ಮಾಸ್ಕ್ ದಂಡ ಕಡಿತ: ನಗರ ಪ್ರದೇಶಗಳಲ್ಲಿ 250 ರೂ. ಗ್ರಾಮೀಣ ಭಾಗದಲ್ಲಿ 100 ರೂ. ದಂಡ ವಿಧಿಸಲು ಸಿಎಂ ಆದೇಶ

ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ….

Yediyurappa

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಿಸುವಲ್ಲಿ, ಮಾರ್ಗಸೂಚಿ ಪಾಲಿಸದವರ ವಿರುದ್ದ ಸರ್ಕಾರ ಘೋಷಿಸಿದ್ದ ದುಬಾರಿ ದಂಡ ವಸೂಲಾತಿ ಕ್ರಮಕ್ಕೆ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಮಾಸ್ಕ್ ಧರಿಸದವರ ಮೇಲೆ ಹಾಕಲಾಗುತ್ತಿದ್ದ ದಂಡ ಶುಲ್ಕವನ್ನು ಇಳಿಕೆ ಮಾಡಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಆದೇಶಿಸಿದ್ದಾರೆ.

ಈ ಮುಂಚೆ ಮಾಸ್ಕ್ ಧರಿಸದವರ ವಿರುದ್ಧ ರಾಜ್ಯಾದ್ಯಂತ ನಗರ ಪ್ರದೇಶಗಳಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 500ರೂ ದಂಡ ವಿಧಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. 

ನಂತರ ಬೆಂಗಳೂರು ನಗರದಲ್ಲಿ ಬಿಬಿಎಂಪಿ ಮಾರ್ಷಲ್ ಗಳು ಹಾಗೂ ಪೊಲೀಸರು ಅಕ್ಷರಶಃ ದರೋಡೆಗೆ ಇಳಿದಿದ್ದರು. ರಸ್ತೆಯಲ್ಲಿ ಓಡಾಡುವವರು, ಬೈಕ್ ನಲ್ಲಿ ಪ್ರಯಾಣಿಸುವವರು, ಕೂಲಿ ಕಾರ್ಮಿಕರು, ಅಲೆಮಾರಿಗಳನ್ನು ಹಿಡಿದು ಬಲವಂತದಿಂದ ಸಾವಿರ ರೂಪಾಯಿ ದಂಡ ವಸೂಲಿ ಮಾಡುತ್ತಿದ್ದರು. ಈ ದುಬಾರಿ ದಂಡಕ್ಕೆ ರಾಜ್ಯದೆಲ್ಲೆಡೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. 

ಈ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ದಂಡ ಪ್ರಮಾಣ ಇಳಕೆ ಮಾಡಿ ಆದೇಶ ಹೊರಡಿಸಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ನಗರ ಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡ ವಿಧಿಸಲು ಆದೇಶಿಸಿದೆ.

‘ಜೀವ ಮತ್ತು ಜೀವನ’ ಎರಡನ್ನೂ ಸರಿದೂಗಿಸಿಕೊಂಡ ಹೋಗಲು ‌ಸರ್ಕಾರ ಸರ್ವ ಪ್ರಯತ್ನ ಮಾಡುತ್ತಿದೆ. ಜನರು ಸ್ವಯಂ ಪ್ರೇರಿತರಾಗಿ ಮಾಸ್ಕ್ , ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಸಾರ್ವಜನಿಕರ ವಿರೋಧ ಹಾಗೂ ತಜ್ಞರ ಸಲಹೆಯಂತೆ ಈ ದಂಡದ ದರ ಇಳಿಸಲಾಗಿದೆ  ಈ ಮೂಲಕ ಸರ್ಕಾರದೊಂದಿಗೆ ಕೈಜೋಡಿಸುವಂತೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *