


ರೈಲ್ವೆ ಬಳಕೆದಾರರ ಸಲಹಾ ಸಮಿತಿ ಸಭೆಯಲ್ಲಿ ಶಾಸಕ ಭೀಮಣ್ಣ ನಾಯ್ಕ್ ಭಾಗಿ

ಕನ್ನಡ ಭಾಷೆಗೆ ಪ್ರಮುಖ ಆದ್ಯತೆ ನೀಡಲು ಶಾಸಕರ ಆಗ್ರಹ
ಶಿರಸಿ:ಶಾಸಕ ಭೀಮಣ್ಣ ಟಿ.ನಾಯ್ಕ ಮುಂಬೈ ಅಲ್ಲಿ ನಡೆದ 24ನೇ ಕೊಂಕಣ ರೈಲ್ವೆ ಬಳಕೆದಾರ ಸಲಹಾ ಸಮಿತಿಯ ಸಭೆಯಲ್ಲಿ ಭಾಗಿಯಾಗಿ ತಾವು ಅಗಸ್ಟ್ 17, 2026 ರಂದು ಕಾರವಾರದಿಂದ ಸುರತ್ಕಲ್ ವರೆಗಿನ ರೈಲು ನಿಲ್ದಾಣಗಳ ಭೇಟಿ ಸಮಯದಲ್ಲಿ ಮೂಲಭೂತ ಸೌಕರ್ಯಗಳನ್ನು ಪರಿಶೀಲಿಸಿ ಅದರಲ್ಲಿನ ಕೆಲವು ನ್ಯೂನ್ಯತೆಗಳನ್ನ ಸರಿ ಪಡಿಸುವ ಕುರಿತು ಕೊಂಕಣ ರೈಲ್ವೆ ಚೇರಮನ್ ಹಾಗೂ ಮ್ಯಾನೇಜಿಂಗ್ ಡೈರೆಕ್ಟರ್ ಅವರಿಗೆ ಮನದಟ್ಟು ಮಾಡಿದರು.



ಕೊಂಕಣ ರೈಲ್ವೆ ನಿಲ್ದಾಣಗಳಲ್ಲಿ ಮೂಲ ಸೌಕರ್ಯ ಕಲ್ಪಿಸುವಂತೆ ಹಾಗೂ ಪ್ರಾದೇಶಿಕ ಭಾಷೆ ಕನ್ನಡಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಭೆಯಲ್ಲಿ ಆಗ್ರಹಿಸಿದರು.
ಉತ್ತರ ಕನ್ನಡ ಹಾಗೂ ಉಡುಪಿ ನಿಲ್ದಾಣವಾರು ಸಮಸ್ಯೆಗಳನ್ನು ಉಲ್ಲೇಖಿಸಿ ಪ್ಲಾಟ್‌ಫಾರ್ಮ್ ಶೆಲ್ಟರ್, ವಾಟರ್ ಪ್ರೂಫಿಂಗ್, ನೀರು ಮರುಪೂರಣ ಘಟಕ ಹಾಗೂ ಆಟೋ ಪಿಕಪ್ ಏರಿಯಾ ಕಲ್ಪಿಸುವಂತೆ ಮತ್ತು ಮುರ್ಡೇಶ್ವರ ರೈಲನ್ನು ಅಂಕೋಲಾವರೆಗೆ ವಿಸ್ತರಿಸುವಂತೆ ಕೋರಿದ್ದಾರೆ.
ಪ್ರವಾಸಿಗರ ಹಿತದೃಷ್ಟಿಯಿಂದ ಮುರುಡೇಶ್ವರದಲ್ಲಿ ಪ್ಲಾಟ್‌ಫಾರ್ಮ್ ಹಾಗೂ ಭಟ್ಕಳದಲ್ಲಿ ಹೆಚ್ಚಿನ ದೀಪಗಳ ವ್ಯವಸ್ಥೆ ಹಾಗೂ ವಾರಕ್ಕೊಮ್ಮೆ ಸಂಚರಿಸುವ ರೈಲಿಗೆ ನಿಲುಗಡೆ ನೀಡಬೇಕೆಂದು ಒತ್ತಾಯಿಸಿದರು.
ಜೊತೆಗೆ ಕುಂದಾಪುರ, ಉಡುಪಿ, ಸುರತ್ಕಲ್ ಸೇರಿದಂತೆ ಒಟ್ಟಾರೆ ಎಲ್ಲಾ ರೈಲ್ವೆ ನಿಲ್ದಾಣಗಳಲ್ಲಿ ನಾಮಫಲಕಗಳು ಹಾಗೂ ಪ್ರದರ್ಶನ ಫಲಕಗಳಲ್ಲಿ ಪ್ರಾದೇಶಿಕ ಭಾಷೆಯಾದ ಕನ್ನಡಕ್ಕೆ ಪ್ರಮುಖ ಆದ್ಯತೆ ನೀಡಬೇಕು ಎಂದರು.

🪀



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________





