ಕಳ್ಳ ಕೋವಿಡ್ ಸೋಂಕಿತನ ರಗಳೆ, ಹೈರಾಣಾದ ಪೊಲೀಸರು!

ಕಾರವಾರದ ಕೋವಿಡ್ ಚಿಕಿತ್ಸಾ ಕೇಂದ್ರದಿಂದ ಪರಾರಿಯಾಗಿದ್ದ ಕರೋನಾ ಸೋಂಕಿತನೊಬ್ಬ ಪೊಲೀಸರು, ಅಧಿಕಾರಿಗಳನ್ನು ಕಾಡಿಸಿ ಹೈರಾಣಾಗಿಸಿದ ಘಟನೆ ಈಗ ರಾಜ್ಯದಾದ್ಯಂತ  ಚರ್ಚೆ ಯ ವಿಷಯವಾಗಿದೆ.

ಶಿರಸಿಯಲ್ಲಿ ಕಳ್ಳತನದ ಆರೋಪದ ಮೇಲೆ ಬಂಧಿತನಾಗಿ ಪೊಲೀಸರು,ನ್ಯಾಯಾಧೀಶರು,ಎ.ಪಿ.ಪಿ.ಗಳನ್ನುಕಾರಂಟೈನ್ ಮಾಡಿದ್ದ ಭೂಪ ಧಾರವಾಡದವನು, ಇವನನ್ನು ಬಂಧಿಸಿ ಫಜೀತಿಗೊಳಗಾಗಿದ್ದ ಪೊಲೀಸರು, ನ್ಯಾಯಾಧೀಶರುಕಾರಂಟೈನ್ ಆಗುತ್ತಲೇ ಈತನನ್ನು ಕಾರವಾರದ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ರವಾನಿಸಲಾಗಿತ್ತು. ಇದು ಒಂದು ಅಧ್ಯಾಯವಾದರೆ,

ಇದೇ ಭೂಪ ಕಾರವಾರದಲ್ಲಿ ಕರೋನಾ ಚಿಕಿತ್ಸೆ ಪಡೆಯುತಿದ್ದ ಸಂದರ್ಭದಲ್ಲಿ ಮತ್ತೆ ಎರಡು ಮೊಬೈಲ್ಗಳನ್ನು ಕದ್ದು ಇಂದು ಮುಂಜಾನೆ ಕಾರವಾರದಿಂದ ಪರಾರಿಯಾಗಿ ಆತಂಕ ಹೆಚ್ಚಿಸಿದ್ದ, ಕೂಡಲೇ ಎಚ್ಚೆತ್ತ ಆಡಳಿತ ಆತನನ್ನು ಕಾರವಾರದ ಕದ್ರಾ ಬಳಿ ಬಂಧಿಸಿ, ಮರಳಿ ಕಾರವಾರಕ್ಕೆ ತಂದಿದೆ. ಧಾರವಾಡದ 38 ವರ್ಷದ  ಈ ಕಳ್ಳ ಕಳ್ಳತನ ಮಾಡಿ, ಕರೋನಾ ವಿಸ್ತರಿಸಿಪೊಲೀಸರು, ಜಿಲ್ಲಾಡಳಿತದ ಆತಂಕ ಹೆಚ್ಚಿಸಿದ್ದಾನೆ. ಇವನ ವರ್ತನೆ ಸಾರ್ವಜನಿಕರೊಂದಿಗೆ ಅಧಿಕಾರಿಗಳ ತಲೆಬಿಸಿ ಹೆಚ್ಚಿಸಿದೆ.

 -02-

ಭಾರತಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣ ದಾಖಲು

ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ನವದೆಹಲಿ: ದೇಶಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 19,459 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ.

ಆ ಮೂಲಕ ದೇಶದಲ್ಲಿ ಒಟ್ಟಾರೆ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 5,48,318ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,21,723  ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಅಂತೆಯೇ ದೇಶದಲ್ಲಿ ಪ್ರಸ್ತುತ 2,10,120 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 380 ಮಂದಿ ಸೋಂಕಿತರು ಸಾವನ್ಮಪ್ಪಿದ್ದು, ಆ ಮೂಲಕ ದೇಶದಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 16,475ಕ್ಕೆ ಏರಿಕೆಯಾಗಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *