ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ವಿಧಿವಶ

ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು ಬುಧವಾರ ವಿಧಿವಶರಾಗಿದ್ದಾರೆ. 

Ahmed Patel
1949ರ ಆ. 21ರಂದು ಗುಜರಾತ್‌ನಲ್ಲಿ ಜನಿಸಿದ್ದ ಅಹ್ಮದ್‌ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಆಗಿದ್ದರು.

ನವದೆಹಲಿ: ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು ಬುಧವಾರ ವಿಧಿವಶರಾಗಿದ್ದಾರೆ. 

ಕೆಲ ವಾರಗಳ ಹಿಂದಷ್ಟೇ ಅಹ್ಮದ್ ಪಟೇಲ್ ಅವರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಇದರಂತೆ ಗುರುಗ್ರಾಮದ ಮೆಡಂತಾ ಅಸ್ಪತ್ರೆಗೆ ದಾಖಲಾಗಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದಕ್ಕೂ ಮುನ್ನ ಫರೀದಾಬಾದ್’ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆಂದು ತಿಳಿದುಬಂದಿದೆ. 

ತಮಗೆ ಕೊರೋನಾ ಸೋಂಕು ತಗುಲಿರುವ ಕುರಿತು ಅಕ್ಟೋಬರ್ 1 ರಂದು ಸ್ವತಃ ಅಹ್ಮದ್ ಪಟೇಲ್ ಅವರೇ ಹೇಳಿಕೊಂಡಿದ್ದರು. ಅಲ್ಲದೆ ಹೋಮ್ ಐಸೋಲೇಷನ್ ನಲ್ಲಿರುವುದಾಗಿಯೂ ಮಾಹಿತಿ ನೀಡಿದ್ದರು. ಬಳಿಕ ಆರೋಗ್ಯದಲ್ಲಿ ಚೇತರಿಕೆಗಳು ಕಂಡು ಬರದ ಹಿನ್ನೆಲೆಯಲ್ಲಿ ಫರೀದಾಬಾದ್ ಆಸ್ಪತ್ರೆಗೆ ದಾಖಲಾಗಿದ್ದರು. ಆದರೂ ಚೇತರಿಕೆ ಕಂಡು ಬರದ ಹಿನ್ನೆಲಯೆಲ್ಲಿ ಮೆಡಂತಾ ಆಸ್ಪತ್ರೆಗೆ ದಾಖಲಾಗಿದ್ದರು. 

71 ವರ್ಷದ ಅಹ್ಮದ್ ಪಟೇಲ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಕಾಂಗ್ರೆಸ್ ಪಕ್ಷದ ಖಜಾಂಚಿಯಾಗಿದ್ದ ಅಹ್ಮದ್ ಪಟೇಲ್ ಅವರು, ಕಾಂಗ್ರೆಸ್’ನ ಹಿರಿಯ ನಾಯಕರು ಹಾಗೂ ಸೋನಿಯಾ ಗಾಂಧಿ ಕುಟುಂಬದ ಆಪ್ತರಾಗಿದ್ದರು. ಆಸ್ಪತ್ರೆಗೆ ದಾಖಲಾದಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಗೂ ಸಂಸದ ಶಶಿ ತರೂರ್ ಅವರು ಟ್ವೀಟ್ ಮಾಡಿ ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸಿದ್ದರು. 

1949ರ ಆ. 21ರಂದು ಗುಜರಾತ್‌ನಲ್ಲಿ ಜನಿಸಿದ್ದ ಅಹ್ಮದ್‌ ಪಟೇಲ್ ಲೋಕಸಭೆಗೆ 3 ಬಾರಿ ಆಯ್ಕೆಯಾಗಿದ್ದರು. 5 ಬಾರಿ ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. ಜೊತೆಗೆ ಸೋನಿಯಾಗಾಂಧಿ ರಾಜಕೀಯ ಕಾರ್ಯದರ್ಶಿ ಆಗಿದ್ದರು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು...

bhaarat jodo… ಯುವ ಸಂಘ ನೋಂದಣಿಗೆ ಶಾಸಕರ ಮನವಿ

ಸಿದ್ದಾಪುರ: ರಾಜ್ಯದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ರ ಮಹತ್ವಾಕಾಂಕ್ಷೆ ಭಾರತ್ ಜೋಡೋ ಯುವ ಸಂಘಗಳನ್ನು ತಕ್ಷಣ ನೊಂದಣಿ ಮಾಡಿಸಿಕೊಂಡು ಸರ್ಕಾರದ ಅನುದಾನ ಸದುಪಯೋಗ ಪಡಿಸಿಕೊಳ್ಳುವಂತೆ ಶಿರಸಿ-ಸಿದ್ದಾಪುರ...

ಶ್ರೇಷ್ಠ ಶಿಕ್ಷಕ ವಿರೂಪಾಕ್ಶಪ್ಪ ಮೇಟಿ

ಕೆ.ಪಿ.ಸಿ.ಸಿ ಯಿಂದ ನೀಡಲಾಗುವ ಮಾಜಿ ಪ್ರಧಾನಿ ಶ್ರೀ ರಾಜೀವ ಗಾಂಧಿ ರಾಜ್ಯ ಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ ಉಪನ್ಯಾಸಕ ವಿರುಪಾಕ್ಷಪ್ಪ ಮೇಟಿ ಸಿದ್ದಾಪುರ,ಸೆ,೩:-...

kolsirsi vss issue…part -04 ನಾನೇ ಹೊಣೆ ನಾನೇ ಜವಾಬ್ದಾರಿ ಎಂದ ಸಿಇಒ ಮಾಳವಿ….

ಕೋಲ ಶಿರಸಿ vss ನ ಪ್ರಕರಣ ಹಗರಣದ ಸ್ವರೂಪ ಪಡೆದಿದೆ… ಈ ಅಪರಾ ತಪರಾ ರೂವಾರಿ ಸಿಇಒ/ ಸೆಕ್ರೆಟರಿ ಎಂಬುದು ನಿರ್ವಿವಾದ. ಈ ಬಗ್ಗೆ...

ಕೋಲಶಿರಸಿ vss ಆಡಳಿತ ಸಮೀತಿ & ಸಿಇಒ ವಿರುದ್ಧ ಇಲಾಖೆಗೆ ದೂರು

ಸಿದ್ದಾಪುರ ತಾಲೂಕಿನ ಕೋಲಶಿರಸಿ vss ನಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ಹಗರಣದ ಹಿಂದೆ ಇರುವ ಹಾಲಿ ಆಡಳಿತ ಮಂಡಳಿ & ಸಿಇಒ/ ಕಾರ್ಯದರ್ಶಿ ಗಳ...

Latest Posts

ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ..! ಜಾಗೃತೆ..

ರೈತರ ಅನುಕೂಲಕ್ಕಿರುವ ಗ್ರಾಮೀಣ ಸೇವಾ ಸಹಕಾರಿ ಸಂಘಗಳು ಮುಳುಗುತ್ತಿವೆ ಎನ್ನುವುದಕ್ಕೆ ಅನೇಕ ದೃಷ್ಟಾಂತಗಳಿವೆ. ಆದರೆ ಸಹಕಾರಿ ಕ್ಷೇತ್ರ ನಿಯಂತ್ರಿಸುವವರು ತಮ್ಮ ಅನುಕೂಲಕ್ಕೆ ಸಂಘಗಳನ್ನು ಬಳಸಿಕೊಂಡು ಸಹಕಾರಿ ಕ್ಷೇತ್ರ ಜನಪರ ಎನ್ನುವ ಸುಳ್ಳು ಪ್ರಚಾರದಲ್ಲಿ ತೊಡಗಿದ್ದಾರೆ. ಸಿದ್ದಾಪುರ ಕೋಲಶಿರ್ಸಿ ಸೇವಾ ಸಹಕಾರಿ ಸಂಘದ ಬಹುಕೋಟಿ ಹಗರಣದ ನಂತರ ಒಂದೊಂದೇ ಗುಟ್ಟುಗಳು ರಟ್ಟಾಗತೊಡಗಿವೆ. ಸಿದ್ದಾಪುರದ ಪ್ರಮುಖ ಸಹಕಾರಿಗಳು,...

Recommended For You

About the Author: Kanneshwar Naik

Leave a Reply

Your email address will not be published. Required fields are marked *