ವಸಂತ ನಾಯ್ಕರ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…. ಕೆ.ಜಿ. ನಾಯ್ಕ ಹಣಜಿಬೈಲ್‌ ಸವಾಲು

ತೌಡತ್ತಿ ಸಂತೋಷ ಆತ್ಮಹತ್ಯೆ ಪ್ರಕರಣದ ವಿಚಾರದಲ್ಲಿ ಈಗಲೂ ನಿಷ್ಪಕ್ಷಪಾತ ಮತ್ತು ನಿರ್ಭೀತ ವಿಚಾರಣೆಗೆ ಒತ್ತೇಯಿಸುತ್ತೇವೆ ಎಂದು ಪ್ರತಿಪಾದಿಸಿರುವ ಬಿ.ಜೆ.ಪಿ. ನಾಯಕ ಕೆ.ಜಿ. ನಾಯ್ಕ ಹಣಜಿಬೈಲ್‌ ಯಾವ ಗೊಡ್ಡು ಬೆದರಿಕೆಗೂ ಹೆದರುವುದಿಲ್ಲ ಎಂದು ಹೇಳಿದ್ದಾರೆ. ನಗರದಲ್ಲಿ ಕರೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ಅಪ್ರಾಪ್ತ ಬಾಲಕಿಯರ ವಿಚಾರದ ಪ್ರಕರಣದಲ್ಲಿ ಯಾವ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕ್ರಮವಾಗಬೇಕು ಬಿ.ಜೆ.ಪಿ. ಹೆಣ ಬೀಳಿಸುವ ಪಕ್ಷವಲ್ಲ ಜನರ ಸಮಸ್ಯೆಗೆ ಸ್ಫಂದಿಸುವ ಪಕ್ಷ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್‌ ಬ್ಲಾಕ್‌ ಅಧ್ಯಕ್ಷ ವಸಂತ ನಾಯ್ಕ ಅರೋಪಕ್ಕೆ ಪ್ರತಿಕ್ರೀಯಿಸಿದ ಕೆ.ಜಿ.ನಾಯ್ಕ ನಮ್ಮ ಸಾರ್ವಜನಿಕ ಜೀವನ ಪಾರದರ್ಶಕವಾಗಿದೆ. ಅವರು ಮಾಡಿರುವ ಆರೋಪ ಸಾಬೀತು ಮಾಡಿದರೆ ರಾಜಕೀಯ ಜೀವನದಿಂದ ನಿವೃತ್ತಿ ಯಾಗುತ್ತೇನೆ ಎಂದು ಸವಾಲೆಸೆದ ಅವರು ಇದೇ ರೀತಿ ಅವರ ಮೇಲೆ ಬಂದಿರುವ ಆರೋಪ ಸಾಬೀತಾದರೆ ಅವರು ರಾಜಕೀಯ ಜೀವನ ತ್ಯಜಿಸುತ್ತಾರೆಯೆ? ಎಂದು ಪ್ರಶ್ನಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಬಿ.ಜೆ.ಪಿ. ತಾಲೂಕಾ ಮಂಡಳದ ಅಧ್ಯಕ್ಷ ತಿಮ್ಮಪ್ಪ ಎಂ.ಕೆ. ಸಿದ್ಧಾಪುರದಲ್ಲಿ ಅಕ್ರಮ ಸಾರಾಯಿ ಮಾರಾಟ, ಅಕ್ರಮ ಚಟುವಟಿಕೆಗಳು ಹೆಚ್ಚಿವೆ. ಇದರ ಹಿಂದೆ ಯಾರಿದ್ದಾರೆ? ಎಂದು ಪ್ರಶ್ನಿಸಿದರು.

ಮಾಧ್ಯಮಗೋಷ್ಠಿ ಮೊದಲು ಪಕ್ಷದ ಸಭೆ ನಡೆಸಿದ ನಾಯಕರು ನಂತರ ನಿಯೋಗದ ರೀತಿ ಸ್ಥಳೀಯ ಪೊಲೀಸ್‌ ಠಾಣೆಗೆ ತೆರಳಿ ನಿಷ್ಠೂರ ಮತ್ತು ನಿಷ್ಪಕ್ಷಪಾತ ತನಿಖೆಗೆ ಒತ್ತಾಯಿಸಿ ಬಾಧಿತರಿಗೆ ನ್ಯಾಯ ಒದಗಿಸಲು ಆಗ್ರಹಿಸಿದರು.

  • ಕಾಂಗ್ರೆಸ್‌ ನಾಯಕರ ಹೆಸರು ಹೇಳಿಕೊಂಡ ಆರೋಪಿಗಳ ತಂಡ ಸಂತೋಷ ನಾಯ್ಕರನ್ನು ಹೆದರಿಸಿ, ಅವರ ಕುಟುಂಬಸ್ಥರನ್ನು ಬೆದರಿಸಿ ಅವರ ಬಳಿ ಇದ್ದ ದಾಖಲೆಗಳನ್ನು ಅಪಹರಿಸಿದೆ. ನಾಲ್ಕು ದಿನಗಳ ವರೆಗೆ ತನಿಖೆಯ ಗತಿ ಏನಾಗಿದೆ ಎನ್ನುವ ಮಾಹಿತಿ ಇಲ್ಲ, ನಮಗೆ ವೈಯಕ್ತಿಕ, ರಾಜಕೀಯ ಸೇಡು ತೀರಿಸಿಕೊಳ್ಳಲು ಸಮಯವಿಲ್ಲ. ಸಿದ್ಧಾಪುರದ ಅಭಿವೃದ್ಧಿಯಲ್ಲಿ ನಮ್ಮ ಪಾತ್ರವನ್ನು ನಾವೇ ಹೇಳಿಕೊಳ್ಳಬಾರದು. ಕಾನೂನು, ರಾಜಕೀಯ, ಅನಿವಾರ್ಯವಾದರೆ ವೈಯಕ್ತಿಕ ಹೋರಾಟಕ್ಕೂ ಸಿದ್ಧ ಅವರ ನಡೆ ನೋಡಿ ನಮ್ಮ ನಡೆ ನಿರ್ಧಾರವಾಗಲಿದೆ…. -ಕೆ.ಜಿ.ನಾಯ್ಕ ಹಣಜಿಬೈಲ್

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

2 Comments

Leave a Reply

Your email address will not be published. Required fields are marked *