

ಸಿದ್ದಾಪುರ: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ವಾಸದ ಮನೆಗೆ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಸಿದ್ದಾಪುರ ತಾಲೂಕಿನ ಶಿರಳಗಿ ಪಂಚಾಯತ್ ವ್ಯಾಪ್ತಿ ಬಿಕ್ಕಳಸೆ ಗ್ರಾಮದ ರಾಜಶೇಖರ್ ಮಡಿವಾಳ ರ ಮನೆಗೆ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ ಭೇಟಿ ನೀಡಿ ಧನಸಹಾಯ ಮಾಡಿದರು.


ಈ ವೇಳೆ ಮಾತನಾಡಿದ ಅವರು, ಇದೊಂದು ದುರದೃಷ್ಟಕರವಾದ ಘಟನೆ. ಮನೆಯ ದಿನನಿತ್ಯ ಬಳಸುವ ಪಾತ್ರೆ, ವಸ್ತ್ರ ಎಲ್ಲವೂ ಸುಟ್ಟು ಹೋಗಿರುವುದು ನಿಜಕ್ಕೂ ದುಃಖದ ಸಂಗತಿಯಾಗಿದೆ. ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ್ ಸಂತ್ರಸ್ತರ ಮನೆಗೆ ಭೇಟಿ ನೀಡಿ, ವೈಯಕ್ತಿಕ ಪರಿಹಾರ ನೀಡಿರುವುದು ಸಂತೋಷ. ಆದರೆ ಶಾಸಕರಾಗಿ ಸಂಪೂರ್ಣ ಮನೆ ನಿರ್ಮಾಣಕ್ಕೆ ಅನುದಾನ ಕೊಡಬೇಕು. ಹಿಂದಿನ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮನೆಗೆ ಹಾನಿ ಸಂಭವಿಸಿದಾಗ ಸರಕಾರದಿಂದ ಅನುದಾನ ನೀಡಿದ ಉದಾಹರಣೆಗಳು ತುಂಬಾ ಇದೆ. ಈ ಕೂಡಲೇ ಶಾಸಕ ಭೀಮಣ್ಣನವರು ಮುಖ್ಯಮಂತ್ರಿ ಅವರಿಗೆ ಮಾಹಿತಿ ನೀಡಿ, ಕನಿಷ್ಟ 5 ಲಕ್ಷ ರೂಪಾಯಿಯಷ್ಟು ಮುಖ್ಯಮಂತ್ರಿ ವಿಶೇಷ ಪರಿಹಾರ ಕೊಡಿಸಬೇಕೆಂದು ಅವರು ಆಗ್ರಹಿಸಿದರು.
ಈ ವೇಳೆ ಬಿಜೆಪಿ ಸಿದ್ದಾಪುರ ತಾಲೂಕಾಧ್ಯಕ್ಷ ಎಂ.ಕೆ.ತಿಮ್ಮಪ್ಪ ಸೇರಿದಂತೆ ಬಿಜೆಪಿಯ ಪ್ರಮುಖರು, ಸ್ಥಳೀಯರು ಇದ್ದರು.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






