ಲಾಕ್ ಡೌನ್ ವಿಸ್ತರಣೆಯಾದರೆ ಹಸಿವಿನಿಂದಲೇ ಹೆಚ್ಚು ಜನರ ಸಾವು: ನಾರಾಯಣಮೂರ್ತಿ

ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕೊರೋನಾ ವೈರಸ್ ಗಿಂತ ಹಸಿವಿಗೇ ಹೆಚ್ಚಿನ ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

NR Narayana Murthy

Source : UNI

ಬೆಂಗಳೂರು: ಸುಧೀರ್ಘ ಲಾಕ್ ಡೌನ್ ನಿಂದಾಗಿ ದೇಶದಲ್ಲಿ ಕೊರೋನಾ ವೈರಸ್ ಗಿಂತ ಹಸಿವಿಗೇ ಹೆಚ್ಚಿನ ಜನ ಸಾಯುತ್ತಾರೆ ಎಂದು ಇನ್ಫೋಸಿಸ್ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಆತಂಕ ವ್ಯಕ್ತಪಡಿಸಿದ್ದಾರೆ.

ಖಾಸಗಿ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿರುವ ನಾರಾಯಣ ಮೂರ್ತಿ ಅವರು, ದೇಶದಲ್ಲಿ ಲಾಕ್ ಡೌನ್ ವಿಸ್ತರಣೆಯಾಗುತ್ತಾ ಮುಂದೆ, ಮುಂದೆ ಹೋದರೆ ಕೊರೋನಕ್ಕಿಂತಲೂ ಹೆಚ್ಚು ಜನರು ಹಸಿವಿನಿಂದಲೇ ಸಾಯಬಹುದು. ಇದರಿಂದ ಸಾರ್ವಜನಿಕರಿಗೆ ಹೆಚ್ಚಿನ ತೊಂದರಯಾಗಲಿದೆ  ಎಂದು ಅಭಿಪ್ರಾಯಪಟ್ಟಿದ್ದಾರೆ.

ಲಾಕ್ ಡೌನ್ ತುಂಬಾ ದಿನ ಮುಂದವರಿಯಲು ಸಾಧ್ಯವಿಲ್ಲ ಎನ್ನುವ ಸತ್ಯವನ್ನು ನಾವು ಮೊದಲು ಅರಿತುಕೊಳ್ಳಬೇಕು. ಅಭಿವೃದ್ಧಿ ಹೊಂದಿದ ದೇಶಗಳಿಗೆ ಹೋಲಿಸಿದರೆ ಭಾರತದಲ್ಲಿ ಸಾವಿನ ಪ್ರಮಾಣ ಶೇ.0.25ರಿಂದ 0.5 ರಷ್ಟು ಮತ್ತು ಪಾಸಿಟೀವ್ ಪ್ರಕರಣಗಳು ಬಹಳ, ತೀರಾ ಕಡಿಮೆ  ಇದೆ. ಪ್ರಮುಖವಾಗಿ ಮಾಲಿನ್ಯದ ಕಾರಣದಿಂದ ಹಾಗೂ ಇತರೆ ಕಾರಣದಿಂದ ದೇಶದಲ್ಲಿ ಸರಾಸರಿ ಒಂಬತ್ತು ಮಿಲಿಯನ್ ಜನರು ಸಾವನ್ನಪ್ಪುತ್ತಿದ್ದಾರೆ. ಇದು ದೊಡ್ಡ ಅಪತ್ತು. ಆದರೂ ಕಳೆದ ಎರಡು ತಿಂಗಳ ಅವಧಿಯಲ್ಲಿ ಕೊರೊನಾ ಸೋಂಕಿನ ಹಾವಳಿಯಯಿಂದ ದೇಶದಲ್ಲಿ ಸುಮಾರು  ಒಂದು ಸಾವಿರ ಜನ ಸಾವನ್ನಪ್ಪಿದ್ದರೂ, ದೇಶದ ಒಟ್ಟಾರೆ ಕೊರೋನ, ಮತ್ತು ಸಾವಿನ ಪ್ರಮಾಣ ಬಹಳ ಕಳವಳ, ಮತ್ತು ಆತಂಕಾರಿಯಾಗಿಲ್ಲ ಎಂದೂ ನಾರಾಯಣ ಮೂರ್ತಿ ಹೇಳಿದ್ದಾರೆ.

ದೇಶದಲ್ಲಿ 1.9 ಕೋಟಿಯಷ್ಟು ಕಾರ್ಮಿಕರು ಅಸಂಘಟಿತ ವಲಯದಲ್ಲಿ ಕೆಲಸ ಮಾಡುತ್ತಿದ್ದಾರೆ. ಮತ್ತೆ ಕೆಲವರು ಸ್ವಯಂ ಉದ್ಯೋಗಿಗಳಾಗಿದ್ದಾರೆ. ಇಷ್ಟು ಬೃಹತ್‌ ಸಂಖ್ಯೆಯ ಉದ್ಯೋಗಿಗಳು ಲಾಕ್‌ಡೌನ್‌ ನಿಂದಾಗಿ ತಮ್ಮ ಜೀವನೋಪಾಯವನ್ನೇ ಕಳೆದುಕೊಂಡು ಕೂತಿದ್ದಾರೆ. ಲಾಕ್‌ಡೌನ್‌  ದೀರ್ಘಕಾಲದವರೆಗೆ ಮುಂದುವರಿದರೆ” ಒಂದು ಹೊತ್ತಿನ ಊಟಕ್ಕೂ ನೆಲೆ ಇಲ್ಲದಂತಾಗಿ ಕೂರುವಂತಾಗುತ್ತದೆ. ದೇಶದಲ್ಲಿ ಪ್ರತಿವರ್ಷ ಸರಾಸರಿ 90 ಲಕ್ಷ ಜನ ಸಾಯುತ್ತಿದ್ದಾರೆ. ಕಳೆದ ಎರಡು ತಿಂಗಳಲ್ಲಿ ಕೊರೊನಾ ವೈರಸ್‌ನಿಂದಾಗಿ 1,000 ಜನ ಬಲಿಯಾಗಿದ್ದಾರೆ. ಸಹಜ  ಸಾವುಗಳಿಗೂ, ಕೊರೊನಾ ಸಾವುಗಳಿಗೂ ತಾಳೆ ಹಾಕಿದರೆ ಕೊರೊನಾ ಸಾವುಗಳು ಅತಿ ಕಡಿಮೆ ಎಂದೇ ಹೇಳಬಹುದು. ಹೀಗಾಗಿ ಕೊರೊನಾ ಸೋಂಕು ನಾವು ಅಂದುಕೊಂಡಿರುವಷ್ಟು ಭೀಕರವಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ಯುವಕರಲ್ಲಿ ಈ ಸೋಂಕು ಇದ್ದರೂ ಕೂಡ ಯಾವುದೇ ಲಕ್ಷಣಗಳು ಗೋಚರಿಸುವುದಿಲ್ಲ. ಭಾರತೀಯರ ಆನುವಂಶೀಯತೆ, ಇಲ್ಲಿನ ಬೆಚ್ಚನೆಯ ಹವಾಮಾನ ಅಥವಾ ವ್ಯಾಪಕವಾದ ಬಿಸಿಜಿ ವ್ಯಾಕ್ಸಿನೇಷನ್ ಕಾರಣದಿಂದಾಗಿ ಭಾರತದಲ್ಲಿ ಮರಣ ಪ್ರಮಾಣ ಕಡಿಮೆಯಾಗಿದೆ ಎಂದು  ನಾರಾಯಣ ಮೂರ್ತಿ ಅವರು ಹಲವು ಅಂಶಗಳತ್ತ ಗಮನಸೆಳೆದಿದ್ದಾರೆ. ಈ ಕುರಿತು ಸಂಶೋಧನೆಗೂ ಕರೆ ನೀಡಿದ್ದಾರೆ. ಹಿರಿಯರು ಮತ್ತು ಆರೋಗ್ಯ ಸಮಸ್ಯೆಗಳಿರುವವರು ಸಾಮಾಜಿಕ ಅಂತರ ಅನುಸರಿಸಲು ಮತ್ತು ಸುರಕ್ಷತಾ ಕ್ರಮ ಕೈಗೊಳ್ಳಲು ಸಹಾಯ ಮಾಡಬೇಕು. ಸಾಫ್ಟ್‌ವೇರ್‌  ಕಂಪನಿಗಳಲ್ಲಿ ಉದ್ಯೋಗಿಗಳು ಕೆಲಸ ನಿರ್ವಹಿಸುವಂತೆ ಹೇಗೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಕುರಿತೂ ಗಮನಸೆಳೆದಿದ್ದಾರೆ. “ಒಂದು ಶಿಫ್ಟ್‌ನಲ್ಲಿ ಕೆಲಸ ಮಾಡುವ ಉದ್ಯೋಗಿಗಳನ್ನೇ ಮೂರು ಶಿಫ್ಟ್‌ಗಳಾಗಿ ವಿಂಗಡಿಸಬಹುದು. ಇದರಿಂದ ಸಾಮಾಜಿಕ ಅಂತರ  ಅನುಸರಿಸಬಹುದು ಎಂದು ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *