bhtkal-08, shirsi-06,haliyal-18,siddapur-07- ಘಟ್ಟದ ಮೇಲೆ ಏರುತ್ತಲೇ ಸಾಗಿದೆ ಕರೋನಾ

ಉತ್ತರ ಕನ್ನಡ ಜಿಲ್ಲೆಯ 58 ಜನರಲ್ಲಿ ಇಂದು ಕರೋನಾ ಸೋಂಕು ದೃಢಪಟ್ಟಿದ್ದು ಹಳಿಯಾಳದಲ್ಲಿ 18, ಕುಮಟಾ,ಸಿದ್ಧಾಪುರಗಳಲ್ಲಿ ತಲಾ 7, ಕಾರವಾರ ಹೊನ್ನಾವರಗಳಲ್ಲಿ ತಲಾ1, ಭಟ್ಕಳದಲ್ಲಿ 8,ಶಿರಸಿಯಲ್ಲಿ ಆರು ಜನರಲ್ಲಿ ಕರೋನಾ ದೃಢಪಟ್ಟಿದೆ.

ದಾಂಡೇಲಿ,ಹಳಿಯಾಳದಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಏರುತಿದ್ದು ಶಿರಸಿ, ಸಿದ್ಧಾಪುರ ಜೊಯಡಾಗಳಲ್ಲಿ ಕೂಡಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಕರಾವಳಿಯಲ್ಲಿ ಜನರನ್ನು ಕಂಗಾಲುಮಾಡಿದ ಕರೋನಾ ಘಟ್ಟದ ಮೇಲಿನ ಪ್ರದೇಶದಲ್ಲಿ ಏರಿಕೆಯಾಗುವ ಸೂಚನೆ ನೀಡಿದಂತಾಗಿದೆ. ಜಿಲ್ಲೆಯಲ್ಲಿ ಈವರೆಗೆ ಸುಮಾರು 3ಸಾವಿರ ಜನರಿಗೆ ಕೋವಿಡ್19 ಹರಡಿದ್ದು ಇದರಿಂದ ನಿಧನರಾದವರ ಸಂಖ್ಯೆ 30 ಕ್ಕೂ ಹೆಚ್ಚು. ಸಂಪೂರ್ಣ ಗುಣಮುಖರಾದವರ ಸಂಖ್ಯೆ 2.5 ಸಾವಿರದಷ್ಟು.

ಸಿದ್ಧಾಪುರದ ವರದಿ-

ಸಿದ್ಧಾಪುರದಲ್ಲಿ ಇಂದು ದೃಢಪಟ್ಟ 7 ಪ್ರಕರಣಗಳೊಂದಿಗೆ ಬುಧವಾರದ ಒಂದು ಪ್ರಕರಣ ಸೇರಿ ಒಟ್ಟೂ ಇಂದಿನ ಪಟ್ಟಿಯಲ್ಲಿ 8 ಜನರ ಹೆಸರು ದಾಖಲಾಗಿದೆ. ಈವರೆಗೆ ಸಿದ್ಧಾಪುರದಲ್ಲಿ 52 ಜನರಲ್ಲಿ ಕರೋನಾ ದೃಢಪಟ್ಟಿದ್ದು 13 ಜನರು ಈಗಲೂ ಚಿಕಿತ್ಸೆ ಪಡೆಯುತಿದ್ದಾರೆ. ಸಿದ್ಧಾಪುರ ದ಻ಅರೆಂದೂರಿನಲ್ಲಿ ಇಂದು ದೃಢಪಟ್ಟ 6 ಪ್ರಕರಣಗಳೊಂದಿಗೆ ಹಿಂದಿನ 2 ಸೇರಿ ಒಟ್ಟೂ 8 ಜನರಲ್ಲಿ ಕರೋನಾ ದೃಢವಾದಂತಾಗಿದೆ. ವಂದಾನೆಯಲ್ಲಿ ಇಂದು ನಿನ್ನೆ ದೃಢಪಟ್ಟ ತಲಾ ಒಂದೊಂದು ಪ್ರಕರಣಗಳೊಂದಿಗೆ ಒಂದೇ ಕುಟುಂಬದ ಮೂವರಲ್ಲಿ ಕರೋನಾ ದೃಢಪಟ್ಟಿರುವುದರಿಂದ ಻ಅವರಿಗೆ ಅವರ ಮನೆಯಲ್ಲೇ ಚಿಕಿತ್ಸೆ ನಡೆಸುತ್ತಿರುವ ಬಗ್ಗೆ ಜಿಲ್ಲಾಡಳಿತ ನಿರ್ಧೇಶನ ನೀಡಿರುವುದಾಗಿ ತಿಳಿದುಬಂದಿದೆ.

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *