

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರು.


ಭಟ್ಕಳ ದುರಂತ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ. 14 ಜನರು ಒಟ್ಟಿಗೆ ಬೋಟಿನಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದರು.


ನೀರು ಪಾಲಾದವರು ಭಟ್ಕಳದ ಶಿರಾಲಿ ಮೂಲದವರು ಎಂದು ತಿಳಿದುಬಂದಿದೆ. ಮೂವರನ್ನು ಸ್ಥಳೀಯರು ರಕ್ಷಿಸಿದ್ದು ಮೂವರು ನಾಪತ್ತೆಯಾಗಿದ್ದು ಶೋಧ ಕಾರ್ಯ ಮುಂದುವರಿದೆ. ಅಸ್ವಸ್ಥಗೊಂಡಿರುವವರಿಗೆ ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಭಟ್ಕಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ಕಾರ್ಯದಲ್ಲಿ ಸ್ಥಳೀಯರು ತೊಡಗಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಬಳಿಯ ತಟ್ಟೆಹಕಲ್ಲು ಕಡಲತೀರದಲ್ಲಿ ಕಪ್ಪೆಚಿಪ್ಪು ಸಂಗ್ರಹಿಸಲು ಹೋಗಿದ್ದ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ದುರಂತ ಸುದ್ದಿ ಕೇಳಿ ಅತೀವ ನೋವಾಯಿತು. ಅಗಲಿದ ಆತ್ಮಗಳಿಗೆ ಚಿರಶಾಂತಿ ಸಿಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ಇದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ಮಾನವೀಯತೆಯ ಆಧಾರದ ಮೇಲೆ ರಾಜ್ಯ ಸರ್ಕಾರವು ದುರಂತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರವನ್ನು ನೀಡುತ್ತದೆ.
ಈ ಅಪಘಾತದಲ್ಲಿ ಇನ್ನೂ ಕೆಲವರು ಕಾಣೆಯಾಗಿದ್ದಾರೆ ಎಂಬ ಮಾಹಿತಿಯೂ ಇದೆ. ಅವರಿಗಾಗಿ ತೀವ್ರ ಹುಡುಕಾಟ ನಡೆಯುತ್ತಿದೆ. ಕಾಣೆಯಾದ ವ್ಯಕ್ತಿಗಳು ಬದುಕುಳಿದು ಅವರ ಕುಟುಂಬಗಳೊಂದಿಗೆ ಮತ್ತೆ ಸೇರಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






