ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ.

ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ ಬಾರಿಸುವತ್ತ ದಾಪುಗಾಲಿಟ್ಟಿದೆ. ಪ್ರತಿ ವರ್ಷ ಮಂಗನ ಕಾಯಿಲೆಯ ಸಾವು-ನೋವು ಗಳಲ್ಲಿ ಮೊದಲ ಸ್ಥಾನ ಕಾಯ್ದುಕೊಳ್ಳುವ ಶಿವಮೊಗ್ಗ ಜಿಲ್ಲೆಯಲ್ಲಿ ಫೆಬ್ರುವರಿ ತಿಂಗಳಲ್ಲೇ ೪೩ ಪ್ರಕರಣಗಳು ದಾಖಲಾಗಿರುವುದು ಎಚ್ಚರಿಕೆಯ ಗಂಟೆಯಂತಾಗಿದೆ.

ಮಲೆನಾಡಿನ ಇನ್ನೊಂದು ಜಿಲ್ಲೆ ಚಿಕ್ಕಮಗಳೂರು ಉತ್ತರ ಕನ್ನಡ ಶಿವಮೊಗ್ಗ ಗಳಂತೆ ಮಂಗನ ಕಾಯಿಲೆಗೆ ಹೆಸರು ಮಾಡಿದೆ ಈ ವರ್ಷ ಚಿಕ್ಕಮಗಳುರು ಜಿಲ್ಲೆಯಲ್ಲಿ ಈ ವರೆಗೆ ೮ ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ವರೆಗೆ ೪ ಪ್ರಕರಣಗಳು ದಾಖಲಾಗಿವೆ ಅವುಗಳಲ್ಲಿ ಸಿದ್ಧಾಪುರದ ೨,ಶಿರಸಿ ಮತ್ತು ಹೊನ್ನಾವರ ತಾಲೂಕುಗಳ ತಲಾ ಒಂದು ಸೇರಿವೆ.

ಮಲೆನಾಡಿನ ಹೆಬ್ಬಾಗಿಲಾದ ಶಿವಮೊಗ್ಗ ಜಿಲ್ಲೆಯಲ್ಲಿ ಕೆ.ಎಫ್.ಡಿ. ಪ್ರಯೋಗಾಲಯ ಚಿಕಿತ್ಸಾ ಅನುಕೂಲಗಳಿದ್ದರೆ ಚಿಕ್ಕಮಗಳುರು ಉತ್ತರ ಕನ್ನಡ ಜಿಲ್ಲೆಗಳು ಕೊರತೆ ಅನುಭವಿಸುತ್ತಿವೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಮಂಗನ ಕಾಯಿಲೆ ಪರೀಕ್ಷೆ ಪ್ರಯೋಗಾಲಯ ಸಿದ್ಧವಾದರೂ ಅಲ್ಲಿ ಅವಶ್ಯ ಸಿಬ್ಬಂದಿಗಳ ಕೊರತೆ ಇದೆ. ಆರೋಗ್ಯ ಚಿಕಿತ್ಸೆಯ ಅನುಕೂಲಗಳು ಕನಿಷ್ಟ ಸ್ಥಿತಿಯಲ್ಲಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆ ಸೇರಿದ ಇತರ ತುರ್ತು ಚಿಕಿತ್ಸಾ ವ್ಯವಸ್ಥೆಯ ಪ್ರಾರಂಭಕ್ಕೆ ಸಾರ್ವಜನಿಕ ಅಭಿಯಾನಗಳು ನಡೆದಿವೆ. ಆದರೆ ಫಲಿತಾಂಶ ಆಶಾದಾಯಕವಾಗಿಲ್ಲ.

ಈಗಿನ ಸರ್ಕಾರದ ಪ್ರಭಾವಿ ಸಚಿವ, ಶಾಸಕರಾದ ಮಂಕಾಳು ವೈದ್ಯ ಮತ್ತು ಭೀಮಣ್ಣ ನಾಯ್ಕ ಪ್ರತಿನಿಧಿಸುವ ಶಿರಸಿ ಮತ್ತು ಹೊನ್ನಾವರ ಗಳೂ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಂಗನ ಕಾಯಿಲೆಯ ತೊಂದರೆ ಇರುವುದರಿಂದ ಆರೋಗ್ಯ ಅನುಕೂಲ ಒದಗಿಸುವ ಸುಸಜ್ಜಿತ ಆಸ್ಫತ್ರೆಗಳ  ಬಗ್ಗೆ ಇವರು ಆದ್ಯತೆ ನೀಡಬೇಕು ಎಂಬ ಬೇಡಿಕೆ ಬಲವಾಗಿದೆ.  ರಾಜಕೀಯ ಕೆಸರೆರಚಾಟದಲ್ಲಿರುವ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮತ್ತು ಶಾಸಕ, ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಈ ಜಿಲ್ಲೆಯ ಶೈಕ್ಷಣಿಕ,ಆರೋಗ್ಯ ವ್ಯವಸ್ಥೆ ಕಡೆಗಣಿಸಿ ಜಿಲ್ಲೆಯ ಹಿತಾಸಕ್ತಿಗೆ ವಿರುದ್ಧವಾಗಿ ವರ್ತಿಸಿದ್ದಾರೆ. ಹಿರಿಯರಾದ ಇವರು ಈಗಲೂ ಈ ಅನಾನುಕೂಲದ ಬಗ್ಗೆ ಗಮನ ಹರಿಸದಿರುವುದು ಜಿಲ್ಲೆಯ ಜನರ ಬೇಸರಕ್ಕೆ ಕಾರಣವಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *