
ಪಾರ್ಸೆಲ್ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಅವರನ್ನು ಹಿಂದಕ್ಕೆ ಕಳುಹಿಸಿದ ಆರೋಪದಲ್ಲಿ 51 ವರ್ಷ ಪ್ರಾಯದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.


ಥಾಣೆ: ಪಾರ್ಸೆಲ್ ತಂದ ವ್ಯಕ್ತಿ ಮುಸ್ಲಿಂ ಎಂಬ ಕಾರಣಕ್ಕೆ ಅದನ್ನು ಸ್ವೀಕರಿಸಲು ನಿರಾಕರಿಸಿದ ಮತ್ತು ಅವರನ್ನು ಹಿಂದಕ್ಕೆ ಕಳುಹಿಸಿದ ಆರೋಪದಲ್ಲಿ 51 ವರ್ಷ ಪ್ರಾಯದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಮೀರಾ ರಸ್ತೆ ಉಪನಗರದ ಪ್ರದೇಶದ ನಿವಾಸಿ ಗಜಾನನ ಚತುರ್ವೇದಿ ಎಂದು ಗುರುತಿಸಲಾಗಿದೆ.
ಡೆಲಿವರಿ ಏಜೆಂಟ್ ನೀಡಿದ ದೂರನ್ನು ಆಧರಿಸಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮಂಗಳವಾರ ಬೆಳಿಗ್ಗೆ ಆರೋಪಿಯ ಮನೆಗೆ ಡೆಲಿವರಿ ಏಜೆಂಟ್ ಸರಕುಗಳನ್ನು ತಲುಪಿಸಲು ಹೋಗಿದ್ದ. ಈ ವೇಳೆ ಆರೋಪಿ ಗಜಾನನ, ಡೆಲಿವರಿ ಏಜೆಂಟ್‌ನ ಹೆಸರು ಕೇಳಿದ್ದಾನೆ. ಆಗ ಹೆಸರು ಹೇಳಿದಾಗ, ನಾನು ಮುಸ್ಲಿಮ್ ವ್ಯಕ್ತಿಯಿಂದ ಪಾರ್ಸೆಲ್ ಸ್ವೀಕರಿಸುವುದಿಲ್ಲ ಎಂದು ಮುಖ ತಿರುಗಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಗ ಏಜೆಂಟ್ ಈ ಬಗ್ಗೆ ಥಾಣೆ ಗ್ರಾಮೀಣ ಡಿಎಸ್ಪಿ ಶಿವಾಜಿ ರಾಥೋಡ್ ಅವರಿಗೆ ತಿಳಿಸಿದ್ದಾನೆ. ತಕ್ಷಣ ಅವರು ಪೊಲೀಸ್ ಠಾಣೆಗೆ ಆರೋಪಿಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನಿರ್ದೇಶನ ನೀಡಿದ್ದಾರೆ.
ಕೊರೋನಾ ಸಾಂಕ್ರಾಮಿಕ ಸಮಯದಲ್ಲಿಯೂ ನಾವು ಪ್ರಾಣವನ್ನು ಪಣಕ್ಕಿಟ್ಟು ಕೆಲಸ ಮಾಡುತ್ತಿದ್ದೇವೆ. ಆದರೂ ಇಂತಹ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸಮುದಾಯಗಳ ನಡುವೆ ವೈಷಮ್ಯವನ್ನು ಪ್ರಕಟಿಸುತ್ತಿರುವುದು ಗಂಭೀರ ವಿಷಯವಾಗಿದೆ ಎಂದು ಘಟನೆಯ ಬಗ್ಗೆ ಏಜೆಂಟ್ ಪ್ರತಿಕ್ರಿಯಿಸಿದ್ದಾರೆ.
ಐಪಿಸಿ ಸೆಕ್ಷನ್ 295 ಎ (ಧಾರ್ಮಿಕ ಭಾವನೆಗಳನ್ನು ಕೆದಕುವ ಉದ್ದೇಶದಿಂದ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಅಡಿಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಇನ್ಸ್‌ಪೆಕ್ಟರ್ ಸಂಜಯ್ ಹಜಾರೆ ತಿಳಿಸಿದ್ದಾರೆ. (source-kp)
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________
