


ಎಲ್ಲಾ ಗ್ಯಾರಂಟಿ ಯೋಜನೆಗಳ ಯಶಸ್ಸಿನ ನಡುವೆ ನಾವು ಅಭಿವೃದ್ಧಿ ಕೆಲಸ ಮಾಡುತಿದ್ದೇವೆ ಆದರೆ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳಲ್ಲಿ ನಮ್ಮ ವಿರುದ್ಧವೇ ಅಪಪ್ರಚಾರ ನಡೆಯುತ್ತಿದೆ ಇದರ ಮರ್ಮವೇನು ಎನ್ನುವುದು ನನಗೆ ತಿಳಿಯುತ್ತಿಲ್ಲ ಎಂದು ವಿಶಾದಿಸಿದ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಹಿಂದೆ ಗ್ಯಾರಂಟಿ ಯೋಜನೆಗಳಿರಲಿಲ್ಲ ಅಭಿವೃದ್ಧಿಯೂ ಆಗಿಲ್ಲ ಕೆಲಸಮಾಡದವರು ಸುಳ್ಳು ಹೇಳುತಿದ್ದರು ಎಂದು ಮಾರ್ಮಿಕವಾಗಿ ನುಡಿದರು.


ಸಿದ್ಧಾಪುರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಭೀಮಣ್ಣ ಕೂಡಾ ಉತ್ತಮ ಕೆಲಸ ಮಾಡುತಿದ್ದಾರೆ. ಸರ್ಕಾರದ ಕಾಮಗಾರಿಗಳ ಜೊತೆ ವೈಯಕ್ತಿಕ ಹಣದಿಂದಲೂ ಕ್ಷೇತ್ರದ ಅಭಿವೃದ್ಧಿ ಮಾಡುತಿದ್ದಾರೆ. ಇಂಥವರಿಗೆ ಶಂಕುಸ್ಥಾಪನೆ ಮಾಡುತಿದ್ದೀರಿ ಕೆಲಸ ಆಗುತ್ತಿಲ್ಲ ಎಂದು ಟೀಕಿಸುತಿದ್ದೀರಿ.. ಇವೆಲ್ಲಾ ನಮಗೆ ಅರ್ಥವಾಗುತ್ತಿದೆ ಆದರೆ ಇದರ ಹಿಂದಿನ ಮರ್ಮ ಅರ್ಥವಾಗುತ್ತಿಲ್ಲ ಎನ್ನುವ ಮೂಲಕ ಪ್ರಸ್ತುತ ಮಾಧ್ಯಮದ ವ್ಯವಸ್ಥೆ ಯಾರಿಗೆ ಪೂರಕವಾಗಿದೆ ಎಂದು ಪರೋಕ್ಷವಾಗಿ ತಿವಿದರು.

_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






