corona india today-ಕರೋನಾಮುಕ್ತವಾಗುವತ್ತ ಭಾರತದ ದಾಪುಗಾಲು

ಸತತ 9ನೇ ದಿನವೂ ದೇಶದಲ್ಲಿ ತಗ್ಗಿದ ಕೊರೋನಾ ಆರ್ಭಟ: ದೇಶದಲ್ಲಿಂದು 30 ಸಾವಿರಕ್ಕಿಂತ ಕಡಿಮೆ ಕೇಸ್ ಪತ್ತೆ

ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ದಿನಗಳಿಂದ ನಿತ್ಯ 50,000ಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗುತ್ತಿರುವುದು ಆಶಾದಾಯಕವಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆವರೆಗಿನ 24 ಗಂಟೆಯ ಅವಧಿಯಲ್ಲಿ ದೇಶದಲ್ಲಿ 30 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. 

File photo

ನವದೆಹಲಿ: ಅತ್ತ ಯುರೋಪ್ ಮತ್ತು ಅಮೆರಿಕಾದಲ್ಲಿ ನಿತ್ಯ ಕೊರೋನಾ ಪ್ರಕರಣಗಳ ಸಂಖ್ಯೆ ಆತಂಕಕಾರಿಯಾಗಿ ಏರಿಕೆಯಾಗುತ್ತಿದ್ದರೆ, ಭಾರತದಲ್ಲಿ ಕಳೆದ 9 ತಿನಗಳಿಂದ ನಿತ್ಯ 50,000ಕ್ಕಿಂತ ಕಡಿಮೆ ಪ್ರಕರಣಗಳು ದಾಖಲಾಗುತ್ತಿರುವುದು ಆಶಾದಾಯಕವಾಗಿದೆ. ಮಂಗಳವಾರ ಬೆಳಿಗ್ಗೆ 8 ಗಂಟೆವರೆಗಿನ 24 ಗಂಟೆಯ ಅವಧಿಯಲ್ಲಿ ದೇಶದಲ್ಲಿ 30 ಸಾವಿರಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ. 

ದೇಶದಲ್ಲಿಂದು 29,164 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 88,74,291ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇನ್ನು ದೇಶದಲ್ಲಿ ಸಾವಿನ ಸಂಖ್ಯೆ ಕೂಡ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ನಿನ್ನೆ 449 ಮಂದಿ ಸೋಂಕಿನಿಂದ ಸಾವನ್ನಪ್ಪಿರುವುದು ವರದಿಯಾಗಿದೆ. ದೇಶದಲ್ಲಿ ಈ ವರೆಗೂ ಮಹಾಮಾರಿ ಆರ್ಭಟಕ್ಕೆ ಒಟ್ಟು  1,30,519 ಮಂದಿ ಬಲಿಯಾಗಿದ್ದಾರೆ.
 
ಈ ನಡುವೆ ದೇಶದಲ್ಲಿ ಪತ್ತೆಯಾಗಿರುವ ಒಟ್ಟಾರೆ 88,74,291 ಮಂದಿ ಸೋಂಕಿತರ ಪೈಕಿ ನಿನ್ನೆ ಒಂದೇ ದಿನ 40,791 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ದೇಶದಲ್ಲಿ ಸೋಂಕಿನಿಂತ ಚೇತರಿಸಿಕೊಂಡವರ ಸಂಖ್ಯೆ 82,90,371ಕ್ಕೆ ಏರಿಕೆಯಾಗಿದೆ. ಇದರೊಂದಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 4,53,401ಕ್ಕೆ ಇಳಿಕೆಯಾಗಿದೆ. 

ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 8,44,382 ಸ್ಯಾಂಪಲ್ಸ್ ಗಳನ್ನು ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ದೇಶದಲ್ಲಿ ಈ ವರೆಗೂ 12,65,42,907 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *