kannada move world- ಕೆಜಿಎಫ್’ ತಯಾರಕರಿಂದ ಮತ್ತೊಂದು ಹೊಸ ಪ್ಯಾನ್-ಇಂಡಿಯಾ ಚಿತ್ರ!

ಈ ಹಿಂದೆ “ರಾಜಕುಮಾರ” “ಕೆಜಿಎಫ್ ಚಾಪ್ಟರ್ 1” ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ. , ಚಿತ್ರದ ನಿರ್ಮಾಪಕ ವಿಜಯ್ ಕಿರಗಂಡೂರ್ ಈ ಬಗ್ಗೆ ಮಾತನಾಡಿ “ಕೆಜಿಎಫ್ ಚಾಪ್ಟರ್ 1 ರ ನಮ್ಮ……

ಈ ಹಿಂದೆ “ರಾಜಕುಮಾರ” “ಕೆಜಿಎಫ್ ಚಾಪ್ಟರ್ 1” ನಂತಹಾ ಅದ್ಭುತ ಚಲನಚಿತ್ರಗಳನ್ನು ನೀಡಿದ ನಿರ್ಮಾಣ ಸಂಸ್ಥೆ ಇದೀಗ ಮತ್ತೊಂದು ಪ್ಯಾನ್-ಇಂಡಿಯಾ ಚಿತ್ರ ನಿರ್ಮಾಣಕ್ಕೆ ಮುಂದಾಗಿದೆ. ಐದು ಭಾಷೆಗಳಲ್ಲಿ ನಿರ್ಮಿಸಲಾಗುವ ಈ ಚಿತ್ರ ದೇಶವ್ಯಾಪಿ ಲಕ್ಷಾಂತರ ಪ್ರೇಕ್ಷಕರನ್ನು ತಲುಪಲಿದೆ. , ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂ ರ್ ಈ ಬಗ್ಗೆ ಮಾತನಾಡಿ “ಕೆಜಿಎಫ್ ಚಾಪ್ಟರ್ 1 ರ ನಮ್ಮ ಪ್ರಯತ್ನಗಳಿಗೆ ಪ್ರೇಕ್ಷಕರ ಪ್ರತಿಕ್ರಿಯೆ ನಮ್ಮ ಇಡೀ ತಂಡವನ್ನು ಬಹಳವಾಗಿ ಪ್ರೋತ್ಸಾಹಿಸಿತು. ನಮ್ಮ ಹೊಸ ಸಾಹಸದ ಬಗ್ಗೆ ನಾನು ಉತ್ಸುಕನಾಗಿದ್ದೇನೆ ಮತ್ತು ನೀವು ಇಲ್ಲಿಯವರೆಗೆ ನಮಗೆ ತೋರಿಸಿದ ಅದೇ ಪ್ರೀತಿಯಿಂದ ನಮ್ಮನ್ನು ಸ್ವಾಗತಿಸುತ್ತೀರಿ ಎಂದು ಭಾವಿಸುತ್ತೇನೆ! ” ಎಂದರು. 

ಚಿತ್ರದ ಶೀರ್ಷಿಕೆ ಹಾಗೂ ಪಾತ್ರವರ್ಗದ ಬಗ್ಗೆ ಇನ್ನೂ ಯಾವ ಮಾಹಿತಿ ಬಹುರಂಗಪಡಿಸಲಿಲ್ಲವಾದರೂ ಡಿಸೆಂಬರ್ 2ರಂದು ಈ ಬಗ್ಗೆ ಸರ್ ಪ್ರೈಸ್ಜ್ ಪ್ರಕಟಣೆ ಹೊರಬೀಳಲಿದೆ ಎಂದು ನಿರ್ಮಾಪಕರು ಹೇಳಿದ್ದಾರೆ.

ಈ ಹಿಂದೆ ಸೂಪರ್-ಸ್ಟಾರ್ ನಟರಾದ ಪುನೀತ್ ರಾಜ್‌ಕುಮಾರ್ “ನಿನ್ನಿಂದಲೆ” ಹಾಗೂ ಯಶ್ ಅವರ “ಮಾಸ್ಟರ್ ಪೀಸ್” ನಿರ್ಮಿಸಿದ್ದ ಪ್ರೊಡಕ್ಷನ್ ಹೌಸ್, 2018 ರಲ್ಲಿ ದೇಶಾದ್ಯಂತ ಪ್ರಚಾರಕ್ಕೆ ಬಂದಿದೆ. ಈ ಸಂಸ್ಥೆಯ “ಕೆಜಿಎಫ್ ಚಾಪ್ಟರ್ 1″ಯಶ್, ಪ್ರಶಾಂತ್ ನೀಲ್ ಮತ್ತು ವಿಜಯ್ ಕಿರಗಂಡೂರ್ ಮೂವರನ್ನು ಒಟ್ಟುಗೂಡಿಸಿತು. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿಯಲ್ಲಿ ಏಕಕಾಲದಲ್ಲಿ ಬಿಡುಗಡೆಯಾಗಿತ್ತು. ಅಲ್ಲದೆ ಬಿಡುಗಡೆಯಾದ ನಾಲ್ಕು ದಿನಗಳಲ್ಲಿ, ಈ ಚಿತ್ರವು ಸಾರ್ವಕಾಲಿಕ ಅತಿ ಹೆಚ್ಚು ಗಳಿಕೆ ಕಂಡ ನ್ನಡ ಚಿತ್ರ ಎಂಬ ದಾಖಲೆಯನ್ನು ಮುರಿಯಿತು.

ಇದಲ್ಲದೆ ಇದೇ ನಿರ್ಮಾಣ ಸಂಸ್ಥೆ ಪುನೀತ್ ಅಭಿನಯದ “ಯುವರತ್ನ” ಹಾಗೂ “ಕೆಜಿಎಫ್ ಚಾಪ್ಟರ್ 2” ಚಿತ್ರವನ್ನೂ ನಿರ್ಮಾಣ ಮಾಡಿದ್ದು ಅದೀಗ ಅಂತಿಮ ಹಂತದಲ್ಲಿದೆ. 

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *