ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಆಯೋಗ ಸ್ಪಷ್ಟ ನಿಲುವು: ಹೈಕೋರ್ಟ್ ಗೆ ವೇಳಾಪಟ್ಟಿ ಸಲ್ಲಿಕೆ

ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸ್ಪಷ್ಟ ನಿಲುವು ತಾಳಿದ್ದು, ಸಂಭಾವ್ಯ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ಸಲ್ಲಿಸಿದೆ.

High_Court1

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ರಾಜ್ಯ ಚುನಾವಣಾ ಆಯೋಗ ಸ್ಪಷ್ಟ ನಿಲುವು ತಾಳಿದ್ದು, ಸಂಭಾವ್ಯ ವೇಳಾಪಟ್ಟಿಯನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್ ಗೆ ಸಲ್ಲಿಸಿದೆ.

ಮುಖ್ಯ ನ್ಯಾಯಾಧೀಶ ಅಭಯ್ ಶ್ರೀನಿವಾಸ ಓಕಾ ಮತ್ತು ನ್ಯಾಯಾಧೀಶ ಅಶೋಕ್ ಕೆ ಕಿನಾಗಿ ಅವರನ್ನೊಳಗೊಂಡ ವಿಭಾಗೀಯ ಪೀಠದ ಮುಂದೆ ಹಿರಿಯ ವಕೀಲ ಕೆ.ಎನ್. ಫಣೀಂದ್ರ, ರಾಜ್ಯ ಚುನಾವಣಾ ಆಯೋಗದ ಪರ ಸಂಭಾವ್ಯ ವೇಳಾಪಟ್ಟಿಯನ್ನು ಸಲ್ಲಿಸಿದರು. ಈ ವೇಳಾಪಟ್ಟಿಯಂತೆ ಚುನಾವಣೆ ನಡೆಸಲು ನಿರ್ಧರಿಸಿರುವುದಾಗಿ ಅವರು ಹೇಳಿದರು.

ಸ್ಪಷ್ಟ ನಿಲುವು ತಾಳುವಂತೆ ಹೈಕೋರ್ಟ್ ನಿರ್ದೇಶನದ ನಂತರ ರಾಜ್ಯ ಚುನಾವಣಾ ಆಯೋಗ, ವೇಳಾಪಟ್ಟಿ ಸಲ್ಲಿಸಿದೆ.  ಆದ್ದರಿಂದ ಚುನಾವಣೆಗಳನ್ನು ಮುಂದೂಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ವಾದಗಳನ್ನು ಪರಿಶೀಲಿಸಿದ ನಂತರ ನ್ಯಾಯಪೀಠ ಆದೇಶ ಹೊರಡಿಸುವ ಸಾಧ್ಯತೆಯಿದೆ.

ಚುನಾವಣೆ ಮುಂದೂಡುವಂತೆ ರಾಜ್ಯ ಸರ್ಕಾರದಿಂದ ಪತ್ರ ಬಂದಿರುವುದಾಗಿ ಚುನಾವಣಾ ಆಯೋಗದಿಂದ ಪತ್ರ ಬಂದಿದೆ. ಒಂದು ವೇಳೆ ಚುನಾವಣೆಯನ್ನು ಮುಂದೂಡಿದರೆ, ಬಿಬಿಎಂಪಿ ಸೇರಿದಂತೆ ಇನ್ನಿತರ ಸ್ಥಳೀಯ ಸಂಸ್ಥೆಗಳ ಚುನಾವಣೆ ವೇಳಾಪಟ್ಟಿಯೂ ಅಸ್ತವ್ಯಸ್ತಗೊಳ್ಳಲಿದೆ ಎಂದು ಚುನಾವಣಾ ಆಯೋಗ ಪರ ವಕೀಲರು ಹೇಳಿದರು.

ಈ ಮಧ್ಯೆ, ಪ್ರಮುಖ ಮೂರು ರಾಜಕೀಯ ಪಕ್ಷಗಳು ಒಟ್ಟಾಗಿ ಚುನಾವಣೆ ಮುಂದೂಡುವಂತೆ ಕೋರಿರುವ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡಲು ಆಯೋಗಕ್ಕೆ ಕೇಳಿಕೊಂಡಿರುವುದಾಗಿ ರಾಜ್ಯ ಸರ್ಕಾರದ ಪರ ವಕೀಲರು ತಮ್ಮ ವಾದ ಮಂಡಿಸಿದರು.

ಕೇವಲ ಎರಡು ಪಕ್ಷಗಳು ಚುನಾವಣೆ ಮುಂದೂಡುವಂತೆ ಕೇಳಿಕೊಂಡಿರುವುದಾಗಿ ರಾಜ್ಯ ಚುನಾವಣಾ ಆಯೋಗ ಪರ ವಕೀಲರು ಸ್ಪಷ್ಟಪಡಿಸಿದರು. ಬಿಹಾರ ವಿಧಾನಸಭಾ ಚುನಾವಣೆಯನ್ನು ಉಲ್ಲೇಖಿಸಿದ ನ್ಯಾಯಪೀಠ, ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಏಕೆ ಕಷ್ಟವಾಗಿದೆ ಎಂದು ಕೇಳಿತು.

ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಲು ಅಡ್ವೋಕೆಟ್ ಜನರಲ್ ಗಾಗಿ ಸಮಾಯಾವಕಾಶವನ್ನು  ಸರ್ಕಾರದ ಪರ ವಕೀಲರು ಕೇಳಿಕೊಂಡರು. ನ್ಯಾಯಪೀಠ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 21ಕ್ಕೆ ಮುಂದೂಡಿತು.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಶಿರಸಿ – ಹಣಕಾಸಿನ ವಿಚಾರ ಒಂದು ಸಾವು, ಮಹಿಳೆಯ ಬಂಧನ!

ಶಿರಸಿ ಪೊಲೀಸ್ರಿಂದ ಕಾರ್ಯಚರಣೆ. ಎಟಿಎಂ ನಿಂದ ಹಣ ತೆಗೆಯಲು ಮುಗ್ದ ಹೆಣ್ಣು ಮಕ್ಕಳಿಗೆ ನೆರವಾಗುವ ನಾಟಕಮಾಡಿ ಅವರ ಎಟಿಎಂ ನಿಂದಲೇ ಹಣ ತೆಗೆದು ಪರಾರಿಯಾಗುತ್ತಿದ್ದ...

ನಾನು ಗ್ಯಾರಂಟಿ ವಿರೋಧಿಯಲ್ಲ…- ಆರ್.ವಿ. ದೇಶಪಾಂಡೆ

ಐದು ಗ್ಯಾರಂಟಿಗಳಿಗೆ ೫೮ ಸಾವಿರ ಕೋಟಿ ವ್ಯಯವಾಗುತಿದ್ದು ಇದು ಸರ್ಕಾರಕ್ಕೆ ಹೊರೆಯಾಗುತ್ತಿರುವುದರಿಂದ ಅಭಿವೃದ್ಧಿಗೂ ತೊಡಕಾಗುತ್ತಿದೆ. ಅರ್ಹರಿಗೆ ಮಾತ್ರ ಈ ಯೋಜನೆಗಳ ಲಾಭ ತಲುಪುವಂತೆ ಮಾಡಿ...

ಕಾನಗೋಡು ಬಳಿ ಅಪಘಾತ, ಒಂದು ಸಾವು

ಶಿರಸಿ ತಾಲೂಕಿನ ಕಾನಗೋಡು ಬಳಿ ಇಂದು ಮಧ್ಯಾಹ್ನ ನಡೆದ ಭೀಕರ ಅಪಘಾತದಲ್ಲಿ ಒಬ್ಬ ವ್ಯಕ್ತಿ ಮೃತಪಟ್ಟು ಇನ್ನೊಬ್ಬರಿಗೆ ತೀವೃತರಹದ ಗಾಯಗಳಾದ ಬಗ್ಗೆ ವರದಿಯಾಗಿದೆ. ಕಾರು...

ತಾ.ಜಿ. ಕಾಂಗ್ರೆಸ್‌ ಅಧ್ಯಕ್ಷರ ಬದಲಾವಣೆ……

ಬ್ಲಾಕ್, ಜಿಲ್ಲಾಧ್ಯಕ್ಷರ ಬದಲಾವಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಸುಳಿವು ಸಂಘಟನಾತ್ಮಕ ಬದಲಾವಣೆ ಹಾಗೂ ಸಮಾಜಕ್ಕೆ ತಲುಪುವ ಉದ್ದೇಶದಿಂದ ಜಿಲ್ಲಾ ಮಟ್ಟದ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗುತ್ತದೆ ಎಂದು...

ಹುಲಕುತ್ರಿಯ ಶಿಕ್ಷಕ ದರ್ಶನ ಹರಿಕಾಂತ್‌ ಅಭಿನಂದಿಸುತ್ತಾ……

ಉತ್ತರ ಕನ್ನಡ ಜಿಲ್ಲೆಯ ಶಿರಸಿ ಶೈಕ್ಷಣಿಕ ಜಿಲ್ಲೆಯ ಕುಗ್ರಾಮ ಹುಲಕುತ್ರಿ. ಈ ಗ್ರಾಮದಲ್ಲಿ ಮುಖ್ಯ ಶಿಕ್ಷಕರಾಗಿ ಪ್ರಾಥಮಿಕ ಶಾಲೆಯನ್ನು ವಿಶ್ವಕ್ಕೆ ಪರಿಚಯಿಸಿದವರು ದರ್ಶನ ಹರಿಕಾಂತ....

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *