

ರಾಜ್ಯದ ೨೬ ಈಡಿಗ ಉಪ ಪಂಗಡಗಳನ್ನು ಸೇರಿಸಿದ ಮಾಜಿಮುಖ್ಯಮಂತ್ರಿ ಎಸ್. ಬಂಗಾರಪ್ಪ & ಅವರ ಪುತ್ರ ಸಚಿವ ಮಧು ಬಂಗಾರಪ್ಪಾ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ರಾಷ್ಟ್ರೀಯ ಈಡಿಗ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ವಿರುದ್ಧ ಕಾಂಗ್ರೆಸ್ ಮುಖಂಡರು ಎಚ್ಚರಿಕೆ ನೀಡಿದ್ದಾರೆ.


ಕಾಂಗ್ರೆಸ್ ನ ನಾನಾ ವಿಭಾಗಗಳ ಅಧ್ಯಕ್ಷರು,ಪದಾಧಿಕಾರಿಗಳಾಗಿರುವ ಎನ್. ಟಿ. ನಾಯ್ಕ ದ್ಯಾವಾಸ, ವಿನಾಯಕ ನಾಯ್ಕ ಕೊoಡಲಿ, ರಾಘವೇಂದ್ರ ಕಾವಂಚೂರು, ಬಾಬು ನಾಯ್ಕ ಕಡಕೇರಿ ಸೇರಿದ ಪ್ರಮುಖರು.. ಸ್ವಯಂ ಘೋಷಿತ ಸ್ವಾಮೀಜಿ ಮತ್ತು ಈಡಿಗ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ತಮ್ಮನ್ನು ಯಾರು ಪೀಠಾಧಿಪತಿ ಮತ್ತು ರಾಷ್ಟ್ರೀಯ ಈಡಿಗ ಮಹಾ ಮಂಡಳಿ ಗಳ ಅಧ್ಯಕ್ಷರನ್ನಾಗಿ ಮಾಡಿದರು ಎಂಬುದನ್ನು ಸ್ಪಷ್ಟಪಡಿಸಬೇಕು. ಮನುವಾದಿ ಹಿನ್ನೆಲೆಯ ಈ ಸ್ವಾಮಿ ಈಡಿಗ ಪ್ರಮುಖ ಪ್ರಶ್ನಾತೀತ ನಾಯಕರಾದ ಬಂಗಾರಪ್ಪ ಮತ್ತು ಮಧು ಬಂಗಾರಪ್ಪ ವಿರುದ್ಧ ಮಾತನಾಡುವುದನ್ನು ಮುಂದುವರಿಸಿದರೆ ರಾಜ್ಯಾದ್ಯಂತ ಪ್ರತಿಭಟನೆ ಎದುರಿಸಬೇಕಾಗುತ್ತದೆ. ಎಲ್ಲಿಂದನೋ ಬಂದು ನಮ್ಮ ನಾಯಕರ ಬಗ್ಗೆ ಇಲ್ಲಸಲ್ಲದ ಮಾತನಾಡುವ ಸ್ವಾಮೀಜಿ ತಮ್ಮ ನಡವಳಿಕೆ ಬದಲಾಯಿಸದಿದ್ದರೆ ಪರಿಣಾಮ ಸರಿ ಇರುವುದಿಲ್ಲ ಎಂದು ಮಾಧ್ಯಮ ಪ್ರಕಟಣೆ ಯಲ್ಲಿ ಎಚ್ಚರಿಸಿದ್ದಾರೆ.



_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________




