ಇಂದಿನ ವಿಶೇಶ- ಲಾಕ್ ಡೌನ್ ನಿರ್ಬಂಧ ಸಡಿಲಿಕೆ, ಪೊಲೀಸ್ ವಾಹನದಲ್ಲಿ ಬಂದ ಆಗಂತುಕರು! ದಾನ-ದೇಣಿಗೆ

ಕರೋನಾ ಲಾಕ್‍ಡೌನ್ ನಿರ್ಬಂಧವನ್ನು ಹಂತಹಂತವಾಗಿ ಕಡಿತಗೊಳಿಸಲಾಗುತ್ತಿದೆ. ಕೇಂದ್ರಸರ್ಕಾರ ಶುಕ್ರವಾರ ಪ್ರಕಟಿಸಿರುವ ವಿನಾಯಿತಿಗಳಲ್ಲಿ ಗ್ರಾಮೀಣ ಭಾರತದ ಕೃಷಿ-ಸಹಕಾರಿ ಉತ್ಫನ್ನ,ಸಂಸ್ಕರಣೆ,ಮಾರಾಟಕ್ಕೆ ಹೆಚ್ಚಿನ ರಿಯಾಯತಿ ಪ್ರಕಟಿಸಿದೆ. ಕಡಿಮೆ ಮಾನವಸಂಪನ್ಮೂಲ ಬಳಸಿ ಈ ವ್ಯವಸ್ಥೆ ನಿರ್ವಹಿಸಲು ಸೂಚಿಸಲಾಗಿದೆ.

ಪೊಲೀಸ್ ವಾಹನದಲ್ಲಿ ಬಂದ ಆಗಂತುಕರು
ಲಾಕ್‍ಡೌನ್ ವೇಳೆ ಹುಬ್ಬಳ್ಳಿಯಲ್ಲಿ ತಂಗಿದ್ದ ಗೋಕರ್ಣಮೂಲದ ಕೆಲವರು ಪೊಲೀಸ್ ಜೀಪ್ ನಲ್ಲಿ ಊರುಸೇರಲು ವಿಫಲಪ್ರಯತ್ನ ಮಾಡಿದ ಘಟನೆ ಕುಮಟಾ ತಾಲೂಕಿನ ಗೋಕರ್ಣದಲ್ಲಿ ನಡೆದಿದ್ದು, ಹುಬ್ಬಳ್ಳಿಯಿಂದ ಪೊಲೀಸ್ ರಿಗೇ ಚಳ್ಳೆಹಣ್ಣು ತಿನ್ನಿಸಿದ್ದ ಮೂವರು ಈಗ ಗೋಕರ್ಣ ಪೊಲೀಸರ ಅತಿಥಿಯಾಗಿದ್ದಾರೆ. ಗೋಕರ್ಣ ಗ್ರಾ.ಪಂ. ಕರೋನಾ ಟಾಸ್ಕ್ ಫೋರ್ಸ್ ಪ್ರಯತ್ನದಿಂದ ಈ ಪ್ರಕರಣ ಬೆಳಕಿಗೆ ಬಂದಿದೆ.
ದಾನ-ದೇಣಿಗೆ-
ಮುಖ್ಯಮಂತ್ರಿ ಕರೋನಾ ಪರಿಹಾರ ನಿಧಿಗೆ ಸಿದ್ಧಾಪುರ ಕೃಷಿ ಉತ್ಫನ್ನ ಮಾರುಕಟ್ಟೆ ಸಮೀತಿಯಿಂದ 15 ಲಕ್ಷ ರೂಪಾಯಿ ದೇಣಿಗೆ ನೀಡಿರುವುದಾಗಿ ಎ.ಪಿ.ಎಂ.ಸಿ. ಅಧ್ಯಕ್ಷ ಕೆ.ಜಿ.ನಾಗರಾಜ್ ಮತ್ತು ಕಾರ್ಯದರ್ಶಿ ಎಂ.ಜಿ.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಬಿ.ಜೆ.ಪಿ. ಮಾಜಿ ಜಿಲ್ಲಾಧ್ಯಕ್ಷ ಕೆ.ಜಿ.ನಾಯ್ಕ ನೇತೃತ್ವದಲ್ಲಿ ಅವರ ಮನೆಯ ಆವರಣದಲ್ಲಿ ಅಬಲರು,ಬಡವರಿಗೆ ದಿನಬಳಕೆ ಸಾಮಗ್ರಿ ವಿತರಿಸಿದರು.

ಸಿದ್ದಾಪುರ ತಾಲೂಕಿನ ಅಡಿಕೆ ವರ್ತಕರ ಸಂಘ ನೀಡಿದ ಒಂದು ಲಕ್ಷ ರೂಪಾಯಿಗಳ ಮೌಲ್ಯದ ದಿನಬಳಕೆ ವಸ್ತುಗಳ ಸಾಮಗ್ರಿಗಳ ಕಿಟ್ ಅನ್ನು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಫಲಾನುಭವಿಗಳಿಗೆ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಸರ್ಕಾರ ಮತ್ತು ಸಂಘ-ಸಂಸ್ಥೆಗಳು,ದಾನಿಗಳ ನೆರವಿನಿಂದ ಯಾರಿಗೂ ಹಸಿವೆಯಲ್ಲಿರದಂತೆ ವ್ಯವಸ್ಥೆ ಮಾಡುತಿದ್ದೇವೆ ಎಂದರು.

ಜನಸಾಮಾನ್ಯರೊಂದಿಗೆ ಪ್ರಾಂಶುಪಾಲರ ಮೇಲೂ ಕೇಸು ದಾಖಲು!
ಉತ್ತರಕನ್ನಡ ಜಿಲ್ಲೆಯಲ್ಲಿ ಕರೋನಾ ಪ್ರಖರತೆ ಕಡಿಮೆಯಾಗುತ್ತಿರುವಂತೆ ಕರೋನಾ ನಿಯಮ, ನಿಶೇಧಾಜ್ಞೆ ಷರತ್ತುಗಳನ್ನು ಉಲ್ಲಂಘಿಸುವವರ ಪ್ರಮಾಣ ಹೆಚ್ಚುತ್ತಿದೆ. ಸಿದ್ಧಾಪುರದ ಪೊಲೀಸರು ಇಂದು ಒಟ್ಟೂ 4 ಜನರ ಮೇಲೆ ಪ್ರಕರಣ ದಾಖಲಿಸಿದ್ದು 3 ಜನರು ತಮಿಳುನಾಡಿನಿಂದ ಸಿದ್ದಾಪುರಕ್ಕೆ ಬಂದ ತಾಲೂಕಿನ ಶೀಗೇಹಳ್ಳಿಯ ಜನರಾಗಿದ್ದಾರೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *