ನಾಣಿಕಟ್ಟಾದಲ್ಲಿ ಸ್ವಾತಂತ್ರ್ಯ ಉತ್ಸವ ಆಚರಣೆ

ಸಿದ್ದಾಪುರ. ತಾಲೂಕಿನ ನಾಣಿಕಟ್ಟಾದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಪದವಿಪೂರ್ವ ಮತ್ತು ಪ್ರೌಢಶಾಲಾ ವಿಭಾಗಗಳು ಜಂಟಿಯಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ನಡೆಸಿದವು. ಕಾಲೇಜಿನ ಪ್ರಾಚಾರ್ಯ ಎಂ. ಕೆ. ನಾಯ್ಕ ಹೊಸಳ್ಳಿ ಧ್ವಜಾರೋಹಣ ಮಾಡಿ ಮಾತನಾಡುತ್ತಾ ನಮ್ಮ ಹಿರಿಯರ, ಸ್ವಾತಂತ್ರ ಹೋರಾಟಗಾರರ ನಿರಂತರ ಹೋರಾಟದಿಂದ ದೇಶಕ್ಕೆ ಸ್ವಾತಂತ್ರ್ಯ ದೊರಕಿದೆ. ಅದನ್ನು ಉಳಿಸಿ ಬೆಳೆಸಿಕೊಳ್ಳುವ ಜವಾಬ್ದಾರಿ ನಮ್ಮ ಮೇಲಿದೆ. ಸುಜಲ ಸುಫಲ, ಸಸ್ಯ ಶ್ಯಾಮಲ ಆಗಿರುವ ಈ ಭೂಮಾತೆಯನ್ನು ಸಮೃದ್ಧವಾಗಿ ಉಳಿಸಿಕೊಳ್ಳುವುದು ಸ್ವಾತಂತ್ರ್ಯದ ಒಂದು ಭಾಗವಾಗಿದೆ ಎಂದರು.

ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರಾದ ಮಹೇಶ ಹೆಗಡೆ ತ್ಯಾಗಲಿ, ಪ್ರೌಢಶಾಲಾ ವಿಭಾಗದ ಎಸ್‌.ಡಿ.ಎಂ.ಸಿ. ಅಧ್ಯಕ್ಷ ಮಹಾಬಲೇಶ್ವರ ಹೆಗಡೆ ಮತ್ತು ಉಮೇಶ ನಾಯ್ಕ ಶೇಲೂರು ಸ್ವಾತಂತ್ರ್ಯೋತ್ಸವದ ಶುಭ ಕೋರಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರು, ಎಸ್ ಡಿ ಎಂ ಸಿ ಸದಸ್ಯರು, ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಬೋಧಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ವಂದೇಮಾತರಂ, ರಾಷ್ಟ್ರಗೀತೆ, ಧ್ವಜಗೀತೆ, ದೇಶಭಕ್ತಿಗೀತೆಗಳನ್ನು ಹಾಡಿದರು. ವಿದ್ಯಾರ್ಥಿ ರಫಾನ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಗಂಗೊಳ್ಳಿ ಧ್ವಜಾರೋಹಣಕ್ಕೆ ಸಹಕರಿಸಿದರು. ಸ್ವಾತಂತ್ರ್ಯೋತ್ಸವದ ನಿಮಿತ್ತ ಏರ್ಪಡಿಸಲಾಗಿದ್ದ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಉಪನ್ಯಾಸಕ ಎಂ.ಆಯ್. ಹೆಗಡೆ ಸ್ವಾಗತಿಸಿ ನಿರೂಪಿಸಿದರು. ಹಿರಿಯ ಶಿಕ್ಷಕಿ ರೀನಾ ನಾಯಕ್ ವಂದಿಸಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *