ಲಾಕ್‍ಔಟ್‍ಲಾಭ, ಅರಣ್ಯ ಇಲಾಖೆಯ ಹಿಂಸೆ,ಜನಸಾಮಾನ್ಯರ ಹಿತಕಾಯಲು ರೈತಸಂಘದ ಒತ್ತಾಯ

ಉತ್ತರಕನ್ನಡ ಜಿಲ್ಲೆಯಲ್ಲಿ ಲಾಕ್‍ಔಟ್ ನಿಂದ ತೊಂದರೆಯಾಗಿ ರೈತರ ಬೆಳೆ ಬೆಳೆದಲ್ಲೇ ನಾಶವಾಗುತ್ತಿದೆ. ಲಾಕ್ ಔಟ್- ನಿಶೇಧಾಜ್ಞೆ ತೊಂದರೆಯ ಲಾಭ ಪಡೆದು ಅರಣ್ಯ ಇಲಾಖೆಯ ಅಧಿಕಾರಿಗಳು ರೈತರನ್ನು ಹಿಂಸಿಸುತಿದ್ದಾರೆ. ಆದರೆ ನಮ್ಮ ಜನಪ್ರತಿನಿಧಿಗಳು ಈ ತೊಂದರೆಗಳ ಬಗ್ಗೆ ಗಮನಹರಿಸದೆ ವೈಯಕ್ತಿಯ ಹಿತಕ್ಕಾಗಿ ಬಿಲಸೇರಿದ್ದಾರೆ ಎಂದು ಕೆಲವರು ಆರೋಪಿಸಿದ್ದು ಇಂಥ ಜನಪ್ರತಿನಿಧಿಗಳಿಂದಾಗಿ ಉತ್ತರಕನ್ನಡ ಜಿಲ್ಲೆಯಲ್ಲಿ ಅರಾಜಕತೆ ಸೃಷ್ಟಿಯಾಗಿದೆ ಎಂದು ದೂರಿದ್ದಾರೆ.
ಉತ್ತರಕನ್ನಡ ಜಿಲ್ಲೆಯ ಕುಮಟಾದ ಗೋಕರ್ಣ,ಸಿದ್ದಾಪುರದ ಅಕ್ಕುಂಜಿ, ಗೋಳಗೋಡು, ಅಂಕೋಲಾ ಸೇರಿದಂತೆ ಅನೇಕ ಕಡೆ ತರಕಾರಿ,ಕಲ್ಲಂಗಡಿ ಹಣ್ಣುಗಳನ್ನು ಬೆಳೆದು ಮಾರಲಾಗದೆ ಹಾನಿ ಅನುಭವಿಸಿದ್ದಾರೆ. ಜಿಲ್ಲೆಯ ಅನಾನಸ್, ಬಾಳೆ, ಪಪ್ಪಾಯಿ, ಕಲ್ಲಂಗಡಿ ಬೆಳೆಗಾರರು ಹಾನಿ ಅನುಭವಿಸಿ ಆತ್ಮಹತ್ಯೆಯ ದಾರಿ ಹಿಡಿಯುವಂತಾಗಿದೆ. ಈ ಸಮಯದಲ್ಲಿ ಪರಿಸ್ಥಿತಿಯ ಲಾಭ ಪಡೆದು ಜಿಲ್ಲೆಯ ಪೊಲೀಸ್, ಅರಣ್ಯ ಇಲಾಖೆಯ ಅಧಿಕಾರಿಗಳು ಬಡರೈತರನ್ನು ಹಿಂಸಿಸುತಿದ್ದಾರೆ. ಈ ಸಮಯದಲ್ಲಿ ಜಿಲ್ಲೆಯ ಜನರ ನೆರವಿಗೆ ಬರಬೇಕಾದ ಸಭಾಧ್ಯಕ್ಷರು, ಸಂಸದರು, ಶಾಸಕರು ಹೇಡಿಗಳಂತೆ ಬಿಲಸೇರಿದ್ದಾರೆ.
ವೈದ್ಯಕೀಯ ತುರ್ತುಪರಿಸ್ಥಿತಿಯ ನೆಪದಲ್ಲಿ ಜಿಲ್ಲೆಯಲ್ಲಿ ಅಧಿಕಾರಿಗಳ ಅಟ್ಟಹಾಸ ನಡೆಯುತ್ತಿದೆ. ಈ ಬಗ್ಗೆ ಜನಸಾಮಾನ್ಯರ ಪರವಾಗಿ ಮಾತನಾಡಬೇಕಾದ ವಿರೋಧ ಪಕ್ಷಗಳೂ ಮೌನವೃತ ಪ್ರಾರಂಭಿಸಿವೆ ಈ ಬಗ್ಗೆ ಜನರೇ ಬಂಡೇಳುವ ಮೊದಲು ಸರ್ಕಾರ ಜನಸಾಮಾನ್ಯರ ಸಂಕಷ್ಟ ಕೇಳಬೇಕು ಎಂದು ಹೆಸರುಹೇಳಲಿಚ್ಛಿಸದ ಕೆಲವರು ಆಗ್ರಹಿಸಿದ್ದಾರೆ.
ಈ ಸಮಸ್ಯೆಗಳ ಬಗ್ಗೆ ಕೆಲವು ಮುಖಂಡರ ಪರವಾಗಿ ಮಾತನಾಡಿದ ರಾಜ್ಯ ರೈತಸಂಘದ ಸಿದ್ದಾಪುರ ತಾಲೂಕಾಧ್ಯಕ್ಷ ವೀರಭದ್ರನಾಯ್ಕ ಮಳಲವಳ್ಳಿ ಉತ್ತರಕನ್ನಡ ಜಿಲ್ಲೆಯಲ್ಲಿ ಆಡಳಿತ ಪಕ್ಷ, ಜನಪ್ರತಿನಿಧಿಗಳು, ವಿರೋಧಪಕ್ಷಗಳ ಬೇಜವಾಬ್ದಾರಿಯಿಂದ ರೈತರು, ಜನಸಾಮಾನ್ಯರು ಸಂಕಷ್ಟಕ್ಕೆ ಸಿಕ್ಕಿದ್ದಾರೆ. ಈ ಪರಿಸ್ಥಿತಿಯ ಲಾಭ ಪಡೆದು ಅರಣ್ಯ ಇಲಾಖೆಯ ಅಧಿಕಾರಿಗಳು ರೈತರನ್ನು ಹಿಂಸಿಸುತಿದ್ದಾರೆ, ಜನರು ದಂಗೆ ಏಳುವ ಮೊದಲು ಸರ್ಕಾರ ಈ ಅಧಿಕಾರಿಗಳ ಅಟ್ಟಹಾಸ ನಿಲ್ಲಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ದಾಪುರ
ಜಿಲ್ಲೆಯಲ್ಲಿ ಮಂಗನ ಕಾಯಿಲೆ ತೀವೃವಾಗಿ ಹರಡಿದ್ದು ಇದರಿಂದ ಈಗಾಗಲೇ ಸಿದ್ದಾಪುರ ತಾಲೂಕಿನ ಆರು ಜನ ಸಾವನ್ನಪ್ಪಿದ್ದು ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2ಲಕ್ಷ ರೂ ಪರಿಹಾರ ನೀಡುವಂತೆ ಹಳಿಯಾಳ ಕ್ಷೇತ್ರದ ಶಾಸಕ ಆರ್.ವಿ.ದೇಶಪಾಂಡೆ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರಬರೆದಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ...

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

Latest Posts

kamalaakara bhandaari no more

ಸಮಾಜಮುಖಿ ಕೆಲಸಗಾರ, ಚಳುವಳಿಗಳ ಹಿತೈಷಿ, ಪುಸ್ತಕ ಪರಿಚಾರಕ, ಬಂಡಾಯ ಪ್ರಕಾಶನ ಮತ್ತು ಸಹಯಾನದ ಒಡನಾಡಿ ಕಮಲಾಕರ ಭಂಡಾರಿಯವರು ಈ ಬೆಳಿಗ್ಗೆ ಅಗಲಿದರೆಂದು ತಿಳಿಸಲು ತೀವ್ರ ದುಃಖವಾಗುತ್ತಿದೆ. ಅವರಿಗೆ ಅಂತಿಮ ನಮನಗಳು. ಅವರ ಆಶಯದಂತೆ ಮತ್ತು ಬಾಳಸಂಗಾತಿ ಪ್ರೀತಿಯ ಇನ್ನಕ್ಕ (ಇಂದಿರಾ) ಮಕ್ಕಳಾದ ಛಾಯಾ ಮತ್ತು ಅನಿಲ್ ಅವರ ಸದಾಶಯದಂತೆ ಅವರ ದೇಹವನ್ನು ವೈದ್ಯಕೀಯ ಸಂಶೋಧನೆಗಾಗಿ...

O

Recommended For You

About the Author: Kanneshwar Naik

Leave a Reply

Your email address will not be published. Required fields are marked *