19ರ ಯುವತಿಯೊಂದಿಗೆ 35 ವರ್ಷದ ಶಾಸಕ ‘ರಹಸ್ಯ’ ವಿವಾಹ, ಯುವತಿಯ ಪೋಷಕರಿಂದ ದೂರು ದಾಖಲು

ತಮಿಳುನಾಡಿನ 35 ವರ್ಷದ ಶಾಸಕರೊಬ್ಬರು 19ರ ಹರೆಯದ ಯುವತಿಯೊಂದಿಗೆ ರಹಸ್ಯ ವಿವಾಹಹವಾಗಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿದೆ.

ವಿಲ್ಲುಪುರಂ: ತಮಿಳುನಾಡಿನ 35 ವರ್ಷದ ಶಾಸಕರೊಬ್ಬರು 19ರ ಹರೆಯದ ಯುವತಿಯೊಂದಿಗೆ ರಹಸ್ಯ ವಿವಾಹಹವಾಗಿರುವುದು ಇದೀಗ ವಿವಾದಕ್ಕೆ ಎಡೆ ಮಾಡಿದೆ.

ತಮಿಳುನಾಡಿನ ಕಲ್ಲಕುರಿಚಿ ಕ್ಷೇತ್ರದ ಎಐಎಡಿಎಂಕೆಯ ಶಾಸಕ  ಎ ಪ್ರಭು ದ್ವಿತೀಯ ಪಿಯು ವ್ಯಾಸಂಗ ಮಾಡುತ್ತಿರುವ 19 ವರ್ಷದ ಯುವತಿಯೊಂದಿಗೆ ವಿವಾಹವಾಗಿದ್ದಾರೆ. ಈ ವಿವಾಹ ಇದೇ ಸೋಮವಾರ (ಅಕ್ಟೋಬರ್ 5) ನಡೆದಿದೆ. ಆದರೆ ಇದೊಂದು ಗುಟ್ಟಿನಲ್ಲಿ ನಡೆದ ಮದುವೆ ಎಂದು ಆರೋಪಿಸಿರುವ ಯುವತಿಯ ಕುಟುಂಬ ವಿವಾಹಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಯುವತಿಯ  ತಂದೆ ಸ್ವಾಮಿನಾಥನ್ ತನ್ನ ಮಗಳನ್ನು ಅಪಹರಿಸಿ ಬಲವಂತವಾಗಿ ವಿವಾಹ ಮಾಡಿಕೊಳ್ಳಲಾಗಿದೆಎಂದು ಆರೋಪಿಸಿ ಶಾಸಕರ ಮದುವೆ ಮಂಟಪದ ಎದುರೇ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಈ ಸಂಬಂಧ ಸಂತ್ರಸ್ಥೆಯ ಪೋಷಕರು ತ್ಯಾಗದುರುಗಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ತನ್ನ ದೂರಿನಲ್ಲಿ ಸ್ವಾಮಿನಾಥನ್ ಶಾಸಕ ಪ್ರಭುವಿನಿಂದ ತಮಗೆ ಕೊಲೆ ಬೆದರಿಕೆ ಇದೆ. ಅಲ್ಲದೆ ಅವರು ಆಡಳಿತ ಪಕ್ಷದ ದೊಡ್ಡ ನಾಯಕರಾಗಿರುವುದರಿಂದ ಯಾರೂ ಅವರಿಗೆ ಏನೂ ಮಾಡಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ. ಅಲ್ಲದೆ ಈ ಹಿಂದೆ ಅದೇ ಶಾಸಕ ಇದೀಗ ವಿವಾಹವಾಗಿರುವ ನನ್ನ ಪುತ್ರಿಯನ್ನೂ ಕೊಲ್ಲುವ ಬೆದರಿಕೆ ಹಾಕಿದ್ದನೆಂದೂ ದೂರಿನಲ್ಲಿ ವಿವರಿಸಲಾಗಿದೆ.

ಇನ್ನು ಇದೊಂದು ಅಂತರ್ಜಾತಿಯ ವಿವಾಹವಾಗಿದೆ. ಆದರೆ ಸಂತ್ರಸ್ಥೆಯ ತಂದೆ “ತಮಗೆ ಜಾತಿಯ ಸಮಸ್ಯೆ ಇಲ್ಲ, ವಯಸ್ಸಿನ ಅಂತರವೇ ಸಮಸ್ಯೆಯಾಗಿದೆ” ಎಂದು ಹೇಳಿದ್ದಾರೆ.

ಕೊರೋನಾವೈರಸ್  ಸಾಂಕ್ರಾಮಿಕ ರೋಗದಿಂದಾಗಿ ಮದುವೆಯನ್ನು ಸರಳವಾಗಿ ನೆರವೇರಿಸಲಾಗಿದೆ.  ಹಾಗಾಗಿ ವಿವಾಹಕ್ಕೆ ಹೆಚ್ಚಿನ ಸಂಖ್ಯೆಯ ಜನರಿಗೆ ಆಹ್ವಾನವಿರಲಿಲ್ಲ ಎಂದು ಶಾಸಕ ಪ್ರಭು ಹೇಳಿದ್ದಾರೆ.

ಮೂಲಗಳ ಪ್ರಕಾರ, ಪ್ರಭು ಮದುವೆಯಾದ ಹುಡುಗಿಯನ್ನು ಒಂದು ದಶಕಕ್ಕೂ ಹೆಚ್ಚು ಕಾಲದಿಂದ ತಿಳಿದವರಾಗಿದ್ದರು.ಮತ್ತು ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಯುವತಿಯ ತಂದೆ ಮಾತ್ರ “ಇದೊಂದು ಷಡ್ಯಂತ್ರ” ಎಂದು ಆರೋಪಿಸಿದ್ದಾರೆ. ಇದೀಗ ಈ ವಿವಾಹ ತಮಿಳು ನಾಡಿನಾದಂತ ದೊಡ್ದ ಚರ್ಚೆಗೆ ಆಸ್ಪದ ನೀಡಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *