ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು?

ಶಿಶು ಮತ್ತು ಮಹಿಳೆಯರಿಗೆ ಮನೆಗೇ ಸೌಲಭ್ಯ, ಬಿಸಿ ಊಟದ ಅಕ್ಕಿ ತರಲು ವಿದ್ಯಾರ್ಥಿಗಳೇಕೆ ಶಾಲೆಗೆ ಹೋಗಬೇಕು?
ರಾಜ್ಯ ಮತ್ತು ದೇಶದಲ್ಲಿ ಶಿಸುಗಳು ಮತ್ತು ಮಹಿಳೆಯರಿಗೆ ಆಹಾರ ಪೂರೈಸುವ ಅಂಗನವಾಡಿಗಳ ಅಡುಗೆ ವ್ಯವಸ್ಥೆ ನಿಲ್ಲಿಸಿ ಫಲಾನುಭವಿಗಳ ಮನೆಗೆ ಆಹಾರ ಸಾಮಗ್ರಿ ಒದಿಸುವ ಸರ್ಕಾರಗಳ ಹೊಸ ಕ್ರಮಕ್ಕೆ ವಿರೋಧ ವ್ಯಕ್ತವಾಗಿದೆ.
ಬಹಳ ವರ್ಷಗಳಿಂದ ಅಂಗನವಾಡಿಗಳಲ್ಲಿ ಆಹಾರ ತಯಾರಿಸಿ ಮಕ್ಕಳಿಗೆ,ಮಹಿಳೆಯರಿಗೆ ನೀಡುವ ವ್ಯವಸ್ಥೆ ಜಾರಿಯಲ್ಲಿತ್ತು ಆದರೆ ಇದೇ ವರ್ಷದಿಂದ ಅಂಗನವಾಡಿಗಳಲ್ಲಿ ಆಹಾರ ತಯಾರಿಕೆ ನಿಲ್ಲಿಸಿ, ಆಹಾರ ಸಾಮಗ್ರಿಗಳನ್ನು ನೇರವಾಗಿ ಮಹಿಳೆಯರು, ಮಕ್ಕಳಿಗೆ ತಲುಪಿಸುವ ವ್ಯವಸ್ಥೆಯನ್ನು ಕಾರ್ಮಿಕ ಸಂಘಟನೆಗಳು ವಿರೋಧಿಸಿವೆ.
ಅಂಗನವಾಡಿಗಳಲ್ಲಿ ಆಹಾರ ತಯಾರಿಕೆ, ಅಂಗನವಾಡಿಗಳಲ್ಲಿ ಮಕ್ಕಳಿಗೆ, ಮಹಿಳೆಯರಿಗೆ ಪೌಷ್ಠಿಕ ಆಹಾರ ನೀಡಿಕೆ ಸರ್ಕಾರದ ಮೂಲಭೂತ ಕರ್ತವ್ಯ ಆದರೆ ಈ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಿ ನೆಗಡಿ ಬಂದಾಗ ಮೂಗನ್ನೇ ಕೊಯ್ದುಕೊಳ್ಳುವ ಅವಿವೇಕದ ಕ್ರಮ ಸರ್ಕಾರಗಳಿಂದ ಆಗುತ್ತಿರುವ ಬಗ್ಗೆ ಕಮ್ಯುನಿಷ್ಟ್ ಪಕ್ಷಗಳ ಕಾರ್ಮಿಕ ಸಂಘಟನೆಗಳು ತೀವೃ ವಿರೋಧ ವ್ಯಕ್ತಪಡಿಸಿವೆ. ಈ ವಿರೋಧದ ನಡುವೆಯೂ ಸರ್ಕಾರ ಮಕ್ಕಳು, ಮಹಿಳೆಯರಿಗೆ ಅಂಗನವಾಡಿ ಕೇಂದ್ರಗಳಿಂದಲೇ ನೇರ ಆಹಾರ ಸಾಮಗ್ರಿ ಒದಿಸುವ ಕಾರ್ಯಕ್ರಮ ಮುಂದುವರಿದಿದೆ.

