೋಸ್ಟ್-ಪ್ರೊಡಕ್ಷನ್‌ನ ಅಂತಿಮ ಹಂತದಲ್ಲಿದ್ದು, ಸದ್ಯ ರೀ-ರೆಕಾರ್ಡಿಂಗ್ ಹಂತದಲ್ಲಿದೆ. ಈ ಮೊದಲು ಚಿತ್ರಕ್ಕೆ ಅಮರ ಮಧುರ ಪ್ರೇಮ ಎಂದು ತಾತ್ಕಾಲಿಕವಾಗಿ ಹೆಸರಿಡಲಾಗಿತ್ತು. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

2 Comments

Leave a Reply

Your email address will not be published. Required fields are marked *