ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ: ಸಚಿವ ಸುರೇಶ್ ಕುಮಾರ್

ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

Suresh Kumar

ಬೆಂಗಳೂರು: ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆ ಸರ್ಕಾರದ ಮುಂದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಶಾಲಾ-ಕಾಲೇಜುಗಳ ಪ್ರಾರಂಭದ ಕುರಿತು ಯಾವುದೇ ನಿರ್ಧಾರ‌ ಕೈಗೊಂಡಿಲ್ಲ. ಸದ್ಯಕ್ಕೆ ಶಾಲೆ-ಕಾಲೇಜುಗಳನ್ನು ಪ್ರಾರಂಭ ಮಾಡುವ ಯೋಚನೆಯು ಸರ್ಕಾರದ ಮುಂದೆ ಇಲ್ಲ.  ಈ ಕುರಿತು ಶಾಸಕರ ಮತ್ತು ಸಂಸದರ ಹಾಗೂ ಇತರೆ ಜನಪ್ರತಿನಿಧಿಗಳ ಅಭಿಪ್ರಾಯಗಳನ್ನು ಆಹ್ವಾನಿಸುತ್ತಿದ್ದೇನೆ.  ಇದರ ಜೊತೆಗೆ ಶಿಕ್ಷಕ ಸಂಘಟನೆಗಳೊಂದಿಗೆ ಹಾಗೂ ಶಿಕ್ಷಣ ತಜ್ಞರೊಂದಿಗೆ ಸಂವಾದ ನಡೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

ಅಂತೆಯೇ ನಾನೀಗ ಸದ್ಯಕ್ಕೆ ಬೀದರ್ ಜಿಲ್ಲೆಯ ಪ್ರವಾಸದಲ್ಲಿದ್ದು ಬೆಂಗಳೂರಿಗೆ ಬಂದ ನಂತರ ಈ ಕುರಿತು ಇನ್ನಷ್ಟು ವಿವರವಾಗಿ ವಾಸ್ತವಾಂಶವನ್ನು ತಿಳಿಸುತ್ತೇನೆ. ಮತ್ತೊಮ್ಮೆ ಸ್ಪಷ್ಟೀಕರಣ ನೀಡುವುದೆಂದರೆ ನಮ್ಮ ರಾಜ್ಯದ ಶಾಲೆ-ಕಾಲೇಜು ಪ್ರಾರಂಭ ಮಾಡುವ ದಿನಾಂಕದ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಆರ್ ಟಿಇ ಹಣ ಬಿಡುಗಡೆ ಮಾಡಿದ ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಧನ್ಯವಾದ ಹೇಳಿರುವ ಸುರೇಶ್ ಕುಮಾರ್ ಅವರು, ‘ನನ್ನ ಕೋರಿಕೆಯನ್ನು ಮನ್ನಿಸಿ‌ ಕ್ಷಿಪ್ರವಾಗಿ ಆರ್.ಟಿ.ಇ ಹಣ ಬಿಡುಗಡೆ ಮಾಡಿರುವ ಮುಖ್ಯಮಂತ್ರಿಗಳಿಗೆ ವಂದನೆಗಳು. ಖಾಸಗಿ ಶಾಲಾ ಶಿಕ್ಷಕರ ಒಂದಷ್ಟು ಬವಣೆ ನೀಗುವಲ್ಲಿ‌ ಇದು ಖಂಡಿತ ಸಹಕಾರಿಯಾಗಲಿದೆ. ಶಾಲೆಗಳು ಈ ಹಣವನ್ನು ಶಿಕ್ಷಕರ‌ ವೇತನಕ್ಕೆ ಮೊದಲ ಆದ್ಯತೆಯಾಗಿ ಬಳಸಲು ಪ್ರಾಧಾನ್ಯತೆಯನ್ನು ನೀಡಬೇಕು ಎಂದು ಹೇಳಿದ್ದಾರೆ.(kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *