ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜು ಆರಂಭ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ

ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂ ರಪ್ಪ ತಿಳಿಸಿದ್ದಾರೆ.

CM BS Yediyurappa

ಬೆಂಗಳೂರು: ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಲಹಾ ಸಮಿತಿ ವರದಿಯನ್ನು ಆಧರಿಸಿದ ಡಿಸೆಂಬರ್ ಅಂತ್ಯದವರೆಗೆ ಶಾಲಾ ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿಂದು ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಬಿಬಿಎಂಪಿ, ಗ್ರಾಮೀಣಾಭಿವೃದ್ದಿ ಇಲಾಖೆ, ಸಾರಿಗೆ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಚೆರ್ಚೆ ನಡೆಸಲಾಗಿದ್ದು, ಆರೋಗ್ಯ ಇಲಾಖೆ ಮತ್ತು ತಾಂತ್ರಿಕ ಸಮಿತಿ ನೀಡಿರುವ ವರದಿಯನ್ನು ಸುಧೀರ್ಘವಾಗಿ ಚೆರ್ಚೆ ನಡೆಸಲಾಗಿದೆ.

ಚಳಿಗಾಲದ ಹಿನ್ನಲೆಯಲ್ಲಿ ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಸಮಿತಿ ವರದಿ ನೀಡಿದೆ. ಅಲ್ಲದೆ, ನವೆಂಬರ್ ಅಂತ್ಯ ಹಾಗೂ ಡಿಸೆಂಬರ್ ತಿಂಗಳಲ್ಲಿ ಕೋವಿಡ್ 19 ಎರಡನೆ ಅಲೆ ಕಂಡುಬರುವ  ಸಾಧ್ಯತೆ ಹಿನ್ನಲೆಯಲ್ಲಿ ಶಾಲಾ ಕಾಲೇಜುಗಳನ್ನು ಆರಂಭಿ ಸದೆ ಹಾಲಿ ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.

ಡಿಸೆಂಬರ್ ಮೂರನೆ ವಾರ ಮತ್ತೊಮ್ಮೆ ಸಭೆ ಸೇರಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಆರೋಗ್ಯ ಇಲಾಖೆಗಳ ಅಭಿಪ್ರಾಯಗಳನ್ನು ಪಡೆದು ಶಾಲೆ ಆರಂಭಿಸಬೇಕೆ ಅಥವಾ ಬೇಡವೇ ಎಂಬುದರ ಬಗ್ಗೆ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.

ಈಗಾಗಲೇ ಅಂತಿಮ ವರ್ಷದ ಪದವಿ ಕಾಲೇಜುಗಳು ಆರಂಭವಾಗಿವೆ. ಶಾಲೆಗಳನ್ನು ಆರಂಭಿಸುವ ಚಿಂತನೆಯಿದೆ. ಆದರೆ ಶಾಲೆ ಆರಂಭಕ್ಕೂ ಮುನ್ನ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಸಂಬಂಧಿಸಿದಂತೆ ಅಭಿಪ್ರಾಯ ಸಂಗ್ರಹಿಸಲು ಅಧಿಕಾರಿಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಕೇಳಿ ಬರುವ ಸಲಹೆ – ಸೂಚನೆ ಆಧಾರದ ಮೇಲೆ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದಿದ್ದಾರೆ. 

ಸದ್ಯಕ್ಕೆ ಶಾಲೆ ಆರಂಭ ಬೇಡ: ಸಚಿವ ಡಾ. ಕೆ.ಸುಧಾಕರ್ ಸಲಹೆ
ಕೋವಿಡ್ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭಿಸುವುದು ಸೂಕ್ತವಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಸಲಹೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ನಡೆದ ಶಿಕ್ಷಣ ಇಲಾಖೆಯ ಸಭೆಯಲ್ಲಿ,ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ಪುನರಾರಂಭ ಬೇಡ ಎಂದು ತೀರ್ಮಾನಿ ಸಲಾಯಿತು. ಈ ಸಭೆಯಲ್ಲಿ ಆನ್ ಲೈನ್ ಮೂಲಕ ಪಾಲ್ಗೊಂಡ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಕೋವಿಡ್ 19 ತಾಂತ್ರಿಕ ಸಲಹಾ ಸಮಿತಿಯ ಶಿಫಾರಸು ಹಾಗೂ ತಮ್ಮ ಅಭಿಪ್ರಾಯವನ್ನು ತಿಳಿಸಿದರು.

ಡಿಸೆಂಬರ್ ನ ಚಳಿಗಾಲ ಸೋಂಕು ಹರಡಲು ಅನುಕೂಲ ಮಾಡಿಕೊಡಬಹುದು.ಕೊರೊನಾದ ಎರಡನೇ ಅಲೆಯೂ ಬರಲಿದೆ ಎಂಬ ಸುದ್ದಿಯೂ ಇರುವುದರಿಂದ ಮುಂದಾಲೋಚನೆ ಮಾಡಬೇಕಿದೆ.ಈ ಕುರಿತು ತಾಂತ್ರಿಕ ಸಲಹಾ ಸಮಿತಿಯ ಸಭೆಯಲ್ಲಿ ಕೂಡ ಚರ್ಚೆಯಾಗಿದ್ದು, ಈಗಾಗಲೇ ಸಭೆಯ ನಿರ್ಣಯವನ್ನು ಸರ್ಕಾರಕ್ಕೆ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ ನಲ್ಲಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜು ತೆರೆಯುವುದು ಬೇಡ ಎಂದು ಸಚಿವರು ಸಲಹೆ ನೀಡಿದರು.

ಶಾಲೆ ಪುನರಾರಂಭಕ್ಕೆ ಸಂಬಂಧಿಸಿದಂತೆ, ಡಿಸೆಂಬರ್ 3ನೇ ವಾರದಲ್ಲಿ ಸಭೆ ನಡೆಸಿ,ಅವಲೋಕನ ಮಾಡಿ ನಿರ್ಧಾ ರ ತೆಗೆದುಕೊಳ್ಳಬಹುದು. ಆ ಸಮಯದಲ್ಲಿ ಕೋವಿಡ್ ಪರಿಸ್ಥಿತಿ ನೋಡಿಕೊಂಡು ತೀರ್ಮಾನ ಕೈಗೊಳ್ಳಬಹುದು ಎಂದು ಸಚಿವರು ಸಭೆಗೆ ತಿಳಿಸಿದರು.ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹಾಗೂ ಹಿರಿ ಯ ಅಧಿಕಾರಿಗಳು ಸಭೆಯಲ್ಲಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು)...

ksrtc -ಕೆಎಸ್‌ಆರ್‌ಟಿಸಿ ನೌಕರರು ನಮ್ಮ ನಡುವಿನ ಯೋಧರು: ಶಾಸಕ ಭೀಮಣ್ಣ ನಾಯ್ಕ ಶ್ಲಾಘನೆ

ಸಿದ್ದಾಪುರ: “ಕೆಎಸ್‌ಆರ್‌ಟಿಸಿ ಚಾಲಕರು ಮತ್ತು ನಿರ್ವಾಹಕರು ತಮ್ಮ ಕುಟುಂಬವನ್ನು ಮರೆತು, ಪ್ರಯಾಣಿಕರ ಸುರಕ್ಷತೆಯನ್ನೇ ಗುರಿಯಾಗಿಸಿಕೊಂಡು ಪ್ರಾಮಾಣಿಕವಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ನಿಜಕ್ಕೂ ನಮ್ಮೆಲ್ಲರ ನಡುವಿನ...

adake-bhavana- ಕಾಗೇರಿ-ಭೀಮಣ್ಣ ಗುಟ್ಟಾಗಿ ಹೊಂದಾಣಿಕೆ?!

ರಾಜಕೀಯ, ಪಕ್ಷ, ಒಟ್ಟಾರೆ ಸಮಾಜದಲ್ಲಿ ಹೊಂದಾಣಿಕೆ, ಸಮನ್ವಯ ಅಗತ್ಯ ಎಂದು ಪ್ರತಿಪಾದಿಸಿರುವ ಶಾಸಕ ಭೀಮಣ್ಣ ನಾಯ್ಕ ತಾವು ಮತ್ತು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಶಿರಳಗಿ ಗ್ರಾ.ಪಂ. ಎರಡು ಪ್ರಕರಣಗಳು…. ಯಾರದ್ದೋ ಲಾಭಕ್ಕೆ ಯಾರಿಗೋ ಬರೆ! # love jihAd! #

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಡೆದ ಎರಡು ಪ್ರಕರಣಗಳು ಪಿಸುಮಾತು ಬಹುದೂರ ಕೇಳಿಸುತ್ತದೆ ಎನ್ನುವಂತೆ ಸದ್ದು ಮಾಡಿವೆ. ಪ್ರಕರಣ ಒಂದು- ಶಿರಳಗಿ...

ಏಪ್ರಿಲ್ 14 ರಿಂದ ಕಾನಳ್ಳಿ ಕಾರ್ಯಕ್ರಮ….#ಊರಿಗೆ ಕಾಲಿಟ್ಟ ಹುಲಿ#

ಸಿದ್ದಾಪುರ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಸಿದ್ದಾಪುರ ತಾಲೂಕಿನ ಕಾನಳ್ಳಿಯ ಶ್ರೀ ಚೌಡೇಶ್ವರಿ ದೇವಾಲಯದ 30ನೇ ವಾರ್ಷಿಕೋತ್ಸವ ಎಪ್ರಿಲ್ 14 ರಿಂದ 16 ರವರೆಗೆ...

Latest Posts

sslc ಸಿದ್ದಾಪುರ ರಾಜ್ಯಕ್ಕೇ ನಂ ೦೧ ? ೯೯.೭೫ ಫಲಿತಾಂಶ

ರಜತ್‌ ವಿನಾಯಕ ಶೇಟ್‌ (ಪ್ರಶಾಂತಿ ಪ್ರೌಢಶಾಲೆ)೬೨೨/ ಹಂಸಿನಿ ಮೋಹನ ಹೆಗಡೆ (ಪ್ರಶಾಂತಿ ಪ್ರೌಢಶಾಲೆ)೬೨೦/ ಮಾನ್ಯ ಕೃಷ್ಣಮೂರ್ತಿ ಭಟ್‌ ( ಕಾಳಿಕಾ ಭವಾನಿ ಆ.ಮಾ.ಶಾಲೆ ಕಾನಸೂರು) ೬೨೦/ ದಿಶಾ ರವಿ ನಾಯ್ಕ (ಸ.ಪ್ರೌ. ಹಾಳದಕಟ್ಟಾ) ೬೧೯/ ನಿಶಾ ಪರಮೇಶ್ವರ ಮಡಿವಾಳ ಸ.ಪ್ರೌ.ಶಾ.ಜಿಡ್ಡಿ ೬೧೭/ ಶಿಕ್ಷಣ ಮತ್ತು ಸಾಂಸ್ಕೃತಿಕವಾಗಿ ಮುಂದುವರಿದಿರುವ ಸಿದ್ಧಾಪುರ ತಾಲೂಕು ಅತಿ ಹೆಚ್ಚು ಜನ...

Recommended For You

About the Author: Kanneshwar Naik

Leave a Reply

Your email address will not be published. Required fields are marked *