ಬಿ.ಎಸ್.ವೈ ವಿರುದ್ಧ ಬಿ.ಜೆ.ಪಿ.ಸಮರ!

ಚೀನಾದ ವುಹಾನ್ ಪ್ರಾಂತ್ಯದಿಂದ ಆರಂಭವಾದ ಮಾರಣಾಂತಿಕ ಕೊರೋನಾ ವೈರಸ್ ಇಂದು ಇಡೀ ವಿಶ್ವಕ್ಕೆ ಬೆದರಿಕೆ ಒಡ್ಡಿದೆ. ಚೀನಾದಿಂದ ಅಮೆರಿಕವರೆಗೆ ಸುಮಾರು 60,000ಕ್ಕೂ ಹೆಚ್ಚು ಹೆಣಗಳನ್ನು ಉರುಳಿಸಿವೆ. ಆದರೂ ಇಲ್ಲೆಲ್ಲೂ ಸಹ ಕೊರೋನಾ ಎಂಬ ವೈರಸ್‍ಗೆ ಧರ್ಮದ ಹಣೆಪಟ್ಟಿ ಕಟ್ಟಿರಲಿಲ್ಲ. ಆದರೆ, ಈ ವೈರಸ್ ಭಾರತಕ್ಕೆ ಪ್ರವೇಶಿಸಿದ ನಂತರ ಮುಸ್ಲಿಂ ಎಂಬ ಹಣೆಪಟ್ಟಿ ಕಟ್ಟಲಾಗಿತ್ತು.

ಈ ನಡುವೆ ದೆಹಲಿ ಮತ್ತು ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕೆಲ ಘಟನೆಗಳು ಮತ್ತು ಖಾಸಗಿ ಸುದ್ದಿವಾಹಿನಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮೊನ್ನೆ ನೀಡಿದ ಸಂದರ್ಶನವೊಂದು ಇತ್ತೀಚೆಗೆ ರಾಷ್ಟ್ರದಾದ್ಯಂತ ಭಾರೀ ಸುದ್ದಿಯಾಗುತ್ತಿವೆ. ಅಷ್ಟೇ ಅಲ್ಲ ಈ ಕುರಿತು ಬಿಎಸ್‍ವೈ ವಿರುದ್ಧ ಪರ ವಿರೋಧ ಚರ್ಚೆಗಳು ಆರಂಭವಾಗಿದ್ದು #WeLostHopeOnBSY ಎಂಬ ಹ್ಯಾಷ್ಟ್ಯಾಗ್ ಇದೀಗ ರಾಷ್ಟ್ರೀಯ ಮಟ್ಟದಲ್ಲಿ ಟಾಪ್ ಟ್ರೆಂಡಿಂಗ್‍ನಲ್ಲಿ ಸ್ಥಾನ ಪಡೆದಿದೆ.

ಘಟನೆ 1: ಕೊರೋನಾ ಭೀತಿ ಹಿನ್ನೆಲೆಯಲ್ಲಿ ಸಾಮೂಹಿಕ ಸಮಾರಂಭಗಳನ್ನು ಕೇಂದ್ರ ಸರ್ಕಾರ ನಿಬರ್ಂಧಿಸಿದ ಹೊರತಾಗಿಯೂ ಸಂಘಟನೆಯೊಂದು ದೆಹಲಿಯ ನಿಜಾಮುದ್ದೀನ್ ಪ್ರದೇಶದ ಮರ್ಕಜ್ ಮಸೀದಿಯಲ್ಲಿ ಸುಮಾರು 4,000ಕ್ಕೂ ಅಧಿಕ ಜನರನ್ನು ಸೇರಿಸಿ ಸಭೆ ನಡೆಸಿತ್ತು. ಈ ಪೈಕಿ ಕೊರೋನಾ ಸೊಂಕಿಗೆ ಈಗಾಗಲೇ 10 ಮೃತಪಟ್ಟಿದ್ದು ನೂರಾರು ಜನರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ. ದೇಶದ ನಾನಾ ಮೂಲೆಗಳಿಂದ ಜನ ಈ ಸಮಾರಂಭದಲ್ಲಿ ಭಾಗವಹಿಸಿದ್ದು, ಇದೀಗ ಅವರನ್ನು ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದೇ ಎಲ್ಲಾ ರಾಜ್ಯ ಸರ್ಕಾರಗಳಿಗೂ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ. ಅಲ್ಲದೆ, ಇದರ ಬೆನ್ನಿಗೆ ಇಡೀ ಮುಸ್ಲಿಂ ಸಮಾಜವನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವಂತಹ “ಕೊರೋನಾ ಜಿಹಾದ್” ಎಂಬ ಮಾತುಗಳು ಸಹ ಸಾಮಾಜಿಕ ಜಾಲತಾಣದಲ್ಲಿ ಮತ್ತು ರಾಷ್ಟ್ರೀಯ ಸುದ್ದಿ ವಾಹಿನಿಗಳಲ್ಲಿ ದೊಡ್ಡ ಮಟ್ಟದ ಸದ್ದಾಗಿತ್ತು.

ಘಟನೆ-2: ಬೆಂಗಳೂರಿನಲ್ಲಿ ಮುಸ್ಲಿಂ ಜನರೇ ಹೆಚ್ಚು ಇದ್ದ ಸಾದಿಕ್ ಪಾಳ್ಯಕ್ಕೆ ಕೊರೋನಾ ಕುರಿತು ಜನರಿಗೆ ಅರಿವು ಮೂಡಿಸುವ ಸಲುವಾಗಿ ಇತ್ತೀಚೆಗೆ ಆಶಾ ಕಾರ್ಯಕರ್ತೆಯರು ತೆರಳಿದ್ದರು. ಈ ವೇಳೆ ಆಶಾ ಕಾರ್ಯಕರ್ತೆಯರು ಸಿಎಎ ಮತ್ತು ಎನ್‍ಪಿಆರ್ ಮಾಹಿತಿ ಪಡೆಯಲು ಬರುತ್ತಿದ್ದಾರೆ ಎಂದು ತಪ್ಪಾಗಿ ತಿಳಿದ ಕೆಲ ಮುಸ್ಲಿಮರು ಆಶಾ ಕಾರ್ಯಕರ್ತೆಯರನ್ನು ದೊಡ್ಡ ದ್ವನಿಯಲ್ಲಿ ಗದರಿಸಿ ಅಲ್ಲಿಂದ ಹೊರ ಹಾಕಿದ್ದರು. ಆದರೆ, ಮುಸ್ಲಿಂ ಸಮಾಜದವರು ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಿದ್ದಾರೆ, ಇವರು ಸಮಾಜ ದ್ರೋಹಿಗಳು ಎಂದು ಸಾಮಾಜಿಕ ಜಾಲತಾಣದಲ್ಲಿ ಬಿಂಬಿಸಲಾಗಿತ್ತು. ಅಲ್ಲದೆ, ಮುಸ್ಲಿಂ ಸಮಾಜದ ಕೆಲವರು ಮಾಡಿದ್ದ ತಪ್ಪಿಗೆ ಇಡೀ ಮುಸ್ಲಿಂ ಸಮಾಜವನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಹೀಗೆಳೆಯಲಾಗಿತ್ತು.

ಆದರೆ, ನಿನ್ನೆ ಖಾಸಗಿ ಸುದ್ದಿ ವಾಹಿನಿಗಳಿಗೆ ನೀಡಿದ ಸಂದರ್ಶನದಲ್ಲಿ ಅಲ್ಪಸಂಖ್ಯಾತ ಮುಸ್ಲಿಂ ಸಮಾಜದವರ ಪರ ಮಾತನಾಡಿದ್ದ ಸಿಎಂ ಯಡಿಯೂರಪ್ಪ, “ಮುಸ್ಲಿಂ ಸಮಾಜದ ಮುಖಂಡರನ್ನು ಕರೆಸಿ ಮಾತನಾಡಲಾಗಿದೆ. ಯಾವುದೋ ಒಂದೆರಡು ಅಹಿತಕರ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ಇಡೀ ಮುಸ್ಲಿಂ ಸಮುದಾಯದ ಜನರನ್ನು ಅಪರಾಧಿಗಳು ಎಂಬಂತೆ ಬಿಂಬಿಸುವುದು ತಪ್ಪು. ಮುಸ್ಲಿಮ್ ಬಾಂಧವರ ಕುರಿತು ಯಾರೇ ಮಾತನಾಡಿದರು ಅವರ ವಿರುದ್ಧ ತಕ್ಕ ಕ್ರಮ ತೆಗೆದುಕೊಳ್ಳಲಾಗುವುದು” ಎಂದು ಎಚ್ಚರಿಕೆ ನೀಡಿದ್ದರು.

ಹಾಗೆ ನೋಡಿದರೆ ಬಿಎಸ್ವೈ ಮೊದಲ ಬಾರಿಗೆ ರಾಜಧರ್ಮವನ್ನು ಪಾಲಿಸಿದ್ದರು. ತಾನು ಕೋಮುವಾದವನ್ನೇ ಉಸಿರಾಡುವ ಬಿಜೆಪಿ ಪಕ್ಷದ ಮುಖಂಡ ಎಂಬುದನ್ನು ಪಕ್ಕಕ್ಕೆ ಕಳಚಿಟ್ಟು, ಓರ್ವ ಜವಾಬ್ದಾರಿಯುತ ಮುಖ್ಯಮಂತ್ರಿಯಾಗಿ ವರ್ತಿಸಿದ್ದರು. ಅಲ್ಲದೆ, ಸೂಕ್ಷ್ಮ ಸಂದರ್ಭದಲ್ಲಿ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಹೇಗೆ ವರ್ತಿಸಬೇಕು ಎಂದು ಸ್ವತಃ ಪ್ರಧಾನ ಮಂತ್ರಿಗೆ ಅವರು ಮಾದರಿಯಾಗಿದ್ದರು.

ವಿರೋಧ ಪಕ್ಷದ ನಾಯಕರೂ ಪ್ರಶಂಶಿಸಿದರು

ಕೊರೋನಾ ಸೋಂಕು ಸಾಲು ಸಾಲು ಹೆಣಗಳನ್ನು ಬೀಳಿಸುತ್ತಿರುವ ಇಂತಹ ದಿನಗಳಲ್ಲಿ ಸಮಾಜದಲ್ಲಿ ಕೋಮು ಸೌಹಾರ್ದತೆಯನ್ನು ಉಳಿಸುವ ನಿಟ್ಟಿನಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಮಾತು ಸಮಾಜದ ಅನೇಕರ ಪ್ರಶಂಸೆಗೆ ಪಾತ್ರವಾಗಿತ್ತು.

ಈ ಕುರಿತು ಸ್ವತಃ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, “ಕೊರೊನಾ ಹಾವಳಿಗೆ ಜಾತಿ-ಧರ್ಮಗಳ ಬಣ್ಣಹಚ್ಚಿ ಸಮಾಜವನ್ನು ಒಡೆಯುವ ಕೆಲಸವನ್ನು ಕೆಲವರು, ಸುಳ್ಳು ಸುದ್ದಿ, ತಿರುಚಿದ ವಿಡಿಯೋ ತುಣುಕುಗಳ ಮೂಲಕ ಮಾಡುತ್ತಿದ್ದಾರೆ. ಇಂತಹವರ ಬಗ್ಗೆ ಬಿಎಸ್‍ವೈ ಅವರು ಖಡಕ್ ಎಚ್ಚರಿಕೆ ನೀಡಿರುವುದನ್ನು ನಾನು ಸ್ವಾಗತಿಸಿ ಬೆಂಬಲಿಸುತ್ತೇನೆ. ಅವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸುತ್ತೇನೆ” ಎಂದು ಮೆಚ್ಚುಗೆ ಸೂಚಿಸಿದ್ದರು.

ಸಿದ್ದರಾಮಯ್ಯ ಮಾತ್ರವಲ್ಲದೆ, ಅನೇಕ ನಾಯಕರು ವಿರೋಧ ಪಕ್ಷದ ನಾಯಕರು ಬಿಎಸ್‍ವೈ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ. ಆದರೆ, ಯಡಿಯೂರಪ್ಪ ಅವರ ನಿಲುವು ಬಲಪಂಥೀಯ ಹಾಗೂ ಸ್ವತಃ ಬಿಜೆಪಿ ನಾಯಕರಿಗೆ ಇಷ್ಟವಿದ್ದಂತೆ ಕಾಣುತ್ತಿಲ್ಲ. ಪರಿಣಾಮ ಬಿಎಸ್‍ವೈ ಭಾರೀ ಮಟ್ಟದ ಟ್ರೋಲ್‍ಗೆ ಒಳಗಾಗುತ್ತಿದ್ದಾರೆ.

ಬಿಜೆಪಿ ಸಿದ್ಧಾಂತಕ್ಕೆ ಬಿಸಿ ಕೆಂಡವಾದರಾ ಬಿಎಸ್‍ವೈ?

ಹೇಳಿ ಕೇಳಿ ಬಿಜೆಪಿ ಪಕ್ಕಾ ಬಲಪಂಥೀಯ ಚಿಂತನೆಯನ್ನು ಹೊಂದಿರುವ ಪಕ್ಷ. ಬಹು ಸಂಖ್ಯಾತ ಹಿಂದೂಗಳ ಮತ ಸೆಳೆಯುವ ಕಾರಣಕ್ಕೆ ರಾಮ ಮಂದಿರದಿಂದ ಚಿಕ್ಕಮಗಳೂರಿನ ದತ್ತಪೀಠದ ವರೆಗೆ ಅವರು ರಾಜಕೀಯ ಮಾಡದ ವಿಚಾರಗಳೇ ಇಲ್ಲ.

ಸಿ.ಟಿ.ರವಿ, ಅನಂತಕುಮಾರ್ ಹೆಗಡೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಅನೇಕ ನಾಯಕರು ಬಹಿರಂಗ ವಾಗಿಯೇ ಮುಸ್ಲಿಮರ ವಿರುದ್ಧ ಕೆಂಡ ಕಾರಿರುವ, ಹೀಯಾಳಿಸಿರುವ ಅನೇಕ ನಿದರ್ಶನಗಳು ನಮ್ಮ ಕಣ್ಣ ಮುಂದಿದೆ. ಮುಸ್ಲಿಂ ವಿರೋಧ ಎಂಬುದು ಬಿಜೆಪಿ ಪಕ್ಷದ ಒನ್ ಲೈನ್ ಅಜೆಂಡಾದ ಭಾಗ. ಇಂತಹದ್ದೊಂದು ಪಕ್ಷದಲ್ಲಿ ನಿಂತು ಬಿಎಸ್‍ವೈ ಹೀಗೊಂದು ಹೇಳಿಕೆ ನೀಡಿದರೆ ಕಮಲ ನಾಯಕರು ಅದನ್ನು ಸಹಿಸುವುದಾದರೂ ಹೇಗೆ?

ಇದೇ ಕಾರಣಕ್ಕೆ ಬಿಎಸ್‍ವೈ ಅವರ ಈ ಹೇಳಿಕೆಯನ್ನು ಸಮರ್ಥಿಸುವವರಿಗಿಂತ ವಿರೋಧಿಸುವವರ ಸಂಖ್ಯೆ ಬಿಜೆಪಿ ಪರಿವಾರದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬೆಳೆದಿದೆ. ನಿನ್ನೆಯಿಂದ ಟ್ವಿಟರ್ನಲ್ಲಿ #WeLostHopeBSY ಎಂಬ ಹ್ಯಾಷ್‍ಟ್ಯಾಗ್ ಟ್ವಿಟರ್‍ನಲ್ಲಿ ಟಾಪ್ ಟ್ರೆಂಡಿಂಗ್‍ನಲ್ಲಿ ಸ್ಥಾನ ಪಡೆದಿತ್ತು. ಆದರೆ ಅದೇ ಹೊತ್ತಿನಲ್ಲಿ #WeLostHopeBSY ಎಂಬ ಹ್ಯಾಷ್‍ಟ್ಯಾಗ್ ಸಹಾ ಸಾಕಷ್ಟು ಜನರ ಬೆಂಬಲ ಗಳಿಸಿತ್ತು.

ನಮಗೆ ಬಿಜೆಪಿ ಬೇಕು ಆದರೆ, ಬಿಎಸ್‍ವೈ ಬೇಡ ಎಂಬ ಕರೆಯೂ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಆದರೆ, ಈ ರೀತಿ ಯಡಿಯೂರಪ್ಪನವರ ವಿರುದ್ಧ ಮುಖೇಡಿ ಆಂದೋಲನ ಮಾಡುತ್ತಿರುವವರು ಅವರ ಪಕ್ಷದವರೇ ಎಂದೂ ಹೇಳಲಾಗುತ್ತಿದೆ. ಅಲ್ಲದೆ, ಬಿಎಸ್ವೈ ಹೇಳಿಕೆ ಪಕ್ಷದ ನಾಯಕರಲ್ಲೇ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿರುವುದು ಇಂದು ಗುಟ್ಟಾಗೇನು ಉಳಿದಿಲ್ಲ.

ಮಾಧ್ಯಮಗಳೇ ನೀವೇಕೆ ಹೀಗೆ?

ದೆಹಲಿಯ ನಿಜಾಮುದ್ದೀನ್ ಪ್ರದೇಶದ ಘಟನೆ ಬೆಳಕಿಗೆ ಬಂದ ನಂತರ ರಾಷ್ಟ್ರೀಯ ಮತ್ತು ಸ್ಥಳೀಯ ಮಾಧ್ಯಮಗಳು ಒಟ್ಟಿಗೆ ನಿಂತು ಈ ವೈರಸ್ ಹರಡಲು ಮುಸ್ಲಿಮರೇ ಕಾರಣ ಎಂಬ ಸಾಮಾಜಿಕ ಅಭಿಪ್ರಾಯ ಮೂಡಿಸಲು ಮುಂದಾಗಿದ್ದು ಸುಳ್ಳೇನಲ್ಲ.

ಎಲ್ಲಾ ಮಾಧ್ಯಮಗಳೂ ಸಾಮೂಹಿಕವಾಗಿ “ವೈರಸ್ ಜಿಹಾದ್” ಎಂದು ಗಂಟೆಗಟ್ಟಲೆ ಕಾರ್ಯಕ್ರಮ ಮಾಡುವ ಮೂಲಕ ಇಡೀ ಸಮಾಜ ಮುಸ್ಲಿಮರನ್ನು ಕೀಳಾಗಿ ನೋಡುವಂತಹ ವಾತಾವರಣವನ್ನು ನಿರ್ಮಾಣ ಮಾಡಿದ್ದವು.

ಅಸಲಿಗೆ ಯಾರೋ ಕೆಲವರು ಮಾಡುವ ತಪ್ಪಿಗೆ ಇಡೀ ಸಮಾಜವನ್ನು ಹೀಗೆ ಅವಮಾನಕಾರಿಯಾಗಿ ಹೀಗೆಳೆಯುವುದು ಎಷ್ಟು ಸರಿ? ಎಂಬ ಬಿಎಸ್ವೈ ಮಾತಿನಲ್ಲಿ ತೂಕವಿದೆ. ನ್ಯಾಯವಾಗಿ ಈ ಕೆಲಸವನ್ನು ಮಾಧ್ಯಮಗಳು ಮಾಡಬೇಕಿತ್ತು. ಇಡೀ ದೇಶಕ್ಕೆ ದೇಶವೇ ಕೊರೋನಾ ಭೀತಿಯಲ್ಲಿರುವಾದ ಕೋಮು ಸೌಹಾರ್ದತೆಯನ್ನು ಸಮಾಜದಲ್ಲಿ ಶಾಂತಿಯನ್ನು ಕಾಪಾಡಬೇಕಾದದ್ದು ಮಾಧ್ಯಮದ ಕರ್ತವ್ಯ. ಆದರೆ, ಮಾಧ್ಯಮಗಳು ಮಾಡಿದ\ಮಾಡುತ್ತಿರುವ ಕೆಲಸವಾದರೂ ಏನು?

ಬಿಎಸ್‍ವೈ ಹೇಳಿಕೆಯನ್ನು ಪ್ರಶಂಸಿಸುತ್ತಲೇ ಮಾಧ್ಯಮಗಳ ಇಂತಹ ನಡೆಯ ಕುರಿತು ಸರಣಿ ಟ್ವೀಟ್ ಮಾಡುವ ಮೂಲಕ ಕಿಡಿಕಾರಿರುವ ಮಾಜಿ ಸಿಎಂ ಕುಮಾರಸ್ವಾಮಿ, “ಹಿಂದೆಂದೂ ಕಂಡರಿಯದ ರಾಷ್ಟ್ರೀಯ ಅರೋಗ್ಯ ಸಂಕಟದ ಈ ದಿನಗಳಲ್ಲಿ ಕೋಮು ದ್ವೇಷ ಹೊತ್ತಿಸುವುದು ಅಕ್ಷಮ್ಯ ಅಪರಾಧ. ಅಪರಾಧಿಗಳ ವಿರುದ್ಧ ತಕ್ಷಣವೇ ಕಠಿಣ ಕ್ರಮ ಜರುಗಿಸದೇ ಹೋದರೆ ರಾಜ್ಯವೇ ಕೋಮುದಳ್ಳುರಿಗೆ ಬಲಿಯಾಗುವ ಅಪಾಯ ತಪ್ಪಿದ್ದಲ್ಲ. ಪ್ರಿಂಟ್, ಟಿವಿ ಮತ್ತು ಸಾಮಾಜಿಕ ಜಾಲತಾಣಗಳ ಮೂಲಕ ಸಮುದಾಯಗಳ ವಿರುದ್ಧ ದ್ವೇಷವನ್ನು ಬಿತ್ತರಿಸುವ ಎಲ್ಲರ ಮೇಲೂ ಸ್ವಯಂ ಪ್ರೇರಿತ ಕೇಸು ದಾಖಲಿಸಿಕೊಳ್ಳಲು ಪೊಲೀಸ್ ಇಲಾಖೆಗೆ ನಿರ್ದೇಶನ ನೀಡಲು ಮುಖ್ಯಮಂತ್ರಿಗಳನ್ನು ಆಗ್ರಹಿಸುತ್ತೇನೆ” ಎಂದು ಒತ್ತಾಯಿಸಿದ್ದಾರೆ.

ಓರ್ವ ಮಾಜಿ ಸಿಎಂ ಸಮಾಜದಲ್ಲಿ ಮಾಧ್ಯಮಗಳ ಮೂಲಕ ದ್ವೇಷ ಬಿತ್ತುವವರ ವಿರುದ್ಧ ಪ್ರಕರಣ ದಾಖಲಿಸಿ ಎಂದು ಎಚ್ಚರಿಕೆ ನೀಡುತ್ತಾರೆ ಎಂದರೆ ಮಾಧ್ಯಮಗಳ ಸಾಮಾಜಿಕ ಜವಾಬ್ದಾರಿ ಎಲ್ಲಿಗೆ ಬಂದು ನಿಂತಿದೆ ಎಂಬುದನ್ನು ನೀವು ಊಹಿಸಬಹುದು. (ನಾನೂ ಗೌರಿ)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

ಸೌಭಾಗ್ಯಲಕ್ಷ್ಮಿ -a small story of amruta preetam

(ಕರ್ಮಾವಾಲಿ) ‌  ಮೂಲಕತೆ: ಅಮೃತಾ ಪ್ರೀತಮ್‌ ಅನುವಾದ: ನಿವೇದಿತಾ ಎಚ್. ತಂದೂರಿ ಒಲೆಯಲ್ಲಿ  ಹದವಾಗಿ ಬೆಂದು ತಟ್ಟೆಗೆ ಬಂದು ಬೀಳುತ್ತಿದ್ದ ರೋಟಿಗಳು ಎಂತಹವರಲ್ಲೂ ಹಸಿವನ್ನು ...

ಅಕಾಲಿಕ ಮಳೆ, ಜಾತ್ರೆ, ವಾರ್ಷಿಕೋತ್ಸವಗಳಿಗೆ ಅಡ್ಡಿ… ಶಾಸಕರ ಮಿಂಚಿನ ಸಂಚಾರ!

ಮಲೆನಾಡು ಕರಾವಳಿಯ ಅಕಾಲಿಕ ಮಳೆ ಬೇಸಿಗೆಯ ಉಷ್ಣವನ್ನು ಶಮನ ಮಾಡಿದ್ದರೆ… ಪೂರ್ವನಿಶ್ಚಿತ ಧಾರ್ಮಿಕ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ಅಡ್ಡಿ ಮಾಡಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ...

ಶನಿವಾರ…ಶಾಸಕರು,ಸಂಸದರ ಕಾರ್ಯಕ್ರಮಗಳು

ಇಟಗಿ ರಾಮೇಶ್ವರ ಮತ್ತು ಪರಿವಾರ ದೇವಾಲಯಗಳ ಅಷ್ಟಬಂಧ ಕಾರ್ಯಕ್ರಮದಲ್ಲಿ ಏ.೫ ರ ಶನಿವಾರ ಸಾಯಂಕಾಲ ಸಂಜೆ ನಾಲ್ಕರಿಂದ ಭರತನಾಟ್ಯ ರಕ್ಷಾ & ದೀಕ್ಷಾ ರಾವ್‌...

ಸಿದ್ಧಾಪುರದಲ್ಲಿ ಧಾರ್ಮಿಕ ಕಾರ್ಯಕ್ರಮಗಳ ಜಾತ್ರೆ! ನಮ್ಮೂರು ಇಂದು ನಾಳೆ…..

* ಸಿದ್ಧಾಪುರ ಇಟಗಿಯ ರಾಮೇಶ್ವರ ದೇವರ ದಿವ್ಯಾಷ್ಟಬಂಧ ಕಾರ್ಯಕ್ರಮ ಪ್ರಾರಂಭವಾಗಿದೆ. ಈ ಕಾರ್ಯಕ್ರಮದ ಅಂಗವಾಗಿ ಪ್ರತಿದಿನ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿವೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *