kumarswamy support bjp govt-ಬಿಜೆಪಿ ಸರ್ಕಾರಕ್ಕೆ ಎಚ್.ಡಿ ಕುಮಾರಸ್ವಾಮಿ ಬೆಂಬಲ: ಸಿಪಿ ಯೋಗೇ ಶ್ವರ್ ಸ್ಫೋಟಕ ಹೇಳಿಕೆ

ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.

Kumaraswamy-yediyurappa

ಬೆಂಗಳೂರು: ಬಿಜೆಪಿ ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡುತ್ತಿದ್ದಾರೆ. ರಾಮನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಂಸದ ಡಿ.ಕೆ.ಸುರೇಶ್ ಅವರು ಕುಮಾರಸ್ವಾಮಿ ಅವರ ಬುಡಕ್ಕೆ ಬೆಂಕಿ ಹಚ್ಚಿದ್ದಾರೆ ಹೀಗಾಗಿ ಅವರು ಕಾಂಗ್ರೆಸ್ ನಾಯಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ಸ್ಪೋಟಕ ಹೇಳಿಕೆ ನೀಡಿದ್ದಾರೆ.
   
ವಿಧಾನ ಸೌಧದಲ್ಲಿಂದು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿ ದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ ಅಧಿಕಾರಿಗಳನ್ನೇ ಜಿಲ್ಲೆಗೆ ವರ್ಗಾವಣೆ ಮಾಡಿಕೊಟ್ಟಿದ್ದಾರೆ. ಅವರು ಸೂಚಿಸಿದ ಯೋಜನೆಗಳು, ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದು ಉಸ್ತುವಾರಿ ಸಚಿವ ಅಶ್ವಥ್ ನಾರಾಯಣ್ ಹಾಗೂ ಮುಖ್ಯಮಂತ್ರಿಗಳ ವಿರುದ್ಧವೂ ಯೋಗೀಶ್ವರ್ ಅಸಮಾಧಾನ ವ್ಯಕ್ತಪಡಿಸಿದರು.
    
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಎಚ್.ಡಿ.ಕುಮಾರಸ್ವಾಮಿ ಅನುಕೂಲ  ರಾಜಕಾರಣಿಗಳು.ಇಷ್ಟು ದಿನ ಹೊಂದಾಣಿಕೆ ರಾಜಕಾರಣ ಮಾಡಿಕೊಂಡು ಬಂದಿದ್ದರು.ಈಗ ಇಬ್ಬರಿಗೂ ಅಸ್ತಿತ್ವದ ಪ್ರಶ್ನೆಯಾಗಿದೆ.ಹೀಗಾಗಿ ಒಬ್ಬರ ಮೇಲೊಬ್ಬರು ಆರೋಪ ಮಾಡುತ್ತಿದ್ದಾರೆ.ಕುಮಾರಸ್ವಾಮಿ ಅವರಿಗೆ ಈಗ ಅಸ್ತಿತ್ವದ ಪ್ರಶ್ನೆಯಾಗಿರುವುದರಿಂದ ಮಾತನಾಡುತ್ತಿದ್ದಾರೆ.ಅವರ ಮಾತುಗಳನ್ನು ಮೇಲ್ನೋಟಕ್ಕೆ ನೋಡಿದರೆ ಬಿಜೆಪಿಗೆ ಬೆಂಬಲ ಕೊಡುತ್ತಿದ್ದಾರೆ ಎಂಬಂತೆ  ಕಾಣಿಸುತ್ತಿದೆ.ನಮ್ಮ ಸರ್ಕಾರದಲ್ಲಿ ಕುಮಾರಸ್ವಾಮಿ ಹೇಳಿರುವ ಎಲ್ಲ.ಕೆಲಸಗಳು ನಡೆಯುತ್ತಿವೆ.ಅವರು ಸೂಚಿಸಿದ ಅಧಿಕಾರಿಗಳನ್ನು ವರ್ಗಾವಣೆ ಮಾಡಿಕೊಡಲಾಗುತ್ತಿದೆ.ಹೀಗಾಗಿ ಅವರೂ ಬಿಜೆಪಿಗೆ ಸಫೋರ್ಟ್ ಮಾಡಲು ಮುಂದಾಗಿದ್ದಾರೆ ಎಂದು ಜಿಲ್ಲೆಯ ಇಬ್ಬರೂ ಪ್ರಮುಖ ನಾಯಕರ ವಿರುದ್ಧ ಕಿಡಿಕಾರಿದರು. 
  
ಡಿ.ಕೆ.ಶಿವಕುಮಾರ್ ಹಗಲು ಹೊತ್ತಲ್ಲಿ ಮಾತ್ರ ಕಾಂಗ್ರೆಸ್ ಅಧ್ಯಕ್ಷರಾಗಿ ಕೆಲಸ ಮಾಡುತ್ತಾರೆ.ರಾತ್ರಿಯಾದರೆ ನಮ್ಮ ಮುಖ್ಯಮಂತ್ರಿ ಬಳಿ ಬಂದು ಕೆಲಸ ಮಾಡಿಸಿ ಕೊಳ್ಳುತ್ತಾರೆ.ಇಬ್ಬರೂ ಸಹ  ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿ ಮುಂದುವರೆಯಲು ಎಂದು ಬಯಸುತ್ತಾರೆ.ಇಬ್ಬರೂ ನಾಯಕರು ಸಂದರ್ಭಕ್ಕೆ ತಕ್ಕಂತೆ,ಹೊಂದಾಣಿಕೆ ಮಾಡಿಕೊಳ್ಳುತ್ತಾರೆ.ಅವರನ್ನು ನಂಬಿದ ಎರಡೂ ಪಕ್ಷಗಳ  ಕಾರ್ಯಕರ್ತರು ಹಾಳಾಗುತ್ತಿದ್ದಾರೆ.ಅದಕ್ಕೆ ಬಿಜೆಪಿ ಪಕ್ಷಕ್ಕೆ ಸೇರುವಂತೆ ಬಹಿರಂಗವಾಗಿ ಕಾರ್ಯಕರ್ತರಿಗೆ ಆಹ್ವಾನ ನೀಡುತ್ತಿದ್ದೇನೆ ಎಂದು ಹೇಳಿದರು.   

ವಿಧಾನ ಪರಿಷತ್ ಗೆ ತಮ್ಮನ್ನು ಆಯ್ಕೆ ಮಾಡುವುದರಲ್ಲಿ ಪಕ್ಷದಲ್ಲಿ ಯಾರಿಗೂ ಅಸಮಾಧಾನ ಇಲ್ಲ. ಪಕ್ಷ ಹಾಗೂ ಯಡಿಯೂರಪ್ಪ ಎಲ್ಲರೂ ಒಮ್ಮತದಿಂದ ನನ್ನನ್ನು ಆಯ್ಕೆ ಮಾಡಿದ್ದಾರೆ.ನನ್ನನ್ನು ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿರುವುದು ಪುಣ್ಯ,ಸಂಪುಟ ಕ್ಕೆ ಸೇರಿಸಿಕೊಳ್ಳುವುದು ಪಕ್ಷದ ನಾಯಕರಿಗೆ ಬಿಟ್ಟ ವಿಚಾರ ಎಂದು ಮಾರ್ಮಿಕವಾಗಿ ನುಡಿದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *