ಕೊರೋನಾ ಪಾಸಿಟಿವ್ ಬಂದರೂ ವೃದ್ಧ ತಾಯಿಯನ್ನು ಒಂಟಿಯಾಗಿ ಬಿಡಲು ಒಪ್ಪದ ಮಕ್ಕಳು!

ಕಾರವಾರ:ಕೊರೋನಾ ಪಾಸಿಟಿವ್ ದೃಢಪಟ್ಟ ಮೂವರು ಪುತ್ರರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ 90 ವರ್ಷದ ವೃದ್ಧ ತಾಯಿಯ ಕರುಣಾಜನಕ ಕಥೆ ಇದು.

Corona Test

ಕಾರವಾರ: ಕೊರೋನಾ ಪಾಸಿಟಿವ್ ದೃಢಪಟ್ಟ ಮೂವರು ಪುತ್ರರು ಮತ್ತು ಅನಾರೋಗ್ಯದಿಂದ ಬಳಲುತ್ತಿರುವ 90 ವರ್ಷದ ವೃದ್ಧ ತಾಯಿಯ ಕರುಣಾಜನಕ ಕಥೆ ಇದು.

ಕಾರವಾರದಲ್ಲಿ ಮೂವರು ಮಕ್ಕಳಿಗೆ ಕೊರೋನಾ ಪಾಸಿಟಿವ್ ಬಂದ ನಂತರ, ಅಧಿಕಾರಿಗಳು ಆ ಮೂರು ಮಕ್ಕಳನ್ನು ನಿಗದಿತ ಕೊವಿಡ್-19 ಆಸ್ಪತ್ರೆಗೆ ಶಿಫ್ಟ್ ಮಾಡಲು ಮುಂದಾದರು. ಆದರೆ ಈ ಮೂವರು ಮಕ್ಕಳನ್ನು ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಗೆ ನಿರಂತರ ಆರೈಕೆಯ ಅಗತ್ಯವಿರುವುದರಿಂದ ನಾವು ತಾಯಿಯನ್ನು ಮನೆಯಲ್ಲಿ ಒಂಟಿಯಾಗಿ ಬಿಟ್ಟು ಆಸ್ಪತ್ರೆಗೆ ಬರಲು ಸಾಧ್ಯವಿಲ್ಲ ಎಂದು ಪಟ್ಟು ಹಿಡಿದರು. 

ಮಕ್ಕಳ ಕಾಳಜಿಯನ್ನು ಗಮನಿಸಿದ ಅಧಿಕಾರಿಗಳು, ಅವರ ಮನವಿ ಮೇರೆಗೆ ಸೋಂಕಿತ ಮಕ್ಕಳು ಮತ್ತು ಅವರ ತಾಯಿಯನ್ನೂ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಆದರೆ ತಾಯಿಗೆ ಕೊರೋನಾ ನೆಗಟಿವ್ ಬಂದಿದ್ದರಿಂದ ಅವರಿಗೆ ಪ್ರತ್ಯೇಕ ವಾರ್ಡ್ ನೀಡಿದ್ದಾರೆ.

ಏಳು ದಿನಗಳ ನಂತರ ಈ ಮೂವರು ಮಕ್ಕಳು ಕೊರೋನಾದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿ, ತಾಯಿಯೊಂದಿಗೆ ಮನೆಗೆ ಬಂದಿದ್ದಾರೆ. 

96 ವರ್ಷದ ಮಹಿಳೆ ಕಾರವಾರ ಬಳಿಯ ಸದಾಶಿವಘಡ ದ‌ಲ್ಲಿ ವಾಸಿಸುತ್ತಿದ್ದರೆ, ಪುತ್ರರು ಮುಂಬೈನಲ್ಲಿ ಕೆಲಸ ಮಾಡುತ್ತಿದ್ದರು. ಅವರು ಇತ್ತೀಚೆಗೆ ತಮ್ಮ ಊರಿಗೆ ಮರಳಿದ ನಂತರ, ಮೂವರಿಗೂ ಕೊರೋನಾ ಪಾಸಿಟಿವ್ ಬಂದಿತ್ತು. ಆದರೆ ಅವರು ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದರು. ಅಧಿಕಾರಿಗಳು ವಿಚಾರಿಸಿದಾಗ, ಪುತ್ರರು ತಮ್ಮ ವೃದ್ಧ ತಾಯಿಯನ್ನು ಮನೆಯಲ್ಲಿಯೇ ಬಿಡಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಅವಳನ್ನು ನೋಡಿಕೊಳ್ಳಲು ನಮ್ಮ ಬಿಟ್ಟು ಬೇರೆ ಯಾರೂ ಇಲ್ಲ ಎಂದಿದ್ದಾರೆ.

ಈ ಕುರಿತು ನಾವು ಕಾರವಾರ ಜಿಲ್ಲಾಧಿಕಾರಿಗಳ ಗಮನಕ್ಕೆ ತಂದೆವು. ಅವರು ಸಹ ವಯಸ್ಸಾದ ತಾಯಿಗೆ ಸೋಂಕು ತಗುಲಿದರೆ ಹೆಚ್ಚು ಅಪಾಯ. ಹೀಗಾಗಿ ಅವರನ್ನು ಮನೆಯಲ್ಲಿ ಬಿಟ್ಟು ನೀವು ಆಸ್ಪತ್ರೆದೆ ದಾಖಲಾಗಿ ಎಂದು ಮನವರಿಕೆ ಮಾಡಲು ಯತ್ನಿಸಿದರು. ಆದರೆ ಅವರು ಒಪ್ಪಿಕೊಳ್ಳದಿದ್ದಾಗ, ಅವರ ಒಪ್ಪಿಗೆ ಮೇರೆಗೆ ತಾಯಿನ್ನು ಮಕ್ಕಳು ಇರುವ ಸಮೀಪದ ವಾರ್ಡ್ ನಲ್ಲಿರಿಸುವ ವ್ಯವಸ್ಥೆ ಮಾಡಲಾಯಿತು ಮತ್ತು ಯಾವುದೇ ಸೋಂಕಿತರು ವೃದ್ಧೆಯ ಸಂಪರ್ಕಕ್ಕೆ ಬರದಂತೆ ನೋಡಿಕೊಳ್ಳಲಾಯಿತು ಎಂದು ಕಾರವಾರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಗಜಾನನ್ ನಾಯಕ್ ಅವರು ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

Latest Posts

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು ಥಳಿಸಿದ ಆರೋಪದ ಮೇಲೆ ಅರಣ್ಯಾಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಾದ ಮಾಹಿತಿ ಬಹಿರಂಗವಾಗಿದೆ. ನಾಣಿಕಟ್ಟಾ ಪ್ರದೇಶದಲ್ಲಿ ಆಗಂತುಕರು ಕಡವೆಯನ್ನು ಕೊಂದು ಪರಾರಿಯಾಗಿದ್ದರು. ಈ ಭೇಟೆ ಪ್ರಕರಣದ ಜಾಡು ಹಿಡಿದ...

Recommended For You

About the Author: Kanneshwar Naik

Leave a Reply

Your email address will not be published. Required fields are marked *