ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದ ಟಾಪರ್ಸ್ ಇವರು.

ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ. 61.80ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.  ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದರೆ  ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚ…..

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ಒಟ್ಟು ಶೇ. 61.80ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.  ಈ ಬಾರಿಯೂ ಬಾಲಕಿಯರು ಮೇಲುಗೈ ಸಾಧಿಸಿದ್ದರೆ  ಶೇ.68.73ರಷ್ಟು ಬಾಲಕಿಯರು, ಶೇ. 54.77ರಷ್ಟು ಬಾಲಕರು ತೇರ್ಗಡೆ ಹೊಂದಿದ್ದಾರೆ. ಉಡುಪಿ ಪ್ರಥಮ ಸ್ಥಾನದಲ್ಲಿದ್ದರೆ ದಕ್ಷಿಣ ಕನ್ನಡ ದ್ವಿತೀಯ ಮತ್ತು ಕೊಡಗು ತೃತೀಯ ಸ್ಥಾನದಲ್ಲಿವೆ. ಚಿತ್ರದುರ್ಗ, ರಾಯಚೂರು ಮತ್ತು ವಿಜಯಪುರಗಳು ಕೊನೆಯ ಸ್ಥಾನದಲ್ಲಿವೆ. ಈ ಬಾರಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಗಳಿಸಿ ಟಾಪರ್ಸ್ ಆದವರ ವಿವರ ಹೀಗಿದೆ-

ವಿಜ್ಞಾನ ವಿಭಾಗ

ವಿಜ್ಞಾನ ವಿಭಾಗದಲ್ಲಿ ಉಡುಪಿಯ ವಿದ್ಯೋದಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಅಭಿಜ್ಞಾ ರಾವ್ ಟಾಪರ್ ಆಗಿದ್ದಾರೆ. ಅಭಿಜ್ಞಾ ರಾವ್ ವಿಜ್ಞಾನ ವಿಭಾಗದಲ್ಲಿ 596 ಅಂಕಗಳನ್ನು ಗಳಿಸಿಕೊಂಡಿದ್ದು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದಾರೆ.

ಅಭಿಜ್ಞಾ  ಪಿಸಿಎಂಸಿ ವಿಷಯಗಳಲ್ಲಿ ತಲಾ 100 , ಇಂಗ್ಲೀಷ್  ಭಾಷೆಯಲ್ಲಿ 96  ಹಾಗೂ ಸಂಸ್ಕೃತದಲ್ಲಿ 100  ಅಂಕ ಪಡೆದಿದ್ದಾರೆ.

ಇನ್ನು ಇದೇ ವಿಭಾಗದಲ್ಲಿ ಬೆಂಗಳೂರಿನ ಮಲ್ಲೇಶ್ವರಂನ ವಿದ್ಯಾಮಂದಿರ್ ಪಿ.ಯು ಕಾಲೇಜಿನ ಪ್ರೇರಣಾ ಕೂಡ 596 ಅಂಕ ಗಳಿಸಿದ್ದಾರೆ. ಆಕಾಂಕ್ಷಾ ಪೈ (595) ದ್ವಿತೀಯ ಹಾಗೂ ಯಶಸ್​ ಎಂ.ಎಸ್ (594) ತೃತೀಯ  ಸ್ಥಾನ ಗಳಿಸಿಕೊಂಡಿದ್ದಾರೆ. 

ವಾಣಿಜ್ಯ ವಿಭಾಗ

ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಮಲ್ಲೇಶ್ವರಂ ವಿದ್ಯಾಮಂದಿರ್ ಪಿ.ಯು ಕಾಲೇಜಿನ ಅರವಿಂದ ಶ್ರೀವತ್ಸ 598 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿ ಹೊರಹೊಮ್ಮಿದ್ದಾರೆ. 

ವಾಣಿಜ್ಯ ವಿಭಾಗದಲ್ಲಿ ಬೃಂದಾ  ದ್ವಿತೀಯ ಸ್ಥಾನ (596), ಮಲ್ಲೇಶ್ವರಂ ವಿದ್ಯಾಮಂದಿರ್ ಪಿಯು ಕಾಲೇಜಿನ ಅಭಿಲಾಶ್ ಶರ್ಮಾ(595)   ತೃತೀಯ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗ

ಬಳ್ಳಾರಿಯ ಕರೇಗೌಡ ದಾಸನ್ ಗೌಡರ್ 594 ಅಂಕ ಗಳಿಸಿ ಕಲಾ ವಿಭಾಗದಲ್ಲಿ ರಾಜ್ಯದಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. 

ಕಲಾ ವಿಭಾಗದಲ್ಲಿ ಸ್ವಾಮಿ (592) ದ್ವಿತೀಯ ಮೊಹಮ್ಮದ್​ ರಫೀಕ್ (591) ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿಕೊಂಡಿದ್ದಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik