forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ ಒಳಗೆ ಲಿಖಿತ ಸ್ಫಸ್ಟೀಕರಣದ ಉತ್ತರ ದೊರೆಯದಿದ್ದರೆ ಈ ಬಗ್ಗೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಅಥವಾ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಜನಸಾಮಾನ್ಯರಿಗೆ ಅಧಿಕಾರಿಗಳು ದ್ರೋಹ ಬಗೆಯುತ್ತಿರುವ ಬಗ್ಗೆ ಮನವರಿಕೆ ಮಾಡುವುದಾಗಿ ಅರಣ್ಯ ಹಕ್ಕು ಹೋರಾಟ ಸಮೀತಿ ಅಧ್ಯಕ್ಷ ಎ. ರವೀಂದ್ರ ತಿಳಿಸಿದ್ದಾರೆ.

ಇಂದು ಸಿದ್ದಾಪುರದಲ್ಲಿ ತಹಸಿಲ್ದಾರರ ಬಳಿ ನಿಯೋಗದ ಮೂಲಕ ತೆರಳಿದ ಅರಣ್ಯ ಹಕ್ಕು ಹೋರಾಟಗಾರರು ಅರಣ್ಯ ಭೂಮಿ ಸಾಗುವಳಿ ಹಕ್ಕು ಪ್ರಕ್ರಿಯೆಯ ಅರ್ಜಿ ಪುನರ್‌ ಪರಿಶೀಲನೆ ವೇಳೆ ನಿಯಮ ಪಾಲಿಸದೆ ಅಧಿಕಾರಿಗಳು ಬೇಜವಾಬ್ಧಾರಿಯಿಂದ ವರ್ತಿಸುತ್ತಿರುವ ಬಗ್ಗೆ ದಾಖಲೆಗಳೊಂದಿಗೆ ಚರ್ಚಿಸಿದರು. ಸುಪ್ರೀಂ ಕೋರ್ಟ್‌ ನಿರ್ಧೇಶನ, ಸರ್ಕಾರದ ಸುತ್ತೋಲೆಗಳಲ್ಲಿ ಅರ್ಜಿ ಪ್ರಕ್ರೀಯೆಯ ನಿಯಮಗಳನ್ನು ಸ್ಫಷ್ಟವಾಗಿ ತಿಳಿಸಲಾಗಿದೆ. ಆದರೆ ಅಧಿಕಾರಿಗಳು ಈ ನಿಯಮಾವಳಿಗಳಿಗೆ ವ್ಯತಿರಿಕ್ತವಾಗಿ ಮಹಜರು ಪ್ರಕ್ರಿಯೆ ಮುಗಿಸಿದ್ದಾರೆ. ಮಹಜರು ಪ್ರಕ್ರೀಯೆ ನಿಯಮಾವಳಿ ಪಾಲಿಸದೆ ಅರ್ಜಿ ಪ್ರಕ್ರೀಯೆ, ಪುನರ್‌ ಪರಿಶೀಲನೆ ಹೇಗೆ ಸಂಪೂರ್ಣವಾಗುತ್ತದೆ ಎಂದು ಪ್ರಶ್ನಿಸಿದ ರವೀಂದ್ರ ನಾಯ್ಕ ಸೂಕ್ತ ಅಂಕಿಸಂಖ್ಯೆಗಳನ್ನು ನೀಡಿ ಅಧಿಕಾರಗಳನ್ನು ಪ್ರಶ್ನಿಸಿದರು. ಇದಕ್ಕೆ ಉತ್ತರ ನೀಡಿದ ಸಂಬಂಧಿಸಿದ ಅಧಿಕಾರಿಗಳು ಒಂದು ಮಹಜರನ್ನೂ ಪ್ರದರ್ಶಿಸಲು ವಿಫಲರಾದರು. ಅಧಿಕಾರಿಗಳ ಕಣ್ಣೊರೆಸುವ ಆಟದ ಬಗ್ಗೆ ಆಕ್ಷೇಪಿಸಿದ ನಾಯ್ಕ ಇದರಿಂದ ಜನಸಾಮಾನ್ಯರಿಗೆ ಅನ್ಯಾಯವಾಗುತ್ತಿದೆ ಈ ವಿಚಾರದಲ್ಲಿ ದೇವರು ಕೊಟ್ಟರೂ ಪೂಜಾರಿ ಕೊಡಲಾರ ಎನ್ನುವಂತಾಗಿದೆ ಇದನ್ನು ಸರಿಪಡಿಸಿ ೧೫ ದಿವಸಗಳ ಒಳಗೆ ಸಮರ್ಪಕ ಲಿಖಿತ ಸ್ಪಸ್ಟೀಕರಣ ನೀಡಿ ೧೫ ದಿವಸಗಳ ಗಡುವಿನಲ್ಲಿ ಉತ್ತರ ನೀಡದಿದ್ದರೆ ಜಿಲ್ಲಾಧಿಕಾರಿಗಳ ಕಛೇರಿ ಎದುರು ಪ್ರತಿಭಟನೆ ಮಾಡಿ ಮುಖ್ಯಮಂತ್ರಿಗಳ ಬಳಿಗೇ ನಿಯೋಗ ತೆರಳಿ ನ್ಯಾಯ ಕೇಳುತ್ತೇವೆ ಎಂದು ಎಚ್ಚರಿಸಿದರು.

  • ಅರಣ್ಯ ಭೂಮಿ ಹಕ್ಕು ಹೋರಾಟಗಾರರ ಅಹವಾಲು ಆಲಿಸಿದ ತಹಸಿಲ್ದಾರರು ಈ ಬಗ್ಗೆ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಮುಂದಿನ ಪ್ರಕ್ರೀಯೆ ಮುಂದುವರಿಸುವುದಾಗಿ ಭರವಸೆ ನೀಡಿದರು. ಈ ಬಗ್ಗೆ ವಿಡಿಯೋಗಳು samaajamukhi ಯೂ ಟ್ಯುಬ್‌ ನಲ್ಲಿ ಲಭ್ಯವಿವೆ

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

teachers elc results… ಶಿಕ್ಷಕರ ಸಂಘ: ಮತ್ತೆ ಗೆದ್ದ ಹಳೆ ತಂಡ

ಸಿದ್ದಾಪುರ, ಇಲ್ಲಿಯ ಶಿಕ್ಷಕರ (ಕ.ರಾ.ಪ್ರಾ.ಶಿ.ಸಂಘ ದ ಸಿದ್ಧಾಪುರ ತಾಲೂಕಾ ಶಾಖೆ) ಸಂಘಕ್ಕೆ ನಡೆದ ಚುನಾವಣೆಯಲ್ಲಿ ನಿಕಟಪೂರ್ವ ಸಂಘದ ನಿರ್ಧೇಶಕರಲ್ಲಿ ಹೆಚ್ಚಿನವರನ್ನು ಸೋಲಿಸಿ ಹಳೆ ತಂಡ...

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

Latest Posts

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ ಒಳಗೆ ಲಿಖಿತ ಸ್ಫಸ್ಟೀಕರಣದ ಉತ್ತರ ದೊರೆಯದಿದ್ದರೆ ಈ ಬಗ್ಗೆ ಜಿಲ್ಲಾಧಿಕಾರಿ ಕಛೇರಿ ಎದುರು ಪ್ರತಿಭಟನೆ ಅಥವಾ ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಿ ಜನಸಾಮಾನ್ಯರಿಗೆ ಅಧಿಕಾರಿಗಳು ದ್ರೋಹ ಬಗೆಯುತ್ತಿರುವ ಬಗ್ಗೆ...

Recommended For You

About the Author: Kanneshwar Naik

Leave a Reply

Your email address will not be published. Required fields are marked *