ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ BJP-RSS: ಪ್ರಿಯಾಂಕ್ ಖರ್ಗೆ

ಬಿಜೆಪಿ ಹಾಗೂ ಆರ್’ಎಸ್ಎಸ್ ಕರಾವಳಿ ಕರ್ನಾಟಕ, ಮಲೆನಾಡು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಪರಿವರ್ತಿಸುತ್ತಿವೆ.

Priyank Kharge

ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಮತ್ತು ಆರ್‌ಎಸ್‌ಎಸ್ ರಾಜ್ಯದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಮಾಡುತ್ತಿದೆ. ಕೋಮುದ್ವೇಷವನ್ನು ಹರಡುತ್ತಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆಯವರು ಶನಿವಾರ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ನಾಯಕರ ಷಡ್ಯಂತ್ರಕ್ಕೆ ಪ್ರತಿಯಾಗಿ ಕಲಬುರಗಿಯ ಪ್ರಜ್ಞಾವಂತ ನಾಗರೀಕರು ನನ್ನನ್ನು ಬೆಂಬಲಿಸುವ ಮೂಲಕ ತಕ್ಕ ಉತ್ತರ ನೀಡಿದ್ದಾರೆಂದೂ ಹೇಳಿದ್ದಾರೆ.

ರಾಜಕೀಯವಾಗಿ ಸೈದ್ಧಾಂತಿಕವಾಗಿ, ವೈಚಾರಿಕವಾಗಿ ನನ್ನನ್ನು ಎದುರಿಸಲು ಸಾಧ್ಯವಾಗದ ಬಿಜೆಪಿಯವರು ವೈಯಕ್ತಿಕ ದಾಳಿಗಳ ಮೂಲಕ ನನ್ನ ತೇಜೋವಧೆಗೆ ಪ್ರಯತ್ನಿಸಿದರು. ಇದನ್ನು ಕಂಡು ಸಹಿಸದೇ ಪ್ರಜ್ಞಾವಂತ ನಾಗರೀಕರಾದ ನೀವು ಸಿಡಿದೆದ್ದೀರಿ ಎಂದು ಧನ್ಯವಾದ ಹೇಳಿದ್ದಾರೆ.

ವಚನ ಚಳವಳಿಯ ಮೂಲಕ ನಾಡಿಗೆ ವಿಚಾರ ಕ್ರಾಂತಿಯನ್ನು ಪರಿಚಯಿಸಿದ ಕಲ್ಯಾಣ ಕರ್ನಾಟಕವು ಅಂದಿನಿಂದ ಇಂದಿನವರೆಗೂ ವೈಚಾರಿಕ ಪ್ರಜ್ಞೆಯಲ್ಲಿ ಸದಾ ಮುಂದಿದ್ದಾರೆ. ಇಂತಹ ಕಲ್ಯಾಣ ಶರಣರ ನಾಡು ಎಂದಿಗೂ ಆರ್‌ಎಸ್‌ಎಸ್ ಬಿಜೆಪಿಯವರ ಮಲಿನ ಚಿಂತನೆಗಳಿಗೆ ಅವಕಾಶ ಕೊಡುವುದಿಲ್ಲ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಶಕ್ತಿಯನ್ನು ನಂಬಿರುವ ಕಲಬುರಗಿಯ ಜನರು ಇಂದು ನನ್ನ ಪರವಾಗಿ ಬೃಹತ್ ಮಟ್ಟದ ವೈಚಾರಿಕ ಬೆಂಬಲವನ್ನು ದಾಖಲಿಸಿದ್ದು ನನ್ನ ಋಣಭಾರವನ್ನು ಇನ್ನಷ್ಟು ಹೆಚ್ಚಿಸಿದೆ.

ಕಲಬುರಗಿಯ ಪ್ರಬುದ್ಧ ಜನರೇ, ಸತ್ಯದ ಹಾದಿಯಲ್ಲಿ ನಡೆಯುವವರಿಗೆ, ಜನಹಿತಕ್ಕಾಗಿ ಬದುಕುವವರಿಗೆ ಎಂದಿಗೂ ಬೆಂಬಲ ಇದ್ದೇ ಇರುತ್ತದೆ ಎಂಬುದನ್ನು ನೀವು ಮತ್ತೊಮ್ಮೆ ಸಾಬೀತುಪಡಿಸಿದ್ದೀರಿ. ನನ್ನನ್ನು ಕೇವಲ ರಾಜಕಾರಣಿಯನ್ನಾಗಿ ನೋಡದೆ, ನಿಮ್ಮಲ್ಲಿ ಒಬ್ಬ ಎಂದು ಪರಿಗಣಿಸಿ ತೋರಿಸುತ್ತಿರುವ ಪ್ರೀತಿ, ಕಾಳಜಿ ನನ್ನನ್ನು ಮೂಕವಿಸ್ಮಿತನನ್ನಾಗಿಸಿದೆ.

ರಾಜಕೀಯವಾಗಿ, ಸೈದ್ದಂತಿಕವಾಗಿ, ವೈಚಾರಿಕವಾಗಿ ನನ್ನನ್ನು ಎದುರಿಸಲು ಸಾಧ್ಯವಾಗದ ಬಿಜೆಪಿಯವರು ವೈಯಕ್ತಿಕ ದಾಳಿಗಳ ಮೂಲಕ ನನ್ನ ತೇಜೋವಧೆಗೆ ಪ್ರಯತ್ನಿಸುತ್ತಿರುವುದನ್ನು ಕಂಡು ಸಹಿಸದೇ ಪ್ರಜ್ಞಾವಂತ ನಾಗರಿಕರಾದ ನೀವು ಸಿಡಿದೆದ್ದಿದ್ದೀರಿ. ನನ್ನ ಮೇಲೆ ಅಪಾರ ವಿಶ್ವಾಸ ಇರಿಸಿರುವ ನೀವು, ನನ್ನಲ್ಲಿನ ಸ್ಥೈರ್ಯ ಕೊಂಚವೂ ಕುಗ್ಗದಂತೆ ಬಲ ತುಂಬಿದ್ದೀರಿ. ನಿಮ್ಮ ಈ ಅಭಿಮಾನ, ಪ್ರೀತಿಯನ್ನು ವರ್ಣಿಸಲು ನನ್ನಲ್ಲಿ ಪದಗಳಿಲ್ಲ.

ನನ್ನ ಮೇಲಿನ ಪ್ರತಿ ದಾಳಿಗೂ ಸಾವಿರಾರು ವಿರೋಧದ ಧ್ವನಿಗಳು ಅನುರಣಿಸುತ್ತವೆ, ಕೀಳು ತಂತ್ರಗಳಿಗೆ ಎದಿರೇಟು ನೀಡುವ ಜನಶಕ್ತಿ ನನ್ನೊಂದಿಗೆ ಇದೆ ಎಂಬುದನ್ನು ಮನುವಾದಿಗಳಿಗೆ ಮನವರಿಕೆ ಮಾಡಿದ್ದೀರಿ. ನಾವೆಲ್ಲರೂ ಬಾಬಾ ಸಾಹೇಬರ ಆದರ್ಶಗಳು, ಸಂವಿಧಾನದ ತತ್ವಗಳನ್ನು ಪಾಲಿಸುವವರು. ನಮ್ಮ ಹೋರಾಟಗಳು ಸತ್ಯದ ಪರವಾಗಿರುತ್ತದೆ. ಆಚಾರವಿಲ್ಲದ ನಿಮ್ಮ ನಾಲಿಗೆ ಆಡುವ ಹೊಲಸು ಮಾತುಗಳಿಂದ ನಮ್ಮನ್ನು ಹಣಿಯಲು ಸಾಧ್ಯವಿಲ್ಲ ಎಂಬುದನ್ನು ಮನುಸ್ಮೃತಿ ಆರಾಧಕರಿಗೆ ಮತ್ತೊಮ್ಮೆ ಅರ್ಥಮಾಡಿಸಿದ್ದೀರಿ.

ಸಮಾಜದ ಸ್ವಾಸ್ಥ್ಯ ಕೆಡಿಸುವ ಮನುವಾದದ ಮನಸ್ಥಿತಿಯವರ ಕುತಂತ್ರಗಳು ಸಫಲವಾಗುವುದಿಲ್ಲ. ಪ್ರಿಯಾಂಕ್ ಖರ್ಗೆ ಒಂಟಿಯಲ್ಲ, ನನ್ನೊಂದಿಗೆ ಬಾಬಾ ಸಾಹೇಬರನ್ನು ಅನುಸರಿಸುವ ಹಾಗೂ ಬಸವಣ್ಣನನ್ನು ಆರಾಧಿಸುವ ಸಾವಿರಾರು ಪಡೆಗಳಿವೆ ಎನ್ನುವ ಸಂಗತಿ ನನ್ನಲ್ಲಿ ಮತ್ತಷ್ಟು ಶಕ್ತಿ, ಆತ್ಮವಿಶ್ವಾಸ ತುಂಬಿದೆ. ನಿಮ್ಮೆಲ್ಲರ ಈ ಪ್ರೀತಿ, ಈ ಅಭಿಮಾನ, ಈ ಅಭೂತಪೂರ್ವ ಬೆಂಬಲವು ನನ್ನಲ್ಲಿ ಮತ್ತಷ್ಟು ಶಕ್ತಿ ತುಂಬಿದೆ, ಸಾಮಾಜಿಕ ಪಿಡುಗಿನಂತಾಗಿರುವ ಮನುವಾದಿಗಳನ್ನು ಎದುರಿಸುವ ಕೆಲಸವನ್ನು ನಿಮ್ಮೆಲ್ಲರ ಬೆಂಬಲದೊಂದಿಗೆ ನಾನು ಮುಂದುವರೆಸುತ್ತಲೇ ಇರುತ್ತೇನೆ, ಅಸಹಾಯಕರ, ಶೋಷಿತರ ಏಳಿಗೆಗಾಗಿ ನನ್ನ ಪ್ರಾಮಾಣಿಕ ಪ್ರಯತ್ನವನ್ನು ಮುಂದುವರೆಸುತ್ತಿರುತ್ತೇನೆಂದು ತಿಳಿಸಿದ್ದಾರೆ.

ಇದೇ ವೇಳೆ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಅವರು, ಅಮೆರಿಕದ ಹಿತಾಸಕ್ತಿಗಳಿಗೆ ಅನುಗುಣವಾಗಿ ಭಾರತದ ವಿದೇಶಾಂಗ ನೀತಿಯಲ್ಲಿ ರಾಜಿ ಮಾಡಿಕೊಳ್ಳಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ.

ಪ್ರಧಾನಿ ಮೋದಿ ಒಮ್ಮೆ ತಮ್ಮ “ಸ್ನೇಹಿತ” ಎಂದು ಕರೆದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈಗ ಕಾಶ್ಮೀರ ವಿಷಯದ ಬಗ್ಗೆ ಏಕೆ ಪ್ರತಿಕ್ರಿಯಿಸುತ್ತಿದ್ದಾರೆ? ಕಾಶ್ಮೀರ ನಮ್ಮ ಆಂತರಿಕ ವಿಚಾರ ಎಂದು ಮೋದಿಯವರೇ ಒತ್ತಿ ಹೇಳಿದ್ದರು. ಇದೀಗ ಸರ್ಕಾರವೇಕೆ ಅಂತರರಾಷ್ಟ್ರೀಯಗೊಳಿಸುತ್ತಿದೆ?

ಪ್ರಧಾನಿ ಮೋದಿ ಇದರ ಬಗ್ಗೆ ಮೌನವಾಗಿದ್ದಾರೇಕೆ? ಸಾರ್ವಭೌಮ ರಾಷ್ಟ್ರವಾಗಿ ನಮ್ಮ ದೇಶದ ವಿದೇಶಾಂಗ ನೀತಿಯನ್ನು ಅಮೆರಿಕಕ್ಕೆ ಅಡವಿಡಲಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. ಇದೇ ವೇಳೆ ಆಡಳಿತ ಪಕ್ಷದ ಸದಸ್ಯರು ಆಗಾಗ್ಗೆ ಮಾಡುವ ವಿದೇಶ ಪ್ರವಾಸಗಳ ಕುರಿತಂತೆಯೂ ಪ್ರಶ್ನೆ ಮಾಡಿದ್ದಾರೆ.

ಹಲವು ದೇಶಗಳಿಗೆ ಹೋಗಿರುವವರೆಲ್ಲರೂ, ಆ ರಾಷ್ಟ್ರಗಳ ಮುಖ್ಯಸ್ಥರನ್ನು ಅಥವಾ ಸರ್ಕಾರದ ಮುಖ್ಯಸ್ಥರನ್ನು ಭೇಟಿಯಾಗುತ್ತಿದ್ದಾರೆಯೇ? ಅವರು ನಿಜವಾಗಿಯೂ ಯಾರನ್ನು ಭೇಟಿಯಾಗುತ್ತಿದ್ದಾರೆ? ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಹಾಗೂ ಆರ್’ಎಸ್ಎಸ್ ಕರಾವಳಿ ಕರ್ನಾಟಕ, ಮಲೆನಾಡು, ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಸೇರಿದಂತೆ ಕರ್ನಾಟಕದ ಕೆಲವು ಭಾಗಗಳನ್ನು ದ್ವೇಷದ ಪ್ರಯೋಗಾಲಯಗಳನ್ನಾಗಿ ಪರಿವರ್ತಿಸುತ್ತಿವೆ.

“ಸಂಘ ಪರಿವಾರ ಮತ್ತು ಅದರ ಅಂಗಸಂಸ್ಥೆಗಳು ಎಂದಿಗೂ ಉದ್ಯೋಗಗಳನ್ನು ಸೃಷ್ಟಿಸಲು ಆದ್ಯತೆ ನೀಡಿಲ್ಲ, ಬದಲಿಗೆ ದ್ವೇಷವನ್ನು ಹರಡುವತ್ತ ಗಮನಹರಿಸಿವೆ. ವಿಪರ್ಯಾಸವೆಂದರೆ ಅವರು ತಮ್ಮ ಮಕ್ಕಳನ್ನು ಈ ದ್ವೇಷದ ಜಾಲದಲ್ಲಿ ಸಿಲುಕಿಸುತ್ತಿಲ್ಲ. ಬದಲಿಗೆ ಬಡವರ ಮತ್ತು ಹಿಂದುಳಿದವರ ಮಕ್ಕಳನ್ನು ರವಾನಿಸುತ್ತಿದ್ದಾರೆಂದು ಕಿಡಿಕಾರಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

2 Comments

Leave a Reply

Your email address will not be published. Required fields are marked *