ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ: ಪ್ರಸಾದ್

‘ಪರಿಸರದ ಅಳಿವು ಉಳಿವಿಗೆ ಮನುಷ್ಯನೇ ಕಾರಣ. ಮನುಷ್ಯ ಮನಸ್ಸು ಮಾಡಿದರೆ ಪರಿಸರವನ್ನು ಉಳಿಸಿಕೊಳ್ಳುವುದು ಸಾಧ್ಯವಿದೆ. ಪರಿಸರದ ಕೆಲಸವನ್ನು ನಾವು ಪಕ್ಷಿಗಳಿಂದ ಕಲಿಯಬೇಕು. ಅವು ನಿರಂತರವಾಗಿ ಪ್ರತಿದಿನವೂ ಬೀಜಪ್ರಸಾರ ಮಾಡುವ ಮೂಲಕ ಕಾಡಿನ ಬೆಳವಣಿಗೆಗೆ ಸಹಾಯವಾಗುತ್ತದೆ. ನಾವು ಮನುಷ್ಯರು ವರ್ಷಕ್ಕೊಂದು ಸಲ ಪರಿಸರ ದಿನಾಚರಣೆ ಮಾಡಿ ಕೈತೊಳೆದುಕೊಳ್ಳುತ್ತೇವೆ. ಪಕ್ಷಿಗಳಿಗಿರುವ ಪರಿಸರ ಕಾಳಜಿಯನ್ನು ನಾವು ಮೈಗೂಡಿಸಿಕೊಳ್ಳಬೇಕು’ ಎಂದು ಪಕ್ಷಿವೀಕ್ಷಕ ಪ್ರಸಾದ್ ಹೇಳಿದರು.
ಅವರು ಇಂಡಿಯಾ ಫೌಂಡೇಷನ್ ಫಾರ್ ದಿ ಆಟ್ರ್ಸ ಸಂಸ್ಥೆಯ ಆಶ್ರಯದಲ್ಲಿ ತಾಲೂಕಿನ ಆನಗೋಡ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ‘ಮಕ್ಕಳಿಗಾಗಿ ಎರಡನೇ ಹಂತದ ಪಕ್ಷಿ ವೀಕ್ಷಣೆ ವಿಶೇಷ ತರಬೇತಿ ಕಾರ್ಯಕ್ರಮ’ದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.
‘ಚಿನ್ನದ ಸೂಜಿ ಅಂತ ಕಣ್ಣಿಗೆ ಚುಚ್ಚಿಕೊಂಡರೆ ನೋವಾಗುವುದು ನಮಗೇ. ಹಾಗಾಗಿ ಇದು ಸರಕಾರದ ಕೆಲಸ ಅಂತ ಕಾಯದೆ ಪ್ರತಿಯೊಬ್ಬರೂ ಪರಿಸರ ರಕ್ಷಣೆಯ ಕೆಲಸ ತಮ್ಮ ಕೈಲಾದ ಮಟ್ಟಿಗೆ ಮಾಡಬೇಕು’ ಎಂದು ಅವರು ಹೇಳಿದರು.
ದೈಹಿಕ ಶಿಕ್ಷಣ ತಾಲೂಕ ಅಧಿಕಾರಿ ರವೀಂದ್ರ ಕಾಪಸೆ ಕಾರ್ಯಕ್ರಮವನ್ನು ಉದ್ಘಾಟಿಸಿದರು. ‘ಮಕ್ಕಳು ಪಕ್ಷಿವೀಕ್ಷಣೆಯ ಜೊತೆಗೆ ಅವುಗಳ ಬಗ್ಗೆ ಹೆಚ್ಚಿನ ಜ್ಞಾನವನ್ನು ಗೂಗಲ್ ಮೂಲಕ ಸಂಗ್ರಹಿಸಬಹುದು’ ಎಂದು ಅವರು ತಿಳಿಸಿದರು.
ವಿದ್ಯಾರ್ಥಿನಿ ಅಶ್ವಿನಿ ಭಟ್ಟ ಹಾಡಿದ ಸ್ವಾಗತಗೀತೆಯೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮುಖ್ಯಾಧ್ಯಾಪಕ ಸುಧಾಕರ ನಾಯಕ ಸ್ವಾಗತಿಸಿದರು. ಐಎಫ್‍ಏ ಗ್ರ್ಯಾಂಟಿ ಗಣೇಶ ಪಿ. ನಾಡೋರ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಸುರೇಶ್ ಕುಮಾರ್(ಬರ್ಡ್ ಸುರೇಶ್), ಹರೀಶ್, ರಾಹುಲ್, ಶಿಕ್ಷಕಿಯರಾದ ಸವಿತಾ ಹೆಗಡೆ, ಪ್ರತಿಭಾ ನಾಯ್ಕ ಉಪಸ್ಥಿತರಿದ್ದರು. ಶಿಕ್ಷಕಿ ಕುಸುಮಾ ನಾಯಕ ವಂದಿಸಿದರು.
ಅದಕ್ಕೂ ಮೊದಲು ಸಂಪನ್ನೂಲ ವ್ಯಕ್ತಿಗಳ ಮಾರ್ಗದರ್ಶನದಲ್ಲಿ ಶಾಲೆಯ ಆಯ್ದ 25 ಮಕ್ಕಳನ್ನು ಕಾಡಿಗೆ ಕರೆದೊಯ್ದು ಪಕ್ಷಿವೀಕ್ಷಣೆಯ ಪಟ್ಟುಗಳನ್ನು ಹೇಳಿಕೊಡಲಾಯಿತು. ಸುರೇಶ್ ಕುಮಾರ್ ಸುಮಾರು 175 ಹಕ್ಕಿಗಳ ಮಾಹಿತಿಯಿರುವ ಬೋಷರ್‍ಗಳನ್ನು ಮಕ್ಕಳಿಗೆ ಉಚಿತವಾಗಿ ಹಂಚಿ, ಪಕ್ಷಿವೀಕ್ಷಣೆಯಲ್ಲಿ ದುರ್ಬೀನು ಬಳಕೆಯ ಕುರಿತು ಮಾಹಿತಿ ನೀಡಿದರು. ಕಾಡಿನಲ್ಲಿ ಪಕ್ಷಿಗಳ ಚಲನವಲನ, ಪಕ್ಷಿಗಳಿಗೂ ಮರಗಳಿಗೂ ಇರುವ ಸಂಬಂಧ, ಪ್ಲಾಸ್ಟಿಕ್‍ನಿಂದಾಗುವ ಹಾನಿ, ಪಕ್ಷಿಗಳು ಹಾಗೂ ಮಾನವನ ಕೃಷಿ ಚಟುವಟಿಕೆಗಳಿಗಿರುವ ಸಂಬಂಧ ಮುಂತಾದ ವಿಷಯವಾಗಿ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *