


ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ ಯೋಧರು,” ಎಂದು ಶಾಸಕ ಭೀಮಣ್ಣ ಟಿ. ನಾಯ್ಕ ಬಣ್ಣಿಸಿದರು.


ಸಿದ್ದಾಪುರದ ಬಾಲಭವನದಲ್ಲಿ ನಡೆದ ಸಿದ್ದಾಪುರ ತಾಲೂಕು ಕೆ.ಎಸ್.ಆರ್.ಟಿ.ಸಿ ನಾಮಧಾರಿ ನೌಕರರ ಸಂಘದ ದಶಮಾನೋತ್ಸವ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ನೌಕರರು ಸಂಘಟಿತರಾಗುವ ಮೂಲಕ ಸಂಕಷ್ಟದಲ್ಲಿರುವ ಸಹೋದ್ಯೋಗಿಗಳಿಗೆ ನೆರವಾಗಬೇಕು. ಕಷ್ಟಕಾಲದಲ್ಲಿ ಒಬ್ಬರಿಗೊಬ್ಬರು ದಾರಿದೀಪವಾಗುವ ಮೂಲಕ ಮಾನವೀಯತೆ ಮೆರೆಯಿರಿ ಎಂದು ಶಾಸಕರು ಕಿವಿಮಾತು ಹೇಳಿದರು.


ಚಾಲಕರು ಮತ್ತು ನಿರ್ವಾಹಕರು ಕರ್ತವ್ಯ ಲೋಪವಾಗದಂತೆ ಜನರನ್ನು ಸುರಕ್ಷಿತವಾಗಿ ಗುರಿ ತಲುಪಿಸುವ ಕಾಯಕವನ್ನು ಶಾಸಕರು ಶ್ಲಾಘಿಸಿದರು.
ಇದೇ ಸಂದರ್ಭದಲ್ಲಿ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದವರನ್ನು ಅಭಿನಂದಿಸಿದರು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು, ಕೆಎಸ್‌ಆರ್‌ಟಿಸಿ ನೌಕರರು ಹಾಗೂ ಗಣ್ಯರು ಉಪಸ್ಥಿತರಿದ್ದರು.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________





