ಡಿಕೆ ಬ್ರದರ್ಸ್ ಗೆ ಬೆಳ್ಳಂಬೆಳಗ್ಗೆ ಸಿಬಿಐ ಶಾಕ್: 14 ಕಡೆಗಳಲ್ಲಿ 60ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ, ದಾಖಲೆಗಳ ಪರಿಶೀಲನೆ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.

D K Suresh and D K Shivakumar

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ)ಅಧ್ಯಕ್ಷ ಡಿ ಕೆ ಶಿವಕುಮಾರ್ ಮತ್ತು ಅವರ ಸೋದರ ಸಂಸದ ಡಿ ಕೆ ಸುರೇಶ್ ಅವರಿಗೆ ಸೋಮವಾರ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ.

60ಕ್ಕೂ ಹೆಚ್ಚು ಸಿಬಿಐ ಅಧಿಕಾರಿಗಳು ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ ಕೆ ಶಿವಕುಮಾರ್ ನಿವಾಸ ಸೇರಿದಂತೆ ಅವರ ಊರು ರಾಮನಗರದ ದೊಡ್ಡ ಆಲದಹಳ್ಳಿಯ ಮನೆ ಸೇರಿ 15ಕ್ಕೂ ಹೆಚ್ಚು ಕಡೆಗಳಲ್ಲಿ ಏಕಾಏಕಿ ದಾಳಿ ನಡೆಸಿದ್ದಾರೆ.

ಇಂದು ಬೆಳಗ್ಗೆ 6 ಗಂಟೆಯಿಂದ ನಿರಂತರವಾಗಿ ದಾಳಿ ನಡೆಸುತ್ತಿದ್ದು  ವ್ಯವಸ್ಥಿತವಾಗಿ ಸಿಬಿಐ ಅಧಿಕಾರಿಗಳು ಮಾಹಿತಿ ಕಲೆ ಹಾಕಿ ದಾಳಿ ನಡೆಸಿದ್ದಾರೆ. ಸದ್ಯ ಡಿ ಕೆ ಶಿವಕುಮಾರ್ ಅವರನ್ನು ಒಬ್ಬರನ್ನೇ ಕೂರಿಸಿಕೊಂಡು ನಿರಂತರವಾಗಿ ದಾಖಲೆಗಳನ್ನು ಪರಿಶೀಲನೆ ಮಾಡಲಾಗುತ್ತಿದ್ದು, ಸಿಬಿಐ ಎಸ್ಪಿ ಥಾಮ್ಸನ್ ಜೋಸ್ ನೇತೃತ್ವದಲ್ಲಿ ದಾಳಿ ನಡೆದಿದೆ. ಅವರ ಕುಟುಂಬಸ್ಥರನ್ನೆಲ್ಲಾ ಮನೆ ಹತ್ತಿರದಲ್ಲಿರುವ ಕಚೇರಿಗೆ ಸದ್ಯ ಸ್ಥಳಾಂತರ ಮಾಡಲಾಗಿದೆ ಎಂದು ತಿಳಿದುಬಂದಿದೆ.

ದೆಹಲಿಯ 4 ಕಡೆ, ಮುಂಬೈಯ 1 ಕಡೆ ದಾಳಿ: ಸಿಬಿಐ ಅಧಿಕಾರಿಗಳು ದೆಹಲಿ, ಮುಂಬೈ ಕೂಡ ಬಿಟ್ಟಿಲ್ಲ. ದೆಹಲಿಯಲ್ಲಿ ಸಂಸದ ಡಿ ಕೆ ಸುರೇಶ್ ವಾಸ್ತವ್ಯ ಹೂಡುವ ಕಾವೇರಿ ಅಪಾರ್ಟ್ ಮೆಂಟ್ ಮೇಲೆ, ಮುಂಬೈಯಲ್ಲಿರುವ ನಿವಾಸಗಳ ಮೇಲೆ ಸಹ ವ್ಯವಸ್ಥಿತವಾಗಿ ದಾಳಿ ನಡೆಸಿದ್ದಾರೆ. ಸಾಕಷ್ಟು ಪೂರ್ವ ತಯಾರಿ ನಡೆಸಿಯೇ ದಾಳಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ನಿನ್ನೆಯೇ ಸರ್ಚ್ ವಾರಂಟ್ ಬಂದಿತ್ತು ಎಂದು ತಿಳಿದುಬಂದಿದೆ.

ಡಿ ಕೆ ಸೋದರರ ನಿವಾಸಗಳ ಮೇಲೆ ದಾಳಿ ನಡೆಯುತ್ತಿದ್ದಂತೆ ಅವರ ಬೆಂಬಲಿಗರು ಜಮಾಯಿಸಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ಹಿಂದೆ ಜಾರಿ ನಿರ್ದೇಶನಾಲಯ ಡಿ ಕೆ ಶಿವಕುಮಾರ್ ನಿವಾಸದ ಮೇಲೆ ದಾಳಿ ನಡೆಸಿ ಅವರು ಜೈಲಿಗೆ ಕೂಡ ಹೋಗಿ ಬಂದಿದ್ದರು. (kpc)https://www.facebook.com/Varadigara/videos/335438387545191/

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *