ಕೈ ನಾಯಕತ್ವದ ಕುರಿತು ಪ್ರಶ್ನೆ: ಗಾಂಧಿ ಕುಟುಂಬದ ಬೆನ್ನಿಗೆ ನಿಂತ ಅಮರೀಂದರ್ ಸಿಂಗ್, ಸಿದ್ದರಾಮಯ್ಯ, ಇತರೆ ನಾಯಕರು!

ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ.

Gandhi family leadership

ನವದೆಹಲಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾಗಬೇಕೆಂದು ಕೆಲವು ನಾಯಕರು ಪಟ್ಟು ಹಿಡಿದಿರುವ ಬೆನ್ನಲ್ಲೇ ಗಾಂಧಿ ಕುಟುಂಬದ ನಾಯಕತ್ವದ ಕುರಿತು ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಹಾಗೂ ಮಾಜಿ ಸಿಎಂ ಸಿದ್ಧರಾಮಯ್ಯ ಮಾತನಾಡಿದ್ದಾರೆ.

ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ ‘ಕಾಂಗ್ರೆಸ್ ಪಕ್ಷದಲ್ಲಿ ಗಾಂಧಿ ಕುಟುಂಬದ ನಾಯಕತ್ವವನ್ನು ಕೆಲವರು ಪ್ರಶ್ನಿಸುತ್ತಿರುವುದು ದುರದೃಷ್ಟಕರ. ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರಜಾಸತ್ತೆಯನ್ನೇ ನಾಶ ಮಾಡಲು ಹೊರಟಿರುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಬಲಪಡಿಸಲು‌  ನಾವೆಲ್ಲರೂ ಪ್ರಯತ್ನಿಸಬೇಕೇ ಹೊರತು ದುರ್ಬಲಗೊಳಿಸುವುದಲ್ಲ’ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿದರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ಗಾಂಧಿ ಕುಟುಂಬದ ನಾಯಕತ್ವದಿಂದಲೇ ಕಾಂಗ್ರೆಸ್ ಒಗ್ಗಟ್ಟಾಗಿದೆ. ಚುನಾವಣೆಯಲ್ಲಿನ ಸೋಲು ನಾಯಕತ್ವದ ಬದಲಾವಣೆಗೆ ಮಾರ್ಗವಲ್ಲ. ದೇಶವನ್ನು ಜಾತಿಯ ಹಾದಿಯಲ್ಲಿ ವಿಭಜಿಸುವ ಮಹತ್ವಾಕಾಂಕ್ಷೆ ಮತ್ತು  ಧರ್ಮವನ್ನು ಹೊಂದಿರುವ ಬಿಜೆಪಿ ಹಾದಿಯಲ್ಲಿ ನಿಸ್ವಾರ್ಥ ಬದ್ಧತೆ ಮತ್ತು ಊಹಿಸಲಾಗದ ತ್ಯಾಗಗಳ ಮೂಲಕ ಬಂಡೆಯಂತೆ ನಿಲ್ಲಲು ಅವಕಾಶ ಮಾಡಿಕೊಟ್ಟಿರುವ ಕುಟುಂಬವನ್ನು ದುರ್ಬಲಗೊಳಿಸುವುದು ತಪ್ಪು. ಗಾಂಧಿ ಕುಟುಂಬದ ಕಾಂಗ್ರೆಸ್ ನಾಯಕತ್ವಕ್ಕೆ ಯಾವುದೇ ಸವಾಲನ್ನು ವಿರೋಧಿಸುತ್ತೇವೆ ಎಂದು  ಹೇಳಿದ್ದಾರೆ.

ಅಂತೆಯೇ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಾಗೆಲ್ ಕೂಡ ಗಾಂಧಿ ಕುಟುಂಬದ ಬೆಂಬಲಕ್ಕೆ ನಿಂತಿದ್ದು, ‘ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಪ್ರತಿ ಸವಾಲಿನಲ್ಲೂ ನಮಗೆ ಭರವಸೆಯ ಕಿರಣ. ನಾವೆಲ್ಲರೂ ನಿಮ್ಮೊಂದಿಗಿದ್ದೇವೆ. ಕೋಟಿಗಟ್ಟಲೆ ಕಾರ್ಮಿಕರು ಮತ್ತು ಛತ್ತೀಸ್‌ಗಡ ಮತ್ತು ದೇಶದ  ದೇಶವಾಸಿಗಳು ನಿಮ್ಮೊಂದಿಗಿದ್ದಾರೆ” ಎಂದು ಟ್ವೀಟ್ ಮಾಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೂ ಕೂಡ ಈ ಕುರಿತು ಮಾತನಾಡಿದ್ದು, ಕರ್ನಾಟಕ ಕಾಂಗ್ರೆಸ್ ಘಟಕ ಗಾಂಧಿ ಕುಟುಂಬದ ನಾಯಕತ್ವಕ್ಕೆ ಬೆಂಬಲ ನೀಡುತ್ತದೆ. ಬಿಕ್ಕಿಟ್ಟಿನ ಸಂದರ್ಭದಲ್ಲೂ ಸೋನಿಯಾ ಅವರು ಯಾವುದೇ ರೀತಿಯ ದೃತಿಗೆಡದೆ ಪಕ್ಷವನ್ನು ಯಶಸ್ವಿಯಾಗಿ ಸಂಘಟಿಸಿದ್ದರು. ವಿಷಯ ಯಾವುದೇ  ಇರಲಿ ಅದನ್ನು ಪಕ್ಷದೊಳಗೆ ಚರ್ಚಿಸಬೇಕೇ ಹೊರತು ಮಾಧ್ಯಮಗಳ ಮೂಲಕ ಅಲ್ಲ ಎಂದು ಹೇಳಿದ್ದಾರೆ.  (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

forest land issue… ಅರಣ್ಯ ಭೂಮಿ ಹಕ್ಕು: ಅಧಿಕಾರಿಗಳ ನಿರ್ಲಕ್ಷ, ಮುಖ್ಯಮಂತ್ರಿಗಳ ಬಳಿ ನಿಯೋಗ ತೆರಳಲು ಎಚ್ಚರಿಕೆ!

ಸಿದ್ದಾಪುರ ತಾಲೂಕು ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಅರಣ್ಯ ಭೂಮಿ ಸಾಗುವಳಿ ಹಕ್ಕು ಅರ್ಜಿ ಪಡೆಯುವ ಪ್ರಕ್ರೀಯೆ ನಾಮಕಾವಾಸ್ಥೆ ನಡೆದಿದ್ದು ಇದಕ್ಕೆ ೧೫ ದಿವಸಗಳ...

ಮುಂಗಾರು ಪೂರ್ವ ಬರ ಸಿಡಿಲು….. ಕೋಟ್ಯಾಂತರ ಹಾನಿ! ಎಚ್ಚೆತ್ತ ಜಿಲ್ಲಾಡಳಿತ…

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ಸೇರಿದಂತೆ ಮಲೆನಾಡಿನಲ್ಲಿ ಸುರಿದ ಮುಂಗಾರು ಪೂರ್ವ ಮಳೆ ಅಪಾರ ಹಾನಿ ಮಾಡಿದೆ. ಒಣ ಬಿಸಿಲಿನಿಂದ ಕಂಗೆಟ್ಟ ಜನಜೀವನಕ್ಕೆ ಮಳೆ...

ರಮಾನಂದ ನಾಯಕ ನಿಧನ ಗಣ್ಯರ ಕಣ್ಣೀರು, ನಾಳೆ ಅಂತ್ಯಕ್ರೀಯೆ

ಉತ್ತರ ಕನ್ನಡ ಜಿಲ್ಲೆಯ ಹಿರಿಯ ರಾಜಕಾರಣಿ ಮೊದಲ ಜಿಲ್ಲಾ ಪರಿಷತ್‌ ಅಧ್ಯಕ್ಷ ರಮಾನಂದ ನಾಯಕ ಇಂದು ಅಸ್ತಂಗತರಾದರು. ಅಂಕೋಲಾ ತಾಲೂಕಿನ ಹಿಚ್ಕಡದ ಪ್ರತಿಷ್ಠಿತ ಕುಟುಂಬದ...

Latest Posts

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಈ ಆದೇಶ ಹೊರಡಿಸಿದೆ. ವಿಧಾನ ಸೌಧ ಬೆಂಗಳೂರು: ನಿಯೋಜಿತ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಜೂನ್ 3...

Recommended For You

About the Author: Kanneshwar Naik

Leave a Reply

Your email address will not be published. Required fields are marked *