ಪರಿಷತ್ ನಲ್ಲಿ ಪಾಸಾಗದ ಮಸೂದೆ: ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ; ಹೊಸ ಅಧ್ಯಕ್ಷರ ನೇಮಕ?

ಬಿಜೆಪಿ ಸರ್ಕಾರದ ಉದ್ದೇಶಿತ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

Prathap chandra shetty

ಬೆಂಗಳೂರು: ಬಿಜೆಪಿ ಸರ್ಕಾರದ ಉದ್ದೇಶಿತ ಭೂ ಸುಧಾರಣಾ ತಿದ್ದುಪಡಿ ಕಾಯಿದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರವಾಗದ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ನಿರ್ಧರಿಸಿದೆ.

ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಪರಿಷತ್ ಗೆ ಹೊಸ ಸಭಾಪತಿ ಆಯ್ಕೆ ಮಾಡಲು ಚಿಂತಿಸಿದೆ ಎಂದು ಮೂಲಗಳು ತಿಳಿಸಿವೆ, ಮಸೂದೆ ಪಾಸ್ ಮಾಡಿಕೊಳ್ಳುವ ಉದ್ದೇಶದಿಂದ ಜೆಡಿಎಸ್ ಗೆ ಸಭಾಪತಿ ಸ್ಥಾನ ನೀಡಲು ಬಿಜೆಪಿ ಸಿದ್ಧವಿದೆ ಎಂದು ಹೇಳಲಾಗುತ್ತಿದೆ.

ಅಧ್ಯಕ್ಷರ ಅಧಿಕಾರಾವಧಿ ಮುಗಿಯುವ ಮೊದಲು ಹೊಸ ಅಧ್ಯಕ್ಷ ಅಥವಾ ಉಪಾಧ್ಯಕ್ಷರನ್ನು ಆಯ್ಕೆ ಮಾಡುವ ಪ್ರಸ್ತಾಪವನ್ನು ಬಿಜೆಪಿ ಮಾಡಬೇಕಾದರೆ ಬಿಜೆಪಿಗೆ ಬಹುಮತ ಇರಬೇಕು,  ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರೆ ಬಿಜೆಪಿಗೆ ಅಗತ್ಯ ಸಂಖ್ಯೆ ಸಿಗುತ್ತದೆ.

ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಹಾಲಿ ಪರಿಷತ್ ಸಭಾಪತಿ ಪ್ರತಾಪ್ ಚಂದ್ರ ಶೆಟ್ಟಿ ಅವರನ್ನು ನೇಮಿಸಲಾಗಿತ್ತು, ಹೀಗಾಗಿ ಸಭಾಪತಿಗಳು ಕಾಂಗ್ರೆಸ್ ಪರವಾಗಿದ್ದಾರೆ, ಹೀಗಾಗಿ ಮಸೂದೆ ಪಾಸು ಮಾಡಲು ಅವಕಾಶ ನೀಡಲಿಲ್ಲ ಎಂಬ ಆರೋಪಗಳು ಕೇಳಿ ಬರುತ್ತಿವೆ.

ಎಪಿಎಂಸಿ ತಿದ್ದುಪಡಿ ಕಾಯಿದೆ, ಮತ್ತು ಭೂ ಸುಧಾರಣಾ ತಿದ್ದುಪಡಿ ಕಾಯಿದೆ,ಕೈಗಾರಿಕಾ ಮಸೂದೆ, ವಿಧಾನಸಭೆಯಲ್ಲಿ ಅಂಗೀಕಾರಗೊಂಡಿವೆ, ಆದರೆ ಪರಿಷತ್ ನಲ್ಲಿ ವಿಫಲವಾಗಿವೆ.

ವಿಧಾನ ಪರಿಷತ್ ನಲ್ಲಿ 40 ಎಂ ಎಲ್ ಸಿಗಳಿದ್ದರು, ಈ ವೇಳೆ ಕೈಗಾರಿಕಾ ಮಸೂದೆಯನ್ನು ಮತಕ್ಕೆ ಹಾಕಲಾಯಿತು.ಮಸೂದೆಗೆ ಪರವಾಗಿ 14 ಮತಗಳು ಹಾಗೂ ಮಸೂದೆ ವಿರೋಧಿಸಿ ಜೆಡಿಎಸ್ ಸದಸ್ಯರು ಸೇರಿದಂತೆ ಒಟ್ಟು 26 ಸದಸ್ಯರು ಮತ ಚಲಾಯಿಸಿದರು, ಮಧ್ಯರಾತ್ರಿ 1 ಗಂಟೆವರೆಗೂ ಚರ್ಚೆ ನಡೆಯಿತು. 

ಶೀಘ್ರದಲ್ಲೇ ಸಿಎಂ ಯಡಿಯೂರಪ್ಪ ಅವರು ಸಭೆ ನಡೆಸಿ  ಈ ಸಂಬಂಧ ನಿರ್ಧಾರ ಕೈಗೊಳ್ಳಲಿದ್ದಾರೆ. ಸದ್ಯ ಕೌನ್ಸಿಲ್ ನಲ್ಲಿ 71 ಸದಸ್ಯರಿದ್ದು, ಕಾಂಗ್ರೆಸ್-29, ಜೆಡಿಎಸ್ 17 ಮತ್ತು ಬಿಜೆಪಿ 27 ಸದಸ್ಯರಿದ್ದಾರೆ.ಉಳಿದ ಸೀಟುಗಳಿಗೆ ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದೆ.

ಸಭಾಪತಿ ಆಯ್ಕೆ ಸಂಬಂಧ ಜೆಡಿಎಸ್ ಪಕ್ಷವನ್ನು ಸಂಪರ್ಕಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಬಿಜೆಪಿ ನಾಯಕರು ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *