bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ

ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಕರೆ ನೀಡಿದರು.
ಸಿದ್ದಾಪುರ ಪಟ್ಟಣ ಹಾಗೂ ಗ್ರಾಮೀಣ ಭಾಗದ ವಿವಿಧೆ

ಡೆ ವಾರ್ಡ್ ಹಾಗೂ ಗ್ರಾಮ ಪಂಚಾಯ್ತಿ ಮಟ್ಟದ ಗ್ಯಾರೆಂಟಿ ಸಮಿತಿ ರಚನೆ ಹಾಗೂ ಭಾರತ್ ಜೋಡೋ ಯುವ ಸಂಘದ ಕುರಿತು ಸಭೆ ನಡೆಸಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಯುವಜನತೆಯ ಮೇಲಿನ ಕಾಳಜಿಯಿಂದ ಭಾರತ್ ಜೋಡೋ ಸಂಘ ರಚನೆಗೆ ಸೂಚನೆ ನೀಡಿದ್ದಾರೆ‌. ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಭಾರತ್ ಜೋಡೋ ಸಂಘ ನೊಂದಣಿ ಮಾಡಿಸಿ ಪ್ರತಿ ಸಂಘಕ್ಕೆ 10 ಲಕ್ಷ ಅನುದಾನ ನೀಡಲಾಗುತ್ತದೆ. ಯುವಜನತೆ ಸಂಘ ನೊಂದಣಿ ಮಾಡಿಕೊಂಡು ಸರ್ಕಾರ ನೀಡುವ 10 ಲಕ್ಷ ರು ಅನುದಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದ ಅವರು, ಸರ್ಕಾರದ ಪಂಚ ಗ್ಯಾರೆಂಟಿ ಯೋಜನೆಯಿಂದ ಯಾರು ವಂಚಿತರಾಗಬಾರದೆಂದು ಸರ್ಕಾರ ಪಂಚಾಯತ ಮಟ್ಟದ ಸಮಿತಿ ರಚಿಸಲು ಸುತ್ತೋಲೆ ಹೊರಡಿಸಿದ್ದು, ಸಾಮಾಜಿಕ ನ್ಯಾಯದ ಆಧಾರದ ಮೇಲೆ ಸಮಿತಿ ರಚಿಸಲಾಗುವುದು.‌ ಗ್ಯಾರೆಂಟಿ ಯೋಜನೆಗಳ ನಡುವೆಯೂ ಶಿರಸಿ-ಸಿದ್ದಾಪುರ ಕ್ಷೇತ್ರಕ್ಕೆ ಅತಿ ಹೆಚ್ಚು ಅನುದಾನ ತಂದು ಅಭಿವೃದ್ಧಿ ಮಾಡಲಾಗಿದೆ. ಸಿದ್ದಾಪುರ ಪಟ್ಟಣಕ್ಕೆ‌ ಶರಾವತಿ ನದಿಯಿಂದ‌ ನೀರು ಪೂರೈಸುವ ಯೋಜನೆಗೆ ಬರುವ ಎಪ್ರಿಲ್ ಒಳಗೆ ಚಾಲನೆ ನೀಡಲಾಗುವುದು ಎಂದರು.


ತಾಲೂಕಾ ಗ್ಯಾರೆಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕೆ.ಜಿ.ನಾಗರಾಜ ಮಾತನಾಡಿ, ಪ್ರತಿ ಗ್ರಾಪಂ, ಪಪಂ, ನಗರಸಭೆ ವ್ಯಾಪ್ತಿಯಲ್ಲಿ ಭಾರತ ಜೋಡೋ ಸಂಘದ ಕುರಿತು ಅರಿವು ಮೂಡಿಸಲಾಗುತ್ತಿದೆ. ಪ್ರತಿಯೊಬ್ಬ ಯುವಜನತೆಗೆ ತಲುಪಬೇಕೆಂಬ ಉದ್ದೇಶದಿಂದ ಸಭೆ ನಡೆಸಿ ಮಾಹಿತಿ ನೀಡಲಾಗುತ್ತಿದೆ. ಜತೆಗೆ ಪಂಚಾಯತ ಮಟ್ಟದಲ್ಲಿ ಪಂಚ ಗ್ಯಾರೆಂಟಿ ಸಮಿತಿ ರಚಿಸಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಪಟ್ಟಣ‌ ಪಂಚಾಯತ ಮುಖ್ಯಾಧಿಕಾರಿ ಮಹಮ್ಮದ್ ಯಾಕೂಬ್, ತಾಪಂ ಇಓ ದೇವರಾಜ ಹಿತ್ತಲಕೊಪ್ಪ, ಪ್ರಮುಖರಾದ ವಿ.ಎನ್.ನಾಯ್ಕ, ವೀರಭದ್ರ ನಾಯ್ಕ, ಮಾರುತಿ ಕಿಂದ್ರಿ, ಮುನಾವರ್ ಗುರಕಾರ್ ಹಾಜರಿದ್ದರು.

ಶಾಸಕ ಭೀಮಣ್ಣ ನಾಯ್ಕ ಶುಕ್ರವಾರ ಪಟ್ಟಣದ ಹೊಸೂರಿನ ಬಂಕೇಶ್ವರ ದೇವಸ್ಥಾನ ಸಭಾಭವನ, ಬಾಲಭವನ ಹಾಗೂ ಕೊಂಡ್ಲಿಯ ಆಂಜನೇಯ ದೇವಸ್ಥಾನದ ಸಭಾಭವನ, ತಾಲೂಕಿನ ಮನಮನೆ ಗ್ರಾಪಂ ಸಭಾಭವನ, ಹಲಗೇರಿ ಗ್ರಾಪಂ ಸಭಾಭವನ ಹಾಗೂ ವಾಜಗೋಡ ಗ್ರಾಮ ಪಂಚಾಯ್ತಿ ಸಭಾಭವನದಲ್ಲಿ ಗ್ಯಾರೆಂಟಿ ಸಮಿತಿ ರಚನೆ ಹಾಗೂ ಭಾರತ್ ಜೋಡೋ ಸಂಘ ನೊಂದಣಿ ಕುರಿತು ಸಭೆ ನಡೆಸಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಕರೆ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *