


ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಪಾದಪೂಜೆ ನೆರವೇರಿಸಿದ ಅನಂತಮೂರ್ತಿ ಹೆಗಡೆ

ಕುಮಟಾ: ತಾಲೂಕಿನ ಕೋನಳ್ಳಿಯಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿ ನಿರತರಾಗಿರುವ ಪರಮಪೂಜ್ಯ ಮಹಾಮಂಡಲೇಶ್ವರ 1008 ಸದ್ಗುರು
ಶ್ರೀ ಶ್ರೀ ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ ಅವರ ಪಾದಪೂಜೆಯನ್ನು ಭಾನುವಾರದಂದು ಶ್ರೀ ವನದುರ್ಗಾ ದೇವಾಲಯದಲ್ಲಿ ಬಿಜೆಪಿ ರೈತಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಹಾಗು ಅವರ ಕುಟುಂಬದವರು ನೆರವೇರಿಸಿದರು.
ಶಿರಸಿ-ಸಿದ್ದಾಪುರ ತಾಲೂಕಿನ ನೂರಾರು ಸಮಾಜ ಬಾಂಧವರು, ಕುಟುಂಬದ ಹಿತೈಷಿಗಳ ಸಮೇತರಾಗಿ ತೆರಳಿ ವಿಶೇಷ ಪಾದಪೂಜೆ ಸಲ್ಲಿಸಿ ಗುರುಗಳ ಮಂತ್ರಾಕ್ಷತೆ ಪಡೆದರು. ಈ ಸಂದರ್ಭದಲ್ಲಿ ಪರಮ ಪೂಜ್ಯ ಗುರುಗಳು ಸಂಪೂರ್ಣವಾಗಿ ಹರಸಿ, ಉದ್ಯೋಗ, ರಾಜಕೀಯ ಸೇರಿದಂತೆ ಎಲ್ಲ ಕ್ಷೇತ್ರಗಳಲ್ಲಿ ಯಶಸ್ಸುಗಳಿಸುವಂತೆ ಹಾರೈಸಿ ಆಶೀರ್ವದಿಸಿದರು. ಇದರ ಜೊತೆಗೆ ನವೆಂಬರ್ ನಲ್ಲಿ ಶ್ರೀ ಮಠದ ವತಿಯಿಂದ ಹರಿದ್ವಾರ ಪುಣ್ಯಕ್ಷೇತ್ರದಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಸೇವೆ ಸಲ್ಲಿಸಲು ಸ್ವಾಮೀಜಿ ಆದೇಶ ನೀಡಿದರು.


ಶ್ರೀಗುರುಗಳ ಪಾದಪೂಜೆ ಸಲ್ಲಿಸುವ ವೇಳೆ ಪ್ರಮುಖರಾದ ಶೋಭಾ ನಾಯ್ಕ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ರಮೇಶ ನಾಯ್ಕ ಕುಪ್ಪಳ್ಳಿ, ಸಂತೋಷ ನಾಯ್ಕ, ರಾಘವೇಂದ್ರ ನಾಯ್ಕ, ಉಷಾ ನಾಯ್ಕ, ದೀಪಾ ನಾಯ್ಕ, ಪ್ರಭಾವತಿ ಗೌಡ, ಶಿಲ್ಪಾ ಭಾಸ್ಕರ್, ಶಿವಾಜಿ, ವಿನಯ ಹೆಗಡೆ, ಗಣಪತಿ ನಾಯ್ಕ, ಸಿದ್ದಾಪುರದ ಕೃಷ್ಣಮೂರ್ತಿ ನಾಯ್ಕ ಐಸೂರು, ಆದರ್ಶ ಪೈ, ಗಿರೀಶ್ ಸೇರಿದಂತೆ ಹಲವಾರು ಮುಖಂಡರು ಜೊತೆಗಿದ್ದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






