

ಡಿಕೆ ಶಿವಕುಮಾರ್ ಆಹ್ವಾನಿಸಿದ್ದಾರೆ: ಕಾಂಗ್ರೆಸ್ ಸೇರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ; ಮಧು ಬಂಗಾರಪ್ಪ
ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು

ಕೋಲಾರ: ‘ನಾನು ಇನ್ನೂ ಜೆಡಿಎಸ್‌ನಲ್ಲಿಯೇ ಇದ್ದೇನೆ. ಆದರೆ, ಪಕ್ಷದ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ತೊಡಗಿಸಿಕೊಳ್ಳುತ್ತಿಲ್ಲ. ಕಾಂಗ್ರೆಸ್ ಸೇರುವ ಬಗ್ಗೆ ನಿರ್ಧಾರ ಮಾಡಿಲ್ಲ’ ಎಂದು ಮಾಜಿ ಶಾಸಕ ಮಧು ಬಂಗಾರಪ್ಪ ಸ್ಪಷ್ಟಪಡಿಸಿದರು
ಕಾಂಗ್ರೆಸ್ ಸೇರುವಂತೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಹ್ವಾನಿಸಿದ್ದು, ಇನ್ನೂ ಯಾವುದೇ ತೀರ್ಮಾನ ಕೈಗೊಂಡಿಲ್ಲ. “ಜೆಡಿಎಸ್ ಪಕ್ಷದಲ್ಲಿ ಸಹಜವಾಗಿಯೇ ಗೊಂದಲವಿದೆ. ಪಕ್ಷ ಅಧಿಕಾರದಲ್ಲಿದ್ದಾಗ ನಮ್ಮವರಿಗೇ ಸ್ಥಾನಮಾನ ನೀಡಲಿಲ್ಲ. ಹೀಗಾಗಿಯೇ ವಿಶ್ವನಾಥ್ ಅವರು ಪಕ್ಷ ಬಿಟ್ಟು ಹೋದರು,” ಎಂದ ಅವರು, ತಾವು ಮಾತ್ರವಲ್ಲದೆ ಜೆಡಿಎಸ್ ಪಕ್ಷವೇ ಸುಮ್ಮನಾಗಿ ಕುಳಿತಿದೆ ಎಂದರು.
ಮುಖ್ಯಮಂತ್ರಿಗಳ ಮಕ್ಕಳು ನಿಯತ್ತಾಗಿ ಮುಂದೆ ಹೋಗಬೇಕೇ ಹೊರತು, ಅಡ್ಡದಾರಿಯಲ್ಲಿ ಹೋಗಬಾರದು. ನಮ್ಮ ತಂದೆಯವರು ನಮಗೆ ಕೆಟ್ಟ ದಾರಿಯಲ್ಲಿ ಹೋಗುವುದನ್ನು ಹೇಳಿಕೊಟ್ಟಿಲ್ಲ. ಒಳ್ಳೆಯ ದಾರಿಯಲ್ಲಿ ಹೋದ ಪರಿಣಾಮ ನಾಲ್ಕು ಬಾರಿ ಸೋತಿದ್ದೇನೆ ಎಂದರು. (kpc)
