ಹೊರಗಿನ ಕಳ್ಳರನ್ನು ನಿಯಂತ್ರಿಸುವುದೇ ಸವಾಲು, ಪರಸ್ಥಳದ ಜನರ ಬಗ್ಗೆ ಇರಲಿ ಎಚ್ಚರ

ಸಿದ್ಧಾಪುರ ಸೇರಿದಂತೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳ್ಳತನ, ಬೆಟ್ಟಿಂಗ್ ವ್ಯವಹಾರ ನಡೆಯುತ್ತಿರುವ ಬಗ್ಗೆ ದೂರುಗಳಿವೆ. ಹೊರ ಊರಿನ ಜನರಿಂದ ಕಳ್ಳತನ, ಸ್ಥಳಿಯರ ಬೆಟ್ಟಿಂಗ್ ವ್ಯವಹಾರ ಇವುಗಳ ನಡುವೆ ಪರಸ್ಪರ ಸಂಬಂಧ ಇರುವ ಬಗ್ಗೆ ಇತ್ತೀಚೆಗೆ ಪೊಲೀಸ್ ಜನಸಂಪರ್ಕ ಸಭೆಯಲ್ಲಿ ಜೆ.ಡಿ.ಎಸ್. ಅಲ್ಪಸಂಖ್ಯಾತರ ಜಿಲ್ಲಾ ಘಟಕದ ಅಧ್ಯಕ್ಷ ಇಲಿಯಾಸ್ ಶೇಖ್ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಸಿದ್ಧಾಪುರದ ಶಿಕ್ಷಕರ ಸೌಹಾರ್ದ ಸಹಕಾರಿ ಸಂಘದಲ್ಲಿ ನಡೆದ ಕಳ್ಳತನದ ಹಿಂದೆ ಇಂಥ ಕಾರಣಗಳಿರಬಹುದೆಂದು ಚರ್ಚೆ ನಡೆಯುತ್ತಿದೆ.

ಅಂತರ ಜಿಲ್ಲಾ ಮನೆ ಕಳ್ಳನ ಬಂಧನ ಹಾಗೂ 05 ಲಕ್ಷ ರೂ ಕಿಮ್ಮತ್ತಿನ ಬಂಗಾರದ, ಬೆಳ್ಳಿಯ ಆಭರಣ, ನಗದು ಹಣ ಜಪ್ತಿ

ಮುಂಡಗೋಡ ತಾಲೂಕಿನ ಗ್ರಾಮೀಣ ಭಾಗದಲ್ಲಿ ಕಳೆದ 02 ವರ್ಷಗಳಿಂದ ರಾತ್ರಿ ವೇಳೆಯಲ್ಲಿ ಮನೆಯ ಜನರು ಮಲಗಿರುವಾಗಲೇ ಮನೆಯ ಹಿಂದಿನ ಬಾಗಿಲನ್ನು ದೂಡಿ ಚಿಲಕ ತೆಗೆದು ಮನೆಯ ಒಳಗೆ ಪ್ರವೇಶಿಸಿ ಮನೆ ಕಳ್ಳತನ ಮಾಡುತ್ತಿದ್ದ ಬಗ್ಗೆ ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳು ದಾಖಲಾಗಿ ತನಿಖೆ ಕೈಗೊಳ್ಳಲಾಗಿತ್ತು. ದಿನಾಂಕ : 19-10-2020 ರಂದು ಮುಂಡಗೋಡ ಠಾಣಾ ವ್ಯಾಪ್ತಿಯ ಮೈನಳ್ಳಿಯಲ್ಲಿ ಒಂದೇ ದಿನ ಎರಡು ಮನೆ ಕಳ್ಳತನವಾಗಿದ್ದು ಆರೋಪಿಯು ಕಳುವು ಮಾಡುವಾಗ ಮನೆಯ ಜನರು ಎಚ್ಚರವಾಗಿ ಅವನನ್ನು ಬೆನ್ನು ಹತ್ತಿ ಹಿಡಿಯಲು ಪ್ರಯತ್ನಿಸಿದರಾದರೂ ಆರೋಪಿಯು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದನು. ಅದರಂತೆ ಕೂಡಲೇ ಕಾರವಾರ ಜಿಲ್ಲಾ ಮಾನ್ಯ ಎಸ್.ಪಿ. ಸಾಹೇಬರು, ಮಾನ್ಯ ಹೆಚ್ಚುವರಿ ಎಸ್.ಪಿ. ಸಾಹೇಬರು ಮತ್ತು ಮಾನ್ಯ ಶಿರಸಿ ಡಿ.ಎಸ್.ಪಿ. ರವರು ಮುಂಡಗೋಡ ಠಾಣಾ ಪೊಲೀಸ್ ನಿರೀಕ್ಷಕರ ನೇತ್ರತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಆರೋಪಿಯನ್ನು ಪತ್ತೆ ಹಚ್ಚಲು ಬಲೆ ಬೀಸಲಾಗಿತ್ತು. ದಿನಾಂಕ 27-10-2020 ರಂದು ಆರೋಪಿಯನ್ನು ಪತ್ತೆ ಹಚ್ಚಿದ್ದು ಅವನು ವಿಚಾರಣೆಯಲ್ಲಿ 2018 ರಿಂದ ಇಲ್ಲಿಯವರೆಗೆ ಮುಂಡಗೋಡ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಳ್ಳತನ ಮಾಡಿದ ಬಗ್ಗೆ ಒಪ್ಪಿಕೊಂಡಿದ್ದನು. ಇಂದು ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ತೆಗೆದುಕೊಂಡು ಅವನಿಂದ ಕಳವು ಮಾಡಿದ ಬಂಗಾರದ ಆಭರಣಗಳು ಸುಮಾರು 70 ಗ್ರಾಂ ಅ||ಕಿ|| 3,50,000 ರೂಪಾಯಿ ಹಾಗೂ ಬೆಳ್ಳಿಯ ಆಭರಣಗಳು ಸುಮಾರು 200 ಗ್ರಾಂ ಅ||ಕಿ|| 15,000 ರೂಪಾಯಿ ಹಾಗೂ 31,000 ರೂ ನಗದು ಹಣ ಹೀಗೆ ಒಟ್ಟು 5 ಲಕ್ಷ ರೂ ಕಿಮ್ಮತ್ತಿನ ಬಂಗಾರದ ಆಭರಣಗಳು, ಬೆಳ್ಳಿಯ ಆಭರಣಗಳು ಹಾಗೂ ನಗದು ಹಣವನ್ನು ಜಪ್ತಪಡಿಸಿಕೊಳ್ಳಲಾಗಿದೆ.

ಕಾರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ಶಿವಪ್ರಕಾಶ ದೇವರಾಜು. ಐಪಿಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಶ್ರೀ ಎಸ್. ಬದರಿನಾಥ, ಮತ್ತು ಶಿರಸಿ ಡಿ.ಎಸ್.ಪಿ. ಶ್ರೀ ಜಿ. ಟಿ. ನಾಯಕ ರವರ ಮಾರ್ಗದರ್ಶನದಲ್ಲಿ ಮುಂಡಗೋಡ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರಾದ ಶ್ರೀ ಪ್ರಭುಗೌಡ. ಡಿ. ಕೆ, ಮಹಿಳಾ ಪಿ.ಎಸ್.ಐ. ಶ್ರೀಮತಿ ಮೋಹಿನಿ ಶೆಟ್ಟಿ. ಪಿ.ಎಸ್.ಐ. ಶ್ರೀ ಬಸವರಾಜ ಮಬನುರ, ಎ.ಎಸ್.ಐ. ಅಶೋಕ ರಾಠೋಡ, ಎ.ಎಸ್.ಐ. ಶ್ರೀ ಖೀರಪ್ಪಾ ಘಟಕಾಂಬಳೆ, ಎ.ಎಸ್.ಐ. ಶ್ರೀ ಶೇಡಜಿ ಚವ್ಹಾಣ ಹಾಗೂ ಸಿಬ್ಬಂದಿಯವರಾದ ಧರ್ಮರಾಜ ನಾಯ್ಕ, ರಾಘವೇಂದ್ರ ನಾಯ್ಕ, ಭಗವಾನ ಗಾಂವಕರ, ವಿನೋದಕುಮಾರ, ಜಿ. ಬಿ. ಅರುಣ ಬಾಗೇವಾಡಿ, ಶರತ ದೇವಳಿ, ತಿರುಪತಿ ಚೌಡಣ್ಣವರ, ವಿವೇಕ ಪಟಗಾರ ಇವರು ಆರೋಪಿಯನ್ನು ಹಿಡಿದು ಹಲವು ವರ್ಷಗಳಿಂದ ಆದ ಮನೆಕಳ್ಳತನ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿರುತ್ತಾರೆ. ಈ ಕಾರ್ಯವನ್ನು ಮಾನ್ಯ ಕಾರವಾರ ಜಿಲ್ಲಾ ಪೊಲೀಸ್ ಅಧೀಕ್ಷಕರು ಶ್ಲಾಘಿಸಿರುತ್ತಾರೆ.

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಇಂದಿನ ಸುದ್ದಿ…samajamukhi.net-news-round 11-04-25 ಒಕ್ಕಲಿಗರ ಬೃಹತ್‌ ಸಮಾವೇಶ,ಬೇಸಿಗೆ ಶಿಬಿರ ಪ್ರಾರಂಭ,ಕೃಷಿ ಇಲಾಖೆಯಸೌಲತ್ತು ವಿತರಣೆ,ಬಿ.ಜೆ.ಪಿ.ಗೆ ಜಾಡಿಸಿದ ಭೀಮಣ್ಣ

ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟಿಸಿದ ಬಿ.ಜೆ.ಪಿ. ಕಾಂಗ್ರೆಸ್‌ ನಾಯಕರು ಮತ್ತು ಪಕ್ಷವನ್ನು ಗುರಿಯಾಗಿಸಿ ದೂಷಿಸಿದ್ದಾರೆ. ಬಿ.ಜೆ.ಪಿ. ಮುಖಂಡರ ಬಾಯಿಂದ ಮುಸ್ಲಿಂ ವಿರೋಧದ ಜೊತೆಗೆ...

ಮಾರಿ ಜಾತ್ರೆ ಮುಕ್ತಾಯ…. ಮುಂಜಾನೆವರೆಗೆ ವಿಸರ್ಜನಾ ಮೆರವಣಿಗೆ , ಮತ್ತೆ ಮಳೆ! & ಇತರೆ…samajamukhi.net news round 09-04-25

ಸುದ್ದಿ,ವಿಡಿಯೋಗಳಿಗಾಗಿ ನೋಡಿ, samajamukhi.net news portal, samaajamukhi youtube chAnnel, samaajamukhi.net fb page ನಮ್ಮ ಘಟಕಗಳನ್ನು subscribe ಆಗಿ ಪ್ರೋತ್ಸಾಹಿಸಿ, ಜಾಹೀರಾತಿಗಾಗಿ ಸಂಪರ್ಕಿಸಿರಿ...

ಶುಕ್ರವಾರ ಸಿದ್ಧಾಪುರದಲ್ಲಿ ಒಕ್ಕಲಿಗರ ಬೃಹತ್‌ ಕಾರ್ಯಕ್ರಮ

ಸಿದ್ದಾಪುರ: ಸಿದ್ದಾಪುರ ತಾಲ್ಲೂಕಾ ಕರೆ ಒಕ್ಕಲಿಗರ ಸಂಘದಿಂದ ಏ.11 ರಂದು ತಾಲ್ಲೂಕಿನ ಹಲಗಡಿಕೊಪ್ಪದಲ್ಲಿ ಕರೆ ಒಕ್ಕಲಿಗರ ಸಮುದಾಯ ಭವನ ಶಂಕುಸ್ಥಾಪನಾ ಕಾರ್ಯಕ್ರಮ ಹಮ್ಮಿಕ್ಕೊಂಡಿದ್ದು, ಶ್ರೀ...

samajamukhi.net news round….ಉಂಚಳ್ಳಿ ಜಲಪಾತದ ಬಳಿ ಎನ್.ಎಸ್.ಎಸ್.‌ ಶ್ರಮದಾನ,ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?

ಇನ್ಮುಂದೆ ವಿಧಾನಸೌಧ ವೀಕ್ಷಣೆಗೂ ಶುಲ್ಕ: ಎಷ್ಟು…?: ಇಲ್ಲಿದೆ ಮಾಹಿತಿ ಆಡಳಿತ ಶಕ್ತಿಕೇಂದ್ರ ವಿಧಾನಸೌಧಕ್ಕೆ ಶಾಶ್ವತ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಲೋಕಾರ್ಪಣೆಗೊಳಿಸಿದ ಬೆನ್ನಲ್ಲೇ...

ಸ್ತ್ರೀ & ಕವಿತೆ ಇಲ್ಲದಿದ್ದರೆ… ಬದುಕಿಲ್ಲ

ಕವಿತೆ ಜೀವಪರ ಕಾವ್ಯ ಕ್ಷಮಿಸುವ,ಸಹಿಸುವ,ಹೋರಾಟಕ್ಕೆ ಉತ್ತೇಜಿಸುವ ಶಕ್ತಿ ಹೊಂದಿದೆ ಎಂದು ಸಾಹಿತಿ ಕೆ.ಬಿ. ವೀರಲಿಂಗನಗೌಡ ಹೇಳಿದ್ದಾರೆ. ಸಿದ್ಧಾಪುರದ ಕ.ಸಾ.ಪ. ಇಲ್ಲಿಯ ಹೊಸೂರಿನ ಎಂ.ಕೆ. ನಾಯ್ಕ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *