left-right!-ಬಿಹಾರ ಚುನಾವಣಾ ಫಲಿತಾಂಶ: ಚಿಗುರಿದ ಎಡಪಕ್ಷಗಳು; ಸ್ಪರ್ಧಿಸಿದ್ದ 29 ಕ್ಷೇತ್ರಗಳ ಪೈಕಿ 18ರಲ್ಲಿ ಮುನ್ನಡೆ

ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು ಸುತ್ತಿನ ಮತಗಳ ಎಣಿಕೆ ನಂತರ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ 29 ಸ್ಥಾನಗಳ ಪೈಕಿಯಲ್ಲಿ 18 ಕ್ಷೇತ್ರಗಳಲ್ಲಿ ಎಡ ಪಕ್ಷಗಳು ಮುನ್ನಡೆ ಕಾಯ್ದುಕೊಂಡಿವೆ.

left_parties1

ಪಾಟ್ನಾ: ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಕೆಲವು ಸುತ್ತಿನ ಮತಗಳ ಎಣಿಕೆ ನಂತರ ಬಿಹಾರ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ 29 ಸ್ಥಾನಗಳ ಪೈಕಿಯಲ್ಲಿ 18 ಕ್ಷೇತ್ರಗಳಲ್ಲಿ ಎಡ ಪಕ್ಷಗಳು ಮುನ್ನಡೆ ಕಾಯ್ದುಕೊಂಡಿವೆ.

ಪಕ್ಷದ ಸದಸ್ಯರ ಭಿನ್ನಾಭಿಪ್ರಾಯದ ಹೊರತಾಗಿಯೂ ಆರ್‌ಜೆಡಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಮೂರು ಎಡಪಕ್ಷಗಳಿಗೆ 29 ಸ್ಥಾನಗಳನ್ನು ತೇಜಶ್ವಿ ಯಾದವ್ ನೀಡಿದ್ದರು. ಸಿಪಿಐ(ಎಂ)ಗೆ ನಾಲ್ಕು, ಸಿಪಿಐಗೆ ಆರು ಮತ್ತು ಸಿಪಿಐ-ಎಂಎಲ್ ಗೆ 19 ಸ್ಥಾನಗಳನ್ನು ನೀಡಲಾಗಿತ್ತು. 2015ರ ವಿಧಾನಸಭಾ ಚುನಾವಣೆಯಲ್ಲಿ ಆರ್ ಜೆಡಿ ಗೆದ್ದಿ ದ್ದ ಕೆಲವು ಕ್ಷೇತ್ರಗಳು ಇದರಲ್ಲಿ ಸೇರಿವೆ.

ಚುನಾವಣಾ ಆಯೋಗದ ವೆಬ್ ಸೈಟ್ ಪ್ರಕಾರ, ಸಿಪಿಐ(ಎಂ) ಮತ್ತು ಸಿಪಿಐ ತಲಾ ಮೂರು ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿದ್ದು, ಸಿಪಿಐ-ಎಂಎಲ್ 12 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಇನ್ನೂ ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವಿದೆ. ಇದೊಂದು ವಿಭಿನ್ನ ರೀತಿಯ ಚುನಾವಣೆಯಾಗಿದೆ. ಯುವ ಅಭ್ಯರ್ಥಿಗಳು, ವಿದ್ಯಾರ್ಥಿ ಮುಖಂಡರು, ರೈತ ಪರ ಹೋರಾಟಗಾರರು, ಕಾರ್ಮಿಕರು ತುಂಬಾ ಶ್ರಮಿಸಿರುವುದಾಗಿ ಸಿಪಿಐ- ಎಂಎಲ್  ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಹೇಳಿದ್ದಾರೆ. 

ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿಯೊಂದಿಗೆ ಎಡಪಕ್ಷಗಳು ಚುನಾವಣೆಯನ್ನು ಎದುರಿಸಿದ್ದು, ಮೂರು ಪಕ್ಷಗಳ ಮುನ್ನಡೆ ಮಹಾಘಟ್ ಬಂಧನ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ನೆರವಾಗಲಿದೆ ಎಂದು ಎಡಪಕ್ಷಗಳ ಮುಖಂಡರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಗಾಂಧಿ ಜಯಂತಿ… ಚಿತ್ರ-ಸುದ್ದಿಗಳು & ವಿಡಿಯೋಗಳು….

ಕರ್ನಾಟಕ ರಕ್ಷಣಾ ವೇದಿಕೆ ಜನಧ್ವನಿ ಸದಸ್ಯರು ಸಿದ್ದಾಪುರ ತಾಲೂಕಿನ 19 ಬಸ್‌ ನಿಲ್ಧಾಣಗಳನ್ನು ಸ್ವಚ್ಛಗೊಳಿಸಿ ಗಾಂಧಿ ಜಯಂತಿ ಆಚರಿಸಿದರು. ಸರ್ಕಾರಿ ಪ.ಪೂ.ಕಾಲೇಜ್‌ ನಾಣಿಕಟ್ಟಾದ ಗಾಂಧಿಜಯಂತಿ...

ಸಾಹಿತಿಗಳು, ಹೋರಾಟಗಾರರಿಗೆ ಸಾವಿಲ್ಲ….ಹಾವಿನ ಹಂದರದಿಂದ ಹೂವ ತಂದವರು ಬಿಡುಗಡೆ

ಸಾಹಿತಿಗಳು ಮತ್ತು ಹೋರಾಟಗಾರರಿಗೆ ಸಾವೇ ಇಲ್ಲ. ಅವರು ಅವರ ಕೃತಿಗಳ ಮೂಲಕ ಸಾವಿನ ನಂತರ ಕೂಡಾ ಚಿರಂಜೀವಿಗಳಾಗಿ ಜನಮಾನಸದಲ್ಲಿ ಉಳಿಯುತ್ತಾರೆ ಎಂದಿರುವ ಕ.ಸಾ.ಪ. ರಾಜ್ಯಾಧ್ಯ...

ಇಂದಿನ ಅಪಸವ್ಯಗಳಿಗೆ ಅಂದಿನ ಗಾಂಧಿ ಪರಿಹಾರ

ವೈಯಕ್ತಿಕ ನೈತಿಕತೆ, ಸಾಮಾಜಿಕ ಶಿಸ್ತು,ಸಾರ್ವಜನಿಕ ಸಿಗ್ಗಿನ ಬಗ್ಗೆ ಪ್ರತಿಪಾದಿಸಿದ ಮಹಾತ್ಮಾಗಾಂಧಿಜಿ ಇಂದಿನ ಸಮಸ್ಯೆ,ಸಾಮಾಜಿಕ ಅಪಸವ್ಯಗಳಿಗೆ ಅಂದೇ ಪರಿಹಾರ ಸೂಚಿಸಿದ್ದರು. ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್.‌...

ಹಲಗೇರಿಯ ರೇಪ್‌ ಆರೋಪಿಗೆ ಹತ್ತು ವರ್ಷಗಳ ಕಠಿಣ ಶಿಕ್ಷೆ, ದಂಡ

ಸಿದ್ಧಾಪುರ ಹಲಗೇರಿಯ ವೀರಭದ್ರ ತಿಮ್ಮಾ ನಾಯ್ಕ ನಿಗೆ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಹತ್ತು ವರ್ಷಗಳ ಕಠಿಣ ಶಿಕ್ಷೆ ಮತ್ತು ೩೦...

ವಿಭಾಗ ಮಟ್ಟದ ವಾಲಿಬಾಲ್‌ ಪಂದ್ಯಾವಳಿ, ಆಮಂತ್ರಣ ಪತ್ರಿಕೆ ಬಿಡುಗಡೆ

ಸಿದ್ದಾಪುರ: ಅಕ್ಟೋಬರ 7 ಮತ್ತು 8 ರಂದು ಸಿದ್ದಾಪುರದ ನೆಹರೂ ಮೈದಾನದಲ್ಲಿ ನಡೆಯಲಿರುವ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳ ಬೆಳಗಾವಿ ವಿಭಾಗ ಮಟ್ಟದ ಹೊನಲು-ಬೆಳಕಿನ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *