ಪೊಲೀಸರಿಗೆ ಕೈಮುಗಿದು ಸ್ಸಾರಿ…. ನನ್ನ ಮೇಲೆ ಕೇಸ್‌ ಬೇಡ ಪ್ಲೀಜ್‌ ……….ಎಂದ ಅನಂತ ಹೆಗಡೆ

ಹಿಂದೂ ಹುಲಿ ಎನ್ನುವ ಅನಂತಕುಮಾರ ಹೆಗಡೆ ಪೊಲೀಸರಿಗೆ ಕೈ ಮುಗಿದು ನಮ್ದೇ ತಪ್ಪು ಸೊರ್ರಿ ನಾನು ವಿದೇಶಕ್ಕೆ ಹೋಗುವುದಿದೆ, ನಿಮ್ಮ ಕಾಲಾದ್ರೂ ಹಿಡಿತೇನಿ ನನ್ನ ಮೇಲೆ ಕೇಸ್‌ ಬೇಡ ನನ್ನ ಮಗನ್ನೂ ಸೇರಿ ೬ ಜನರ ಮೇಲೆ ಮಾತ್ರ ಕೇಸ್‌ ದಾಖಲಿಸಿ ಎಂದು ಅಂಗಲಾಚಿದ ಪ್ರಕರಣ ಚರ್ಚೆಯಲ್ಲಿದೆ. ಸಾಬರನ್ನು ಬಿಡಬಾರದು ಎಂದು ವೃದ್ಧರು, ಮಹಿಳೆಯರು ಎಂದು ನೋಡದೆ ಹಲ್ಲೆ ನಡೆಸಿದ ಹೆಗಡೆ ಪರಿಸ್ಥಿತಿ ಬಿಗಡಾಯಿಸುತ್ತಲೇ ಕೈ ಮುಗಿತೇನ, ಕಾಲಿಗಾದರೂ ಬೀಳತೇನಿ ಎಂದು ಪೊಲೀಸರಿಗೆ ಬೆಣ್ಣೆ ಹಚ್ಚಿ ಪೊಲೀಸ್‌ ದೂರಿನಲ್ಲಿ ತನ್ನ ಹೆಸರು ಕಡಿಮೆ ಮಾಡಿಸಿ ಸಿಂಗಾಪುರಕ್ಕೆ ಹಾರಿದ್ದಾನೆ ಎನ್ನಲಾಗಿದೆ. ಕಾಂಗ್ರೆಸ್‌, ಸಿದ್ಧರಾಮಯ್ಯ, ರಾಜ್ಯ ಸರ್ಕಾ ರದ ವಿರುದ್ಧ ಮಾತನಾಡುತಿದ್ದ ಅನಂತ ಹೆಗಡೆ ವಿರುದ್ಧ ಪ್ರಕರಣ ದಾಖಲಿಸದಿದ್ದುದಕ್ಕೆ ರಾಜ್ಯ ಸರ್ಕಾರ ಪೊಲೀಸರ ಮೇಲೂ ಕ್ರಮಕ್ಕೆ ಮುಂದಾಗಿರುವ ವರ್ತಮಾನ ಚರ್ಚೆಯಲ್ಲಿದೆ.

ನೆಲಮಂಗಲ ಬಳಿ ಗಲಾಟೆ-ಹಲ್ಲೆ ಆರೋಪ: ಮಾಜಿ ಸಂಸದ ಅನಂತ್ ಕುಮಾರ್ ಹೆಗಡೆ ಸೇರಿ ಮೂವರ ವಿರುದ್ಧ FIR ದಾಖಲು

ಹಳೆ ನಿಜಗಲ್ ಬಳಿ ಹೆಗಡೆ ಅವರು ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಬರುತ್ತಿದ್ದಾಗ, ಎಸ್‌ಯುವಿ ಕಾರನ್ನು ಅಕ್ರಮವಾಗಿ ಓವರ್ ಟೇಕ್ ಮಾಡಿ ನಿಲ್ಲಿಸಿತು.

Anath Kumar Hegade(File photo)

ಅನಂತ್ ಕುಮಾರ್ ಹೆಗಡೆ(ಸಂಗ್ರಹ ಚಿತ್ರ)

ಬೆಂಗಳೂರು: ಬೆಂಗಳೂರಿನ ಹೊರವಲಯದ ಹಳೆ ನಿಜಗಲ್ ಬಳಿ ನಡೆದ ರಸ್ತೆ ಗಲಭೆ ಘಟನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕೇಂದ್ರ ಮಾಜಿ ಸಚಿವ ಹಾಗೂ ಮಾಜಿ ಸಂಸದ ಅನಂತಕುಮಾರ್ ಹೆಗಡೆ, ಅವರ ಗನ್‌ಮ್ಯಾನ್ ಮತ್ತು ಚಾಲಕನ ವಿರುದ್ಧ ದಾಬಸ್‌ಪೇಟೆ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ಹಳೆ ನಿಜಗಲ್ ಬಳಿ ಹೆಗಡೆ ಅವರು ಕಾರ್ಯಕ್ರಮವೊಂದನ್ನು ಮುಗಿಸಿಕೊಂಡು ಬರುತ್ತಿದ್ದಾಗ, ಎಸ್‌ಯುವಿ ಕಾರನ್ನು ಅಕ್ರಮವಾಗಿ ಓವರ್ ಟೇಕ್ ಮಾಡಿ ನಿಲ್ಲಿಸಿ ಚಾಲಕನ ವಿರುದ್ಧ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಾಗಿದೆ.

ಇನ್ನೊಂದು ಕಾರನ್ನು ಸೈಫ್ ಖಾನ್ ಎಂಬುವವರು ಚಲಾಯಿಸುತ್ತಿದ್ದು ಅನಂತ್ ಕುಮಾರ್ ಹೆಗಡೆ ಅವರ ಕಾರು ಮುಂದಕ್ಕೆ ಹೋಗಲು ದಾರಿ ಮಾಡಿಕೊಡಲಿಲ್ಲ ಎಂಬ ಕಾರಣಕ್ಕೆ ಓವರ್ ಟೇಕ್ ಮಾಡಿ ನಿಲ್ಲಿಸಿ ವಾಗ್ವಾದಕ್ಕಿಳಿದು ಪರಿಸ್ಥಿತಿ ವಿಕೋಪಕ್ಕೆ ಹೋಯಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ.

ಹೆಗಡೆ ಕಾರು ಚಾಲಕ, ಸೈಫ್ ಖಾನ್ ಅವರ ಕಾರಿಗೆ ಎರಡು ಮೂರು ಬಾರಿ ಹಾರ್ನ್ ಮಾಡಿದ್ದರೂ ಸೈಫ್ ಖಾನ್ ಅದನ್ನು ಗಮನಿಸದೆ ಚಾಲನೆಯನ್ನು ಮುಂದುವರೆಸಿದರು. ಇದಕ್ಕೆ ಕೋಪದಿಂದ ಹೆಗಡ ಅವರ ಕಾರು ಚಾಲಕ ಎಸ್‌ಯುವಿಯನ್ನು ಅಡ್ಡಗಟ್ಟಿದ್ದಾರೆ. ನಂತರ ಚಾಲಕ ಮತ್ತು ಗನ್‌ಮ್ಯಾನ್ ಇಬ್ಬರೂ ಹೊರಬಂದು ಸೈಫ್ ಖಾನ್ ಮತ್ತು ಅವರ ಸಹೋದರನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳುತ್ತಾರೆ.

Anath Kumar Hegade(File photo)

ಸೈಫ್ ಖಾನ್ ಅವರ ಕುಟುಂಬದ ಸದಸ್ಯರು ಕಾರಿನ ಒಳಗಿನಿಂದ ರೆಕಾರ್ಡ್ ಮಾಡಿದ ವೀಡಿಯೊದಲ್ಲಿ ಕಿತ್ತಳೆ ಬಣ್ಣದ ಶರ್ಟ್ ಧರಿಸಿದ ವ್ಯಕ್ತಿಯೊಬ್ಬರು ಸೈಫ್ ಖಾನ್ ಮತ್ತು ಅವರ ಸಹೋದರನನ್ನು ಎದುರಿಸುತ್ತಿರುವ ಮತ್ತು ಹಲ್ಲೆ ಮಾಡುತ್ತಿರುವುದನ್ನು ತೋರಿಸುತ್ತದೆ.

ದಾಳಿಕೋರರ ಜೊತೆಗಿದ್ದ ಕೆಲವರು ಕಾರಿನಲ್ಲಿದ್ದ ವ್ಯಕ್ತಿ ಮುಸ್ಲಿಂ ಎಂದು ಹೇಳುತ್ತಾ ಹಲ್ಲೆಗೆ ಪ್ರಚೋದಿಸಿದರು ಎಂದು ಸೈಫ್ ಖಾನ್ ವರದಿಗಾರರಿಗೆ ತಿಳಿಸಿದರು. ಪೊಲೀಸರು ಇದನ್ನು ದೃಢಪಡಿಸಲಿಲ್ಲ, ತನಿಖೆ ಇನ್ನೂ ಮುಂದುವರೆದಿದೆ ಎಂದು ಹೇಳಿದರು.

ಹಲ್ಲೆ ವೇಳೆ ಸೈಫ್ ಖಾನ್ ಹಲ್ಲು ಮುರಿದುಹೋಗಿದೆ ಎಂದು ಮತ್ತೊಬ್ಬ ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸೈಫ್ ಖಾನ್ ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದೆ, ಕುಟುಂಬದವರ ಹೇಳಿಕೆಯನ್ನು ದಾಖಲಿಸಲಾಗಿದೆ.

ನೆಲಮಂಗಲದಲ್ಲಿರುವ ಪೊಲೀಸ್ ಉಪ ಅಧೀಕ್ಷಕರ ಕಚೇರಿಯಲ್ಲಿ ಪೊಲೀಸರು ಅನಂತ್ ಕುಮಾರ್ ಹೆಗಡೆ ಮತ್ತು ಅವರ ಇಬ್ಬರು ಸಹಚರರನ್ನು ವಿಚಾರಣೆ ನಡೆಸಿದ್ದಾರೆ. ಗನ್ ಮ್ಯಾನ್ ಮತ್ತು ಚಾಲಕನನ್ನು ಬಂಧಿಸಲಾಗಿದೆ. ಮಾಜಿ ಸಂಸದರು ಭಾಗಿಯಾಗಿರುವ ಸುದ್ದಿ ಹರಡುತ್ತಿದ್ದಂತೆ, ಪೊಲೀಸ್ ಠಾಣೆಯಲ್ಲಿ ದೊಡ್ಡ ಜನಸಮೂಹ ಜಮಾಯಿಸಿತು.

ಪೊಲೀಸರು ಬಿಎನ್‌ಎಸ್‌ನ ಸೆಕ್ಷನ್ 117 (ಸ್ವಯಂಪ್ರೇರಿತವಾಗಿ ತೀವ್ರ ನೋವುಂಟುಮಾಡುವುದು), 126 (ಅಕ್ರಮ ಸಂಯಮ), 74 (ಮಹಿಳೆಯ ಮೇಲೆ ಹಲ್ಲೆ ಅಥವಾ ಕ್ರಿಮಿನಲ್ ಬಲಪ್ರಯೋಗ), 351(4) (ಕ್ರಿಮಿನಲ್ ಬೆದರಿಕೆ), ಮತ್ತು 352 (ಶಾಂತಿ ಉಲ್ಲಂಘನೆಯನ್ನು ಪ್ರಚೋದಿಸುವ ಉದ್ದೇಶದಿಂದ ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಎಸ್‌ಪಿ ಸಿಕೆ ಬಾಬಾ ಸುದ್ದಿಗಾರರಿಗೆ ತಿಳಿಸಿದ ಪ್ರಕಾರ, ದೂರಿನಲ್ಲಿ ಅನಂತ್ ಕುಮಾರ್ ಹೆಗಡೆ, ಅವರ ಚಾಲಕ, ಗನ್ ಮ್ಯಾನ್ ಮತ್ತು ಇತರ ನಾಲ್ವರನ್ನು ಹೆಸರಿಸಲಾಗಿದೆ. ಮೂವರನ್ನು ಬಂಧಿಸಲಾಗಿದ್ದು, ತನಿಖೆಯ ನಂತರ ಆರೋಪಿಗಳ ಹೆಸರುಗಳನ್ನು ಬಹಿರಂಗಪಡಿಸಲಾಗುವುದು ಎಂದು ಅವರು ಹೇಳಿದರು. (kp.c)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *