


ಸಿದ್ದಾಪುರ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 95% ಕ್ಕಿಂತ ಅಧಿಕ ಅಂಕ ಪಡೆದ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಮೂಲಕ ತಾಲೂಕಿನ ಬೇಡ್ಕಣಿಯ ವ್ಯವಸಾಯ ಸೇವಾ ಸಹಕಾರಿ ಸಂಘದ 50ನೇ ವಾರ್ಷಿಕ ಸರ್ವ ಸಾಧಾರಣಾ ಸಭೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕೋಟೆ ಆಂಜನೇಯ ದೇವಾಲಯದಲ್ಲಿ ಗುರುವಾರ ನಡೆದ ಸರ್ವ ಸಾಧಾರಣಾ ಸಭೆಯಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಸಂಘದ ನಿರ್ದೇಶಕರು ಗೌರವಿಸಿ ಪ್ರೋತ್ಸಾಹಿಸಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷ ಪ್ರಶಾಂತ ನಾಯ್ಕ ಮಾತನಾಡಿ, ಸಹಕಾರಿ ಸಂಘಗಳು ಕಷ್ಟ ಎಂದು ಬಂದ ಸದಸ್ಯರ ಕೈಹಿಡಿದು ಮುನ್ನಡೆಸಬೇಕು. ಸದಸ್ಯರು ಸಹ ಸಂಸ್ಥೆ ನಮ್ಮದು ಎಂಬ ಭಾವನೆ ಹೊಂದಿರಬೇಕು. ಸಂಘವು 962 ಜನ ಶೇರು ಸದಸ್ಯರನ್ನು ಹೊಂದಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ 27 ಲಕ್ಷ ಲಾಭ ಗಳಿಸಿದೆ. ಸದಸ್ಯರು ಸಾಲವನ್ನು ಸಕಾಲಕ್ಕೆ ಭರ್ತಿ ಮಾಡುತ್ತಾ ಸಂಘದ ಬೆನ್ನೆಲುಬಾಗಿ ನಿಂತಿದ್ದಾರೆ. 50 ನೇ ವರ್ಷದ ಸಂಭ್ರಮವನ್ನು ಅರ್ಥಪೂರ್ಣವಾಗಿ ಆಚರಿಸೋಣ ಎಂದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಮಾರುತಿ ನಾಯ್ಕ ತ್ಯಾರ್ಸಿ, ಆಡಳಿತ ಮಂಡಳಿ ನಿರ್ದೇಶಕರಾದ ಶ್ರೀಧರ ನಾಯ್ಕ ಕುರಿಗೆತೋಟ, ಬಾಬು ನಾಯ್ಕ ಕಡಕೇರಿ, ಮಹಾಲಕ್ಷ್ಮೀ ನಾಯ್ಕ, ಗಣಪತಿ ನಾಯ್ಕ ಬೇಡ್ಕಣಿ, ನೀಲಕಂಠ ನಾಯ್ಕ, ಜಗದೀಶ ಗೌಡರ್ ತ್ಯಾರ್ಸಿ, ಗಣಪತಿ ನಾಯ್ಕ ಕಲಕೈ, ಗೌರಿ ಸರ್ವೋತ್ತಮ ನಾಯ್ಕ, ಗೌರ್ಯ ಹರಿಜನ, ಬ್ಯಾಂಕ್ ಪ್ರತಿನಿಧಿ ರಾಜಕುಮಾರ ಹೆಗಡೆ ಉಪಸ್ಥಿತರಿದ್ದರು. ಮುಖ್ಯ ಕಾರ್ಯನಿರ್ವಾಹಕ ಜಿ.ಕೆ.ಶಶಿಧರ ನಿರೂಪಿಸಿದರು.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________