

ರಾಜ್ಯದಲ್ಲೇ ಪ್ರಥಮ!
ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾವರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ.


ಹುಬ್ಬಳ್ಳಿ: ರಾಜ್ಯದದಲ್ಲಿ ಪ್ರಥಮ ಬಾರಿಗೆ ಕೊರೋನಾ ವೈರಸ್ ಸೋಂಕಿಗಾಗಿ ನಡೆಸಲಾದ ಪ್ಲಾಸ್ಮಾ ಥೆರಪಿ ಚಿಕಿತ್ಸಾ ವಿಧಾನ ಯಶಸ್ವಿಯಾಗಿದ್ದು 64 ವರ್ಷದ ಕೊರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದಾನೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು ಈ ಸಾಧನೆ ಮಾಡಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ನಲ್ಲಿ ನಡೆದ ಪ್ಲಾಸ್ಮಾ ಥೆರಪಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಈ ಸಂಬಂಧ ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಸುದ್ದಿಗೋಷ್ಠಿ ನಡೆಸಿ ಮಾಹಿತಿ ಒದಗಿಸಿದ್ದಾರೆ.


ಈ ಹಿಂದೆ ಹುಬ್ಬಳ್ಳಿಯಲ್ಲಿ ದಾಖಲಾಗಿ ಕೋವಿಡ್ ಸೋಂಕಿನಿಂದ ಗುಣಮುಖನಾಗಿದ್ದ ರೋಗಿ ಸಂಖ್ಯೆ 363 ಅವರ ಮನವೊಲಿಸಿ ಅವರಿಂದ ಪಾಸ್ಮಾ ಪಡೆದು ಮುಂಬೈನಿಂದ ಆಗಮಿಸಿದ್ದ 64 ವರ್ಷದ ವ್ಯಕ್ತಿಗೆ ಅಳವಡಿಸಿ ಚಿಕಿತ್ಸೆ ನೀಡಲಾಗಿದೆ.
ಪ್ಲಾಸ್ಮಾ ಥೆರಪಿ ನಡೆಸಲು ಕಿಮ್ಸ್ ಗೆ ಐಸಿಎಂಆರ್ ಅನುಮತಿ ನೀಡಿತ್ತು. ಅದರ ಅನುಸಾರ ಆಸ್ಪತ್ರೆ ಚಿಕಿತ್ಸೆ ನೀಡಲು ಎಲ್ಲಾ ತಯಾರಿ ನಡೆಸಿ ದಾನಿಗಳಿಂದ ಪ್ಲಾಸ್ಮಾ ಪಡೆಯುವುದಕ್ಕೆ ಮುಂದಾಗಿತ್ತು. ಪ್ರಾರಂಭದಲ್ಲಿ ಕೋವಿಡ್ ಸೋಂಕಿನಿಂದ ಗುಣ ಹೊಂದಿದ ರೋಗಿಗಳು ಪ್ಲಾಸ್ಮಾ ದಾನಕ್ಕೆ ಹಿಂದೇಟು ಹಾಕಿದ್ದರು. ಆಗ ವೈದ್ಯರ ತಂಡ ಅವರ ಮನವೊಲಿಸಿ ಪ್ಲಾಸ್ಮಾ ಪಡೆದು ಚಿಕಿತ್ಸೆ ನೀಡಿದ್ದು ಇದೀಗ ಯಶಸ್ವಿಯಾಗಿದೆ.
ಕಿಮ್ಸ್ ಆಸ್ಪತ್ರೆಯಲ್ಲಿ ಒಟ್ಟು 49 ಜನ ಕೊವಿಡ್ ಸೋಂಕಿತರು ದಾಖಲಾಗಿದ್ದು ಇದುವರೆಗೆ 22 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿದ ಆರೋಗ್ಯ ಸಚಿವ ಬಿ. ಶ್ರೀರಾಮುಲು “ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ವೈದ್ಯರು 64 ವರ್ಷದ ಕೊರೊನ ಸೋಂಕಿತರೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನೀಡಿ ಗುಣಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಭಿನಂದನೆಗಳು.” ಎಂದಿದ್ದಾರೆ.
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






