

ಮದುವೆ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅಗತ್ಯ ಅನುಮತಿ ಪಡೆಯಬೇಕು. ಸ್ಥಳೀಯ ಸಂಸ್ಥೆ ಸಂಸ್ಥೆಗಳಿಂದ ಅನುಮತಿ ಪಡೆಯಬೇಕು, ಮದುವೆಗೆ ಕನಿಷ್ಠ 50 ಜನರಿಗೆ ಮಾತ್ರ ಅವಕಾಶ ನೀಡಿ ಅನುಮತಿ ನೀಡಲಾಗಿದೆ.


ಬೆಂಗಳೂರು: ಮದುವೆ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಪ್ರಕಟವಾಗಿದ್ದು, ಅಗತ್ಯ ಅನುಮತಿ ಪಡೆಯಬೇಕು. ಸ್ಥಳೀಯ ಸಂಸ್ಥೆ ಸಂಸ್ಥೆಗಳಿಂದ ಅನುಮತಿ ಪಡೆಯಬೇಕು, ಮದುವೆಗೆ ಕನಿಷ್ಠ 50 ಜನರಿಗೆ ಮಾತ್ರ ಅವಕಾಶ ನೀಡಿ ಅನುಮತಿ ನೀಡಲಾಗಿದೆ.
ಕಾರ್ಯಕ್ರಮಗಳು ನಡೆಯುವ ಸ್ಥಳದಲ್ಲಿ ಪ್ರಾಕೃತಿಕ ಗಾಳಿ ಬೆಳಕು ಇರಬೇಕು. ಹವಾನಿಯಂತ್ರಿತ (ಎ.ಸಿ.) ವ್ಯವಸ್ಥೆ ಇರಬಾರದು. ಕಂಟೈನ್ಮೆಂಟ್ ಝೋನ್ ಗಳ ಅತಿಥಿಗಳಿಗೆ ಕಾರ್ಯಕ್ರಮಕ್ಕೆ ಅವಕಾಶ ನೀಡುವುದಿಲ್ಲ ಎಂದು ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಲಾಗಿದೆ.


ಗರ್ಭಿಣಿ ಮಹಿಳೆಯರು, 65 ವರ್ಷದ ಮೇಲ್ಪಟ್ಟ ಹಾಗೂ 10 ವರ್ಷದ ಮಕ್ಕಳು ಮದುವೆ ಹಾಗೂ ವಿಶೇಷ ಕಾರ್ಯಕ್ರಮಕ್ಕೆ ಬರುವಂತಿಲ್ಲ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಸ್ಯಾನಿಟೈಸರ್ ಇತರ ವ್ಯವಸ್ಥೆ ಮಾಡಿರಬೇಕು. ಪ್ರವೇಶ ದ್ವಾರದಲ್ಲಿ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಮಾಡಬೇಕು ಎಂದು ಸೂಚಿಸಲಾಗಿದೆ.
ಕಾರ್ಯಕ್ರಮ ಅಥವಾ ಮದುವೆಗೆ ಬರುವ ವ್ಯಕ್ತಿಗಳ ತಪಾಸಣೆ ಸಂದರ್ಭದಲ್ಲಿ 37.5 ಸೆಲ್ಸಿಯಸ್, ಅಥವಾ 99.5 ಫ್ಯಾರನ್ ಹೀಟ್ ತಾಪಮಾನ ಹೊಂದಿದ್ದರೆ ಅಂತಹವರನ್ನು ವೈದ್ಯಕೀಯ ಪರೀಕ್ಷೆಗೆ ಸೂಚಿಸಬೇಕು. ಕಾರ್ಯಕ್ರಮಕ್ಕೆ ಬರುವ ಎಲ್ಲರೂ ಮಾಸ್ಕ್ ಧರಿಸುವುದು ಕಡ್ಡಾಯ. ಎಲ್ಲರೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
ಹ್ಯಾಂಡ್ ವಾಶ್ ಗೆ ಸೋಪು ಮತ್ತು ಅಗತ್ಯ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಗುಟ್ಕಾ, ಪಾನ್ ಮಸಾಲ, ಮದ್ಯ, ತಂಬಾಕು ಬಳಸಲು ಅವಕಾಶವಿಲ್ಲ. ಕಾರ್ಯಕ್ರಮದ ಸ್ಥಳವು ಸ್ವಚ್ಛತೆ ಮತ್ತು ನೈರ್ಮಲ್ಯದಿಂದ ಕೂಡಿರಬೇಕು. ಸಾರ್ವಜನಿಕ ಸ್ಥಳದಲ್ಲಿ ಉಗುಳುವುದನ್ನು ನಿಷೇಧಿಸಲಾಗಿದೆ. ಕಾರ್ಯಕ್ರಮಕ್ಕೆ ನೋಡಲ್ ವ್ಯಕ್ತಿಯನ್ನು ನೇಮಿಸಿರಬೇಕು. ಕಾರ್ಯಕ್ರಮಕ್ಕೆ ಹಾಜರಾಗುವವರ ಹೆಸರು, ವಿಳಾಸ ಮತ್ತು ದೂರವಾಣಿ ಸಂಖ್ಯೆ ಮಾಹಿತಿ ಪಡೆಯಬೇಕು. ಆರೋಗ್ಯ ಸೇತು ಆ್ಯಪ್ ಡೌನ್ ಡೋಲ್ ಮಾಡಿಕೊಂಡು ಅಳವಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಹೊರಡಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






