20 ಲಕ್ಷ ಕೋಟಿ ಪ್ಯಾಕೇಜ್ 5ನೇ ಭಾಗ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆಗಳ ಪ್ರಮುಖಾಂಶಗಳು ಇಂತಿವೆ…

ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ನ 4 ನೇ ಭಾಗದ ಘೋಷಣೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇ.17 ರಂದು ಘೋಷಿಸಿದ್ದಾರೆ. 

Nirmala Sitaraman

ನವದೆಹಲಿ: ಲಾಕ್ ಡೌನ್ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಘೋಷಿಸಿದ್ದ 20 ಲಕ್ಷ ಕೋಟಿ ಆರ್ಥಿಕ ಪ್ಯಾಕೇಜ್ ನ 5 ನೇ ಭಾಗದ ಘೋಷಣೆಗಳನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೇ.17 ರಂದು ಘೋಷಿಸಿದ್ದಾರೆ. 

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ನಿರ್ಮಲಾ ಸೀತಾರಾಮನ್, ಉದ್ಯಮ ಹಾಗೂ ಜನತೆಗೆ ಸಂಬಂಧಿಸಿದಂತೆ ಸರ್ಕಾರ ಕೈಗೊಂಡಿರುವ ಕ್ರಮಗಳು, ಆರ್ಥಿಕ ನೆರವಿನ ಅಂಶಗಳ ಬಗ್ಗೆ ಮಾಹಿತಿ ನೀಡಿದ್ದಾರೆ. 

ನಿರ್ಮಲಾ ಸೀತಾರಾಮನ್ ಅವರ ಘೋಷಣೆಯ ಪ್ರಮುಖಾಂಶಗಳು ಹೀಗಿವೆ 

  1. ಕಟ್ಟಡ ನಿರ್ಮಾಣ ಕಾರ್ಮಿಕರಿಗೆ 3950 ಕೋಟಿ ರೂಪಾಯಿ ಹಾಗೂ ಜನ್ ಧನ್ ಖಾತೆಗಳ ಮೂಲಕ 10,025 ಕೋಟಿ ರೂಪಾಯಿ ನೀಡಲಾಗಿದೆ. 
  2. ಪಿಎಂ ಕಿಸಾನ್ ಯೋಜನೆಯ ಫಲಾನುಭವಿಗಳಿಗೆ ನೇರ ವರ್ಗಾವಣೆ ಮೂಲಕ 2,000 ರೂಪಾಯಿ ನೀಡಲಾಗಿದೆ. ಈ ಮೂಲಕ ಲಾಕ್ ಡೌನ್ ಅವಧಿಯಲ್ಲಿ 8.19 ಕೋಟಿ ಫಲಾನುಭವಿಗಳಿಗೆ ಯೋಜನೆಯ ಲಾಭ ತಲುಪಿದೆ. 
  3. ಬಡವರಿಗೆ ಆಹಾರ ವ್ಯವಸ್ಥೆಗಾಗಿ ಗರೀಬ್ ಕಲ್ಯಾಣ ಪ್ಯಾಕೇಜ್
  4. ಮನ್ರೇಗಾ, ಆರೋಗ್ಯ ಸೇವೆ ಹಾಗೂ ಶಿಕ್ಷಣ, ಕೋವಿಡ್ ಸಂದರ್ಭದಲ್ಲಿ ಉದ್ಯಮ ನಡೆಸಲು ಸಹಕಾರ, ಕಂಪನಿ ಕಾಯ್ದೆಗಳ ಡಿಕ್ರಿಮಿನಲೈಸೇಶನ್, ಉದ್ಯಮ ಸರಳೀಕರಣ, ಪಿಎಸ್ ಯುಗಳು ಹಾಗೂ ನೀತಿ, ರಾಜ್ಯ ಸರ್ಕಾರಗಳು ಹಾಗೂ ಸಂಪನ್ಮೂಲಗಳು ಈ 7 ಹಂತಗಳ ಮೂಲಕ ಉದ್ಯಮ ಹಾಗೂ ಜನತೆಗೆ ಸಹಾಯ ಮಾಡಲು ಸರ್ಕಾರದ ಕ್ರಮ 
  5. ಶ್ರಮಿಕ್ ವಿಶೇಷ ರೈಲುಗಳ ಸಂಚಾರ, ಇದಕ್ಕಾಗಿ ಶೇ.85 ರಷ್ಟು ವೆಚ್ಚಗಳನ್ನು ಕೇಂದ್ರ ಸರ್ಕಾರವೇ ಭರಿಸಿದೆ. 
  6. ಆನ್ ಲೈನ್ ತರಗತಿಗಳಿಗಾಗಿ 12 ಹೆಚ್ಚುವರಿ ಚಾನಲ್ ಗಳ ಸೇರ್ಪಡೆ
  7. ಕೊರೋನಾ ಟೆಸ್ಟಿಂಗ್ ಕಿಟ್ ಗಳಿಗಾಗಿ 550 ಕೋಟಿ ರೂಪಾಯಿ ಖರ್ಚು
  8. ಕೊರೋನಾ ಸಾಂಕ್ರಾಮಿಕ ರೋಗ ಪರಿಸ್ಥಿತಿಯ ಸಂದರ್ಭದಲ್ಲಿ ರಾಜ್ಯಗಳಿಗೆ 4113 ಕೋಟಿ ಬಿಡುಗಡೆ 
  9. 300ಕ್ಕೂ ಅಧಿಕ ಪಿಪಿಇ ತಯಾರಕರಿಂದ ಈವರೆಗೆ 51 ಲಕ್ಷ ಪಿಪಿಇ ಕಿಟ್ಸ್ ಸರಬರಾಜು 
  10. ಪಿಎಂ ಇ-ವಿದ್ಯಾ ಯೋಜನೆ ತಕ್ಷಣದಿಂದಲೇ ಜಾರಿ. ಆನ್ ಲೈನ್ ತರಗತಿಗಳಿಗೆ ಹೆಚ್ಚಿನ ಒತ್ತು, 100 ವಿಶ್ವವಿದ್ಯಾನಿಲಯಗಳಿಗೆ ಆನ್ ಲೈನ್ ಕೋರ್ಸ್ ಗಳನ್ನು ಪ್ರಾರಂಭಿಸಲು ಅನುಮತಿ. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *