

ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಂಟೈನ್ಮೆಂಟ್ ಜೋನ್ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಅನ್ನು ಸಹ ತೆರವುಗೊಳಿಸಲಾಗಿದೆ.

ನವದೆಹಲಿ: ಕೇಂದ್ರ ಸರ್ಕಾರ ಬುಧವಾರ ಅನ್ ಲಾಕ್-3 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಕಂಟೈನ್ಮೆಂಟ್ ಜೋನ್ಗಳನ್ನು ಹೊರತುಪಡಿಸಿ, ಉಳಿದ ಪ್ರದೇಶಗಳಲ್ಲಿ ಆಗಸ್ಟ್ 5ರಿಂದ ಜಿಮ್, ಯೋಗ ಕೇಂದ್ರ ತೆರೆಯಲು ಅನುಮತಿ ನೀಡಲಾಗಿದೆ. ಅಲ್ಲದೆ ರಾತ್ರಿ ಕರ್ಫ್ಯೂ ಅನ್ನು ಸಹ ತೆರವುಗೊಳಿಸಲಾಗಿದೆ.

ಸಾಮಾಜಿಕ ಅಂತರ ಕಾಯ್ದುಕೊಂಡು ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಅನುಮತಿ ನೀಡಿರುವ ಕೇಂದ್ರ ಸರ್ಕಾರ, ಮೆಟ್ರೋ, ಶಾಲಾ, ಕಾಲೇಜ್ ಗಳು, ಕೋಚಿಂಗ್ ಸೆಂಟರ್ ಗಳು ಮತ್ತು ಚಿತ್ರ ಮಂದಿರಗಳ ಮೇಲಿನ ನಿರ್ಬಂಧವನ್ನು ಆಗಸ್ಟ್ 31ರ ವರೆಗೆ ಮುಂದುವರೆಸಿದೆ.
ಥಿಯೇಟರ್ ತೆರೆಯಲು ಶಿಫಾರಸು ಮಾಡಿದ ಮಾಹಿತಿ ಮತ್ತು ಪ್ರಸಾರ ಇಲಾಖೆಯ ಸಲಹೆಯನ್ನು ಗೃಹ ಇಲಾಖೆ ಪರಿಗಣಿಸಿಲ್ಲ. ಮೂರನೇ ಹಂತದ ಅನ್ಲಾಕ್ನಲ್ಲೂ ಥಿಯೇಟರ್ ಲಾಕ್ಡೌನ್ ಮುಂದುವರೆಯಲಿದೆ.


ಕಂಟೈನ್ ಮೆಂಟ್ ಝೋನ್ ನಲ್ಲಿ ಆಗಸ್ಟ್ 31 ರವರೆಗೂ ಕಠಿಣ ಲಾಕ್ ಡೌನ್ ಮುಂದುವರಿಯಲಿದ್ದು, 65 ವರ್ಷ ಮೇಲ್ಪಟ್ಟ ಹಾಗೂ 10 ವರ್ಷದ ಕೆಳಗಿನ ಮಕ್ಕಳು ಮನೆಯಲ್ಲಿ ಇರಬೇಕು. ತೀರಾ ಅಗತ್ಯ ಕೆಲಸಗಳಿಗೆ ಮಾತ್ರ ಹೊರಗೆ ಹೋಗಬೇಕು. ಹಾಗೇ, ವಂದೇ ಭಾರತ್ ಮಿಷನ್ ಅಡಿ ಸೀಮಿತ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಮಾತ್ರ ಅವಕಾಶ ನೀಡಲಾಗುವುದು. ವಂದೇ ಭಾರತ ಮಿಷನ್ ಹೊರತಾದ ಅಂತಾರಾಷ್ಟ್ರೀಯ ವಿಮಾನ ಹಾರಾಟಕ್ಕೆ ಅವಕಾಶ ಇಲ್ಲ ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.
see samajamukhi kannesh youtube channel
_______________________________________________________________
ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi
_______________________________________________________________