ಅಕ್ಕಿ ತರಲು ವಿದ್ಯಾರ್ಥಿಗಳು ಶಾಲೆಗೆ ಹೋಗಬೇಕೆ?

     ಕರೋನಾ ಭಯ, ಇಂಡಿಯಾ ಲಾಕ್‍ಔಟ್ ಗಳ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳ ರಜೆ, ಬಿಸಿಯೂಟದ ವ್ಯವಸ್ಥೆ ಸ್ಥಗಿತಗೊಳಿಸಲಾಗಿದೆ. ಈ ರಜೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಪೂರೈಸುತಿದ್ದ ಬಿಸಿಯೂಟದ ಅಕ್ಕಿಯನ್ನು ಶಾಲೆಗಳ ಮೂಲಕ ವಿದ್ಯಾರ್ಥಿಗಳಿಗೆ ವಿತರಿಸಲು ಶಿಕ್ಷಣ ಇಲಾಖೆ ಆದೇಶ ಮಾಡಿದೆ. ಆದರೆ ವಿದ್ಯಾರ್ಥಿಗಳನ್ನು, ಅವರ ಪಾಲಕರನ್ನು ಶಾಲೆಗೆ ಕರೆಸಿ ಅಕ್ಕಿ ನೀಡುವುದರಿಂದ ಸಾಮಾಜಿಕ ಅಂತರ, ಲಾಕ್ ಔಟ್ ಉಲ್ಲಂಗಘನೆಯಾಗುತ್ತಿದೆ. ಈ ಬಗ್ಗೆ ವಿರೋಧ ವ್ಯಕ್ತಪಡಿಸಿರುವ ಕೆಲವರು ಲಾಕ್‍ಔಟ್ ವೇಳೆಯಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರನ್ನು ಶಾಲೆಗೆ ಕರೆಯಿಸಿ, ಅಕ್ಕಿ ನೀಡುವ ಬದಲು ವಿದ್ಯಾರ್ಥಿಗಳ ಮನೆಗೇ ಅಕ್ಕಿ ಪೂರೈಸಬೇಕು ಎನ್ನುವ ಬೇಡಿಕೆ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಸುಭಾಶ್ಚಂದ್ರ ನಾಯ್ಕ ಹೆಗ್ನೂರು ಸರ್ಕಾರ ತಾನೇ ಶರತ್ತು, ನಿಯಮಗಳನ್ನು ವಿಧಿಸಿ, ಅದನ್ನು ಉಲ್ಲಂಘಿಸಲು ಪ್ರೇರೇಪಿಸುತ್ತಿದೆ. ಮಕ್ಕಳಿಗೆ ಶಾಲೆಗೆ ಕರೆಸಿ ಅಕ್ಕಿ ನೀಡುವ ಬದಲು ವಿದ್ಯಾರ್ಥಿಗಳ ಮನೆಗೇ ಅಕ್ಕಿ ಪೂರೈಸುವ ಬಗ್ಗೆ ಅಧಿಕಾರಿಗಳಿಗೆ ನಿರ್ಧೇಶನ ನೀಡಲು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಅವಶ್ಯವಿರುವವರಿಗೆ ಅಕ್ಕಿ ವಿತರಿಸದೆ, ಅವಶ್ಯವಿದ್ದವರಿಗೆ ಆಹಾರ ತಯಾರಿಸಿ ಕೊಡದೆ ಸರ್ಕಾರ ಜನವಿರೋಧಿಯಾಗಿ ವರ್ತಿಸುತ್ತಿರುವುದು ಕಾರ್ಮಿಕ, ಮತ್ತು ಎಡಪಕ್ಷಗಳ ಸಂಘಟನೆಗಳನ್ನು ಬಿಟ್ಟು ಉಳಿದವರಿಗೆ ಇದು ಅರ್ಥವಾಗದಿರುವುದು ದುರಂತ ಎನ್ನಲಾಗುತ್ತಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *